ಕನ್ನಡ ಚಿತ್ರರಂಗದಲ್ಲಿ ಅತ್ಯುತ್ತಮ ಸಿನಿಮಾಗಳು ನಿರ್ಮಾಣ ಆಗುತ್ತಿವೆ. ಕಂಟೆಂಟ್ಗೆ ಹೆಚ್ಚು ಒತ್ತು ಕೊಡಲಾಗುತ್ತಿದೆ. ಹೊಸ ಬಗೆಯ ಸಿನಿಮಾಗಳ ಜೊತೆ ಜೊತೆಗೆ ಹೊಸಬರ ಎಂಟ್ರಿಯೂ ಆಗುತ್ತಿದೆ. ಅದರಂತೆ, ಹೊಸ ಪ್ರತಿಭೆಗಳ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾ ಥಿಯೇಟರ್ನಲ್ಲಿ ಕಮಾಲ್ ಮಾಡಿತ್ತು. ಪ್ರೇಕ್ಷಕರನ್ನು ಮನರಂಜಿಸುವಲ್ಲಿ ಯಶ ಕಂಡಿತ್ತು. ಜುಲೈ 21 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿದ್ದ ಚಿತ್ರಕ್ಕೆ ಭರಪೂರ ಮೆಚ್ಚುಗೆ ಸಿಕ್ಕಿತ್ತು. ಹೊಟ್ಟೆ ಹುಣ್ಣಾಗಿಸುವಂತೆ ನಕ್ಕು ನಲಿಸಿದ್ದ ತುಂಗಾ ಹಾಸ್ಟೆಲ್ ಬಾಯ್ಸ್ ಇದೀಗ ಒಟಿಟಿಯಲ್ಲಿ ಸದ್ದು ಮಾಡುತ್ತಿದ್ದಾರೆ. ಈಗಾಗಲೇ ಒಟಿಟಿಗೆ ಎಂಟ್ರಿ ಕೊಟ್ಟು, ಮತ್ತಷ್ಟು ಸಿನಿಪ್ರಿಯರನ್ನು ರಂಜಿಸುವ ಕೆಲಸ ಮಾಡುತ್ತಿದೆ.
ನಿತಿನ್ ಕೃಷ್ಣಮೂರ್ತಿ ಅವರ ಚೊಚ್ಚಲ ನಿರ್ದೇಶನದ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾಗೆ ಇಡೀ ಸ್ಯಾಂಡಲ್ವುಡ್ ಸಪೋರ್ಟ್ ಕೊಟ್ಟಿತ್ತು. ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಫಸ್ಟ್ ಲುಕ್ ಪೋಸ್ಟರ್ಗೆ ಚಾಲನೆ ನೀಡಿದ್ದರು. ಚಿತ್ರದಲ್ಲಿ ರಿಷಬ್ ಶೆಟ್ಟಿ, ಶೈನ್ ಶೆಟ್ಟಿ, ಪವನ್ ಕುಮಾರ್ ಹಾಗೂ ರಮ್ಯಾ ಗೆಸ್ಟ್ ಅಪಿಯರೆನ್ಸ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಇಡೀ ಚಿತ್ರರಂಗ ಬೆಂಬಲ ಕೊಟ್ಟಿದ್ದ ತುಂಗಾ ಹಾಸ್ಟೆಲ್ ಬಾಯ್ಸ್ ಬೆಳ್ಳಿತೆರೆಯಲ್ಲಿ ಮಿಂಚು ಹರಿಸಿದ್ದರು. ಸಿನಿರಸಿಕರನ್ನು ಚಿತ್ರಮಂದಿರಗಳಿಗೆ ಸೆಳೆದು ಚಪ್ಪಾಳೆ ಗಿಟ್ಟಿಸಿಕೊಂಡಿದ್ದ ಈ ಸಿನಿಮಾ ತೆಲುಗಿಗೂ ಡಬ್ ಆಗಿದೆ. ಹೊರ ದೇಶದಲ್ಲಿಯೂ ಉತ್ತಮ ರೆಸ್ಪಾನ್ಸ್ ಪಡೆದುಕೊಂಡಿದೆ.
ಇದನ್ನೂ ಓದಿ:ಭಾರತದಲ್ಲಿ 400, ವಿಶ್ವದಲ್ಲಿ 700: ಸಾವಿರ ಕೋಟಿ ರೂ. ಕಲೆಕ್ಷನ್ ಮಾಡುತ್ತಾ 'ಜವಾನ್'?!