ಮೋಹಕ ತಾರೆ ರಮ್ಯಾ ಅವರ ನಿರ್ಮಾಣ ಸಂಸ್ಥೆ ಆ್ಯಪಲ್ ಬಾಕ್ಸ್ ಸ್ಟುಡಿಯೋಸ್ ಮತ್ತು ರಾಜ್ ಬಿ.ಶೆಟ್ಟಿ ನಟಿಸಿ, ನಿರ್ದೇಶನ ಹೇಳಿರುವ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಚಿತ್ರದ ನಾಯಕಿ ಪಾತ್ರದ ಪರಿಚಯವನ್ನು ಚಿತ್ರ ತಂಡ ಇಂದು (ಸೋಮವಾರ) ಅನಾವರಣ ಮಾಡಿದೆ.
ಇತ್ತೀಚೆಗೆ ಚಿತ್ರೀಕರಣ ಪೂರ್ಣಗೊಳಿಸಿರುವ ಈ ಚಿತ್ರತಂಡ ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸಗಳಲ್ಲಿ ತಲ್ಲೀನವಾಗಿದೆ. ಇದರ ನಡುವೆ ಇಂದು ‘ಪ್ರೇರಣಾ’ ಎಂಬ ಪಾತ್ರವನ್ನು ಪರಿಚಯ ಮಾಡಿಕೊಂಡಿದೆ. ಪಾತ್ರ ಪರಿಚಯಕ್ಕೆ ಸಿನಿ ಪ್ರೇಕ್ಷಕರು ಫುಲ್ ಮಾರ್ಕ್ಸ್ ನೀಡಿದ್ದಾರೆ.
ನಟಿ ಸಿರಿ ರವಿಕುಮಾರ್ ಈ ಚಿತ್ರದಲ್ಲಿ ‘ಪ್ರೇರಣಾ’ ಎಂಬ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದು, ನಿರ್ದೇಶಕ ರಾಜ್ ಬಿ.ಶೆಟ್ಟಿ ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ‘ಪ್ರೇರಣಾ’ಳನ್ನು ಪರಿಚಯಿಸಿದ್ದಾರೆ. ನೀವು ಎಷ್ಟು ಅದ್ಭುತವಾದ ನಟಿ ಎನ್ನುವುದನ್ನು ಪ್ರೇಕ್ಷಕರಿಗೆ ತೋರಿಸಲು ಕಾತರದಿಂದಿದ್ದೇವೆ ಎಂದು ಅವರು ಬರೆದುಕೊಂಡಿದ್ದಾರೆ.