ಕರ್ನಾಟಕ

karnataka

ETV Bharat / entertainment

ತೆಲುಗಿನ ಮೈತ್ರಿ ಮೂವಿ ಮೇಕರ್ಸ್ ಕಚೇರಿಯಲ್ಲಿ ಐಟಿ ಅಧಿಕಾರಿಗಳ ಶೋಧ ಕಾರ್ಯ - ತೆಲುಗಿನ ನಿರ್ಮಾಪಕರ ಮನೆ ಮೇಲೆ ಐಟಿ ದಾಳಿ

ತೆಲುಗಿನ ಮೈತ್ರಿ ಮೂವಿ ಮೇಕರ್ಸ್ ಕಚೇರಿ ಮತ್ತು ನಿರ್ಮಾಪಕರಾದ ನವೀನ್ ಯೆರ್ನೇನಿ ಮತ್ತು ಯಲಮಂಚಿಲಿ ರವಿಶಂಕರ್ ಮನೆಯಲ್ಲಿ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಶೋಧ ಕಾರ್ಯ ಕೈಗೊಂಡಿದ್ದಾರೆ.

it-officials-conducting-searches-at-mythri-movie-office-in-hyderabad
ತೆಲುಗಿನ ಮೈತ್ರಿ ಮೂವಿ ಮೇಕರ್ಸ್ ಕಚೇರಿಯಲ್ಲಿ ಐಟಿ ಅಧಿಕಾರಿಗಳ ಶೋಧ ಕಾರ್ಯ

By

Published : Apr 20, 2023, 12:41 PM IST

ಹೈದರಾಬಾದ್:ತೆಲುಗಿನ ಮೈತ್ರಿ ಮೂವಿ ಮೇಕರ್ಸ್ ಕಚೇರಿಯಲ್ಲಿ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಶೋಧ ನಡೆಸುತ್ತಿದ್ದಾರೆ. ಕಂಪನಿಯ ವ್ಯಾಪಾರ ವಹಿವಾಟು ಮತ್ತು ಆದಾಯ ತೆರಿಗೆ ಪಾವತಿಯಲ್ಲಿ ವ್ಯತ್ಯಾಸ ಕಂಡು ಬಂದಿರುವ ಶಂಕೆ ಮೇರೆಗೆ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ:ಐಟಿ ದಾಳಿ ಅಂತ್ಯ: ಕೆಜಿಎಫ್ ಬಾಬು ವಿರುದ್ಧ ದೂರು ದಾಖಲಿಸಿದ ಚುನಾವಣಾ ಅಧಿಕಾರಿಗಳು

ಟಾಲಿವುಡ್​ನಲ್ಲಿ ಟಾಪ್ ನಿರ್ಮಾಣ ಸಂಸ್ಥೆಯಾಗಿ ಹೊರಹೊಮ್ಮಿರುವ ಮೈತ್ರಿ ಮೂವಿ ಮೇಕರ್ಸ್ ಬಿಗ್ ಬಜೆಟ್ ಚಿತ್ರಗಳನ್ನು ನಿರ್ಮಿಸುತ್ತಿದೆ. ಬುಧವಾರ ಬೆಳಗ್ಗೆಯಿಂದಲೂ ಜುಬಿಲಿ ಹಿಲ್ಸ್‌ನಲ್ಲಿರುವ ಮೈತ್ರಿ ಕಚೇರಿ ಮತ್ತು ನಿರ್ಮಾಪಕರಾದ ನವೀನ್ ಯೆರ್ನೇನಿ ಮತ್ತು ಯಲಮಂಚಿಲಿ ರವಿಶಂಕರ್ ಅವರ ಮನೆಗಳಲ್ಲೂ ಐಟಿ ಅಧಿಕಾರಿಗಳು ಶೋಧ ಕಾರ್ಯ ಕೈಗೊಂಡಿದ್ದಾರೆ.

ಕಳೆದ ವರ್ಷ ಡಿಸೆಂಬರ್‌ನಲ್ಲಿಯೂ ತಪಾಸಣೆ ನಡೆಸಿದ ಐಟಿ ಅಧಿಕಾರಿಗಳು ಹಲವು ದಾಖಲೆಗಳನ್ನು ವಶಪಡಿಸಿಕೊಂಡಿದ್ದರು. ಆದರೆ, ದಾಖಲೆಗಳಲ್ಲಿನ ವಿವರಗಳು ಮತ್ತು ನಿರ್ಮಾಪಕರು ನೀಡಿರುವ ವಿವರಗಳು ತಾಳೆಯಾಗುತ್ತಿಲ್ಲ ಎನ್ನಲಾಗಿದೆ. ಇದೇ ಕಾರಣಕ್ಕಾಗಿ ಮತ್ತೊಮ್ಮೆ ಐಟಿ ಅಧಿಕಾರಿಗಳು ದಾಖಲೆಗಳ ಪರಿಶೀಲಿಸುತ್ತಿದ್ದಾರೆ. ದೊಡ್ಡ ಬಜೆಟ್​​ ಚಿತ್ರಗಳಿಗೆ ವಿದೇಶಿ ಹೂಡಿಕೆ ಇರುವ ಬಗ್ಗೆ ಐಟಿ ಅಧಿಕಾರಿಗಳು ಅನುಮಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:ಕೆಜಿಎಫ್ ಬಾಬು ಮನೆ ಮೇಲೆ ಐಟಿ ದಾಳಿ: ಏನೆಲ್ಲ ಸಿಕ್ತು?

ನಿರ್ದೇಶಕ ಸುಕುಮಾರ್ ಕೂಡ ಈ ಚಲನಚಿತ್ರ ನಿರ್ಮಾಣ ಸಂಸ್ಥೆಯಲ್ಲಿ ಪಾಲುದಾರರಾಗಿದ್ದಾರೆ. ಸುಕುಮಾರ್ ರೈಟಿಂಗ್ಸ್ ಹೆಸರಿನ ಸ್ವಂತ ನಿರ್ಮಾಣ ಸಂಸ್ಥೆ ಇದ್ದು, ಐಟಿ ಅಧಿಕಾರಿಗಳು ಇದರ ಹಣಕಾಸಿನ ವಹಿವಾಟಿನ ವಿವರಗಳನ್ನೂ ಪರಿಶೀಲನೆ ನಡೆಸುತ್ತಿದ್ದಾರೆ. ಆದರೆ, ಐಟಿ ಅಧಿಕಾರಿಗಳ ಈ ಶೋಧ ಬಗ್ಗೆ ಮೈತ್ರಿ ಸಿನಿಮಾ ನಿರ್ಮಾಪಕರಾಗಲಿ, ನಿರ್ದೇಶಕ ಸುಕುಮಾರ್ ಆಗಲಿ ಇದುವರೆಗೆ ಅಧಿಕೃತವಾಗಿ ಪ್ರತಿಕ್ರಿಯೆ ನೀಡಿಲ್ಲ.

ಇದನ್ನೂ ಓದಿ:ಹಿಂದಿ ಚಿತ್ರ ಬಾಲಿವುಡ್​ ಎಂದು ಕರೆದುಕೊಳ್ಳುವುದನ್ನು ನಿಲ್ಲಿಸಲಿ: ಸಂಚಲನ ಮೂಡಿಸಿದ ಮಣಿ ರತ್ನಂ

ABOUT THE AUTHOR

...view details