ಚೆನ್ನೈ(ತಮಿಳುನಾಡು): ತಮಿಳು ನಟಿ ಸುನೈನಾ ಕಳೆದೆರಡು ದಿನಗಳಿಂದ ನಾಪತ್ತೆಯಾಗಿದ್ದು, ಮೊಬೈಲ್ ಸ್ವಿಚ್ಡ್ ಆಫ್ ಆಗಿದೆ. ಇದರಿಂದ ಅವರು ಅಪಹರಣಕ್ಕೆ ಒಳಗಾಗಿದ್ದಾರೆಯೇ ಎಂಬ ವಿಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. 2008ರಲ್ಲಿ 'ವಲಂದಿಲ್ ಕಲ್ತೇನೆ' ಚಿತ್ರದ ಮೂಲಕ ತಮಿಳು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ನಟಿ ಸುನೇನಾ ಮಾಸಿಲಾಮಣಿ ಅವರು ವಂಶಂ, ಚಿಲ್ಲು ಕರುಪಟ್ಟಿ ಮತ್ತು ಕೊನೆಯದಾಗಿ ಲಾಠಿ ಚಿತ್ರಗಳಲ್ಲಿ ನಟಿಸಿದ್ದಾರೆ. ಇವರು ಮಹಾರಾಷ್ಟ್ರ ಮೂಲದವರಾಗಿದ್ದು, ಕಳೆದ 15 ವರ್ಷಗಳಿಂದ ತಮಿಳು ಚಿತ್ರರಂಗದಲ್ಲಿ ನಟಿಸುತ್ತಿದ್ದಾರೆ.
ಅವರು ಪ್ರಸ್ತುತ "ಏರಾ ಪ್ರೊಡಕ್ಷನ್ಸ್" ನಿರ್ಮಾಣ ಸಂಸ್ಥೆಯಲ್ಲಿ ಡೊಮಿನ್ ಡಿಸಿಲ್ವಾ ನಿರ್ದೇಶನದಲ್ಲಿ "ರೆಜಿನಾ" ಚಿತ್ರದಲ್ಲಿ ನಟಿಸುತ್ತಿದ್ದರು. ಈ ಚಿತ್ರ ತಮಿಳು, ತೆಲುಗು, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಈ ವೇಳೆ ಟ್ವಿಟರ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ನಟಿ ಸುನೈನಾ ಕಳೆದೆರಡು ದಿನಗಳಿಂದ ನಾಪತ್ತೆಯಾಗಿದ್ದು, ಅವರನ್ನು ಅಪಹರಣ ಮಾಡಲಾಗಿದೆಯೇ? ಎಂಬ ಬಗ್ಗೆ ಎಲ್ಲೆಡೆ ಚರ್ಚೆ ನಡೆಯುತ್ತಿದೆ.
6 ದಿನಗಳ ಹಿಂದೆಯಷ್ಟೇ ಚೆನ್ನೈಗೆ ಬಂದಿದ್ದ ಸುನೈನಾ ಐದು ದಿನಗಳ ಹಿಂದೆ ಚೆಪಾಕ್ ಸ್ಟೇಡಿಯಂನಲ್ಲಿ ನಡೆದ ಸಿಎಸ್ಕೆ ಹಾಗೂ ಕೋಲ್ಕತ್ತಾ ನಡುವಿನ ಐಪಿಎಲ್ ಪಂದ್ಯವನ್ನು ಗೆಳೆಯರ ಜೊತೆ ವೀಕ್ಷಿಸುತ್ತಿರುವ ಫೋಟೋ ಹಾಗೂ ವಿಡಿಯೋ ಹಂಚಿಕೊಂಡಿದ್ದರು. ಅದರ ನಂತರ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಏನನ್ನೂ ಪೋಸ್ಟ್ ಮಾಡಲಿಲ್ಲ. ಇದರ ಬೆನ್ನೆಲೆ ನಟಿ ಸುನೈನಾ ನಾಪತ್ತೆಯಾಗಿದ್ದಾರೆ ಎಂಬ ವಿಡಿಯೋವೊಂದು ವೈರಲ್ ಆಗುತ್ತಿದೆ. ಈ ವಿಯಷ ತಿಳಿದ ಚೆನ್ನೈ ಪೊಲೀಸರು ಅವರ ಪತ್ತೆಗೆ ಕ್ರಮ ಕೈಗೊಂಡಿದ್ದಾರೆ.