ನಟ ರಿಷಬ್ ಶೆಟ್ಟಿ ಅವರ ಕಾಂತಾರ ಸಿನಿಮಾ ಈಗಾಗಲೇ ಸ್ಯಾಂಡಲ್ವುಡ್ನಲ್ಲಿ ಸೂಪರ್ ಹಿಟ್ ಆಗಿ ಬೇರೆ ಭಾಷೆಗಳಲ್ಲಿಯೂ ಅಬ್ಬರಿಸುತ್ತಿದೆ. ಇಂದು ಹಿಂದಿ ಭಾಷೆಯಲ್ಲಿ ಬಿಡುಗಡೆಯಾಗಿದ್ದು, ತೆಲುಗು, ತಮಿಳು, ಮಲೆಯಾಳಂ ಭಾಷೆಗಳಲ್ಲೂ ಶೀಘ್ರದಲ್ಲೇ ತೆರೆಕಾಣಲಿದೆ. ಇದೀಗ ಈ ಸಿನಿಮಾ IMDBನಲ್ಲಿ ಅತಿ ಹೆಚ್ಚು ರೇಟಿಂಗ್ ಪಡೆದ ಭಾರತೀಯ ಚಲನ ಚಿತ್ರವಾಗಿ ಹೊರಹೊಮ್ಮಿದೆ.
ಕಾಂತಾರ ಚಿತ್ರವನ್ನು ನಟ ರಿಷಬ್ ಶೆಟ್ಟಿ ಬರೆದು ನಿರ್ದೇಶಿಸಿದ್ದಾರೆ. ಶಿವ ಎನ್ನುವ ಪ್ರಮುಖ ಪಾತ್ರದಲ್ಲಿಯೂ ನಟಿಸಿದ್ದಾರೆ. ಚಿತ್ರದ ಕೊನೆಯಲ್ಲಿ ದೈವ ಪಾತ್ರಧಾರಿಯಾಗಿ ಅಬ್ಬರಿಸಿದ್ದಾರೆ. ಸಿನಿಮಾ ಎಲ್ಲೆಡೆ ಬಲು ಮೆಚ್ಚುಗೆ ಗಳಿಸುತ್ತಿದೆ. IMDBಯ ಇತ್ತೀಚಿನ ವರದಿ ಪ್ರಕಾರ, ಕಾಂತಾರ 10ರಲ್ಲಿ 9.6 ಸ್ಕೋರ್ ಮಾಡಿದೆ.