ಪಾಕಿಸ್ತಾನದ ಮಾಜಿ ಪ್ರಧಾನಿ, ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಮುಖ್ಯಸ್ಥ ಇಮ್ರಾನ್ ಖಾನ್ ಬಂಧನ ಖಂಡಿಸಿ ಪ್ರತಿಭಟನೆಗಳು ನಡೆಯುತ್ತಿದೆ. ಪ್ರತಿಭಟನಾಕಾರರು ಪೊಲೀಸರ ನಡುವೆ ಸಂಘರ್ಷ ಏರ್ಪಟ್ಟಿದೆ. ಈ ಸಂದರ್ಭದಲ್ಲಿ ಇಮ್ರಾನ್ ಖಾನ್ ಕುರಿತಾದ ಹಲವಾರು ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಪಾಕ್ ವಿಡಿಯೋಗೆ 'ದಿ ಕಾಶ್ಮೀರ್ ಫೈಲ್ಸ್' ಹಾಡು ಬಳಕೆ: ಪಾಕಿಸ್ತಾನ್ ರಾಜಕೀಯ ಅವ್ಯವಸ್ಥೆಯ ಹಿನ್ನೆಲೆಯಲ್ಲಿ ಇಮ್ರಾನ್ ಖಾನ್ ಅವರ ವಿಡಿಯೋವೊಂದು ಗಮನ ಸೆಳೆದಿದೆ. ಇಮ್ರಾನ್ ಖಾನ್ ನೇತೃತ್ವದ ರಾಜಕೀಯ ಪಕ್ಷ ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ (ಪಿಟಿಐ)ವಿವೇಕ್ ಅಗ್ನಿಹೋತ್ರಿ ನಿರ್ದೇಶನದ 'ದಿ ಕಾಶ್ಮೀರ್ ಫೈಲ್ಸ್' ಚಿತ್ರದ ಹಾಡನ್ನು ಬಳಸಿಕೊಂಡಿದ್ದಾರೆ. ಈ ಹಾಡು ಇರುವ ವಿಡಿಯೋಗಳು ವೈರಲ್ ಆಗುತ್ತಿದೆ. ತೆಹ್ರೀಕ್-ಎ-ಇನ್ಸಾಫ್ ಪಕ್ಷವನ್ನು ಗುಣಗಾನ ಮಾಡಲು, ಇಮ್ರಾನ್ ಖಾನ್ ಇರುವ ವಿಡಿಯೋದ ಹಿನ್ನೆಲೆಗೆ 'ದಿ ಕಾಶ್ಮೀರ್ ಫೈಲ್ಸ್' ಸಾಂಗ್ ಬಳಕೆ ಮಾಡಲಾಗಿದೆ.
ವಿವೇಕ್ ಅಗ್ನಿಹೋತ್ರಿಯವರ ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ಭಯೋತ್ಪಾದನೆ ಮತ್ತು ಕಣಿವೆ ಪ್ರದೇಶದಿಂದ ಕಾಶ್ಮೀರಿ ಪಂಡಿತರ ನಿರ್ಗಮನದ ಕುರಿತಾಗಿತ್ತು. ಇಂದು ವಿವೇಕ್ ಅಗ್ನಿಹೋತ್ರಿ ಅವರು ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ವಿಡಿಯೋವೊಂದನ್ನು ಶೇರ್ ಮಾಡುವ ಮೂಲಕ ಪರೋಕ್ಷವಾಗಿ ತೆಹ್ರೀಕ್-ಇ-ಇನ್ಸಾಫ್ ಅನ್ನು ವ್ಯಂಗ್ಯವಾಡಿದ್ದಾರೆ.
ವಿವೇಕ್ ಅಗ್ನಿಹೋತ್ರಿ ಟ್ವೀಟ್: "ಇಂಡಿಯನ್ ಸಿನಿಮಾದ ಶಕ್ತಿಯನ್ನು ನೋಡಿ. @ImranKhanPTI ಅಧಿಕೃತ ಖಾತೆಯು ದಿ ಕಾಶ್ಮೀರ್ ಫೈಲ್ಸ್ನ ಅಧಿಕೃತ ಹಾಡನ್ನು ಕಾನೂನುಬಾಹಿರವಾಗಿ ಬಳಸಿಕೊಂಡಿದೆ. ಇನ್ಸ್ಟಾಗ್ರಾಮ್ನಲ್ಲಿ ಶೇರ್ ಮಾಡಿರುವ ತನ್ನ ಅಧಿಕೃತ ವಿಡಿಯೋದಲ್ಲಿ ನಮ್ಮ ಹಾಡನ್ನು ಬಳಸಿಕೊಳ್ಳಲಾಗಿದೆ" ಎಂದು ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಟ್ವೀಟ್ ಮಾಡಿದ್ದಾರೆ.