ಬೆಂಗಳೂರು: ಜೋಗಿ ಪ್ರೇಮ್ ನಿರ್ದೇಶನದ, ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ನಟನೆಯ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾದ ಟೈಟಲ್ ಟೀಸರ್ ಲಾಂಚ್ ಆಯಿತು. ಈ ಮೂಲಕ ಹೊಸ ಚಿತ್ರಕ್ಕೆ 'ಕೆ.ಡಿ - ದಿ ಡೆವಿಲ್' ಎಂದು ಟೈಟಲ್ ಇಟ್ಟಿದ್ದು, ಟೀಸರ್ ಅದ್ಧೂರಿಯಾಗಿ ಮೂಡಿಬಂದಿದೆ. ವಿಶೇಷವೆಂದ್ರೆ ಸಿನಿಮಾದಲ್ಲಿ ಬಾಲಿವುಡ್ ನಟ ಸಂಜಯ್ ದತ್ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ಇಂದು ಬೆಂಗಳೂರಿನ ಓರಾಯಲ್ ಮಾಲ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ 'ಕೆ.ಡಿ - ದಿ ಡೆವಿಲ್' ಟೀಸರ್ ರಿಲೀಸ್ ಮಾಡಿದ್ದಾರೆ. ಕಾರ್ಯಕ್ರಮದಲ್ಲಿ ಧ್ರುವ ಸರ್ಜಾ, ಬಾಲಿವುಡ್ ನಟ ಸಂಜಯ್ ದತ್ ಸೇರಿದಂತೆ ಹಲವು ಗಣ್ಯರು ಹಾಜರಿದ್ದರು.