ಕನ್ನಡ ಚಿತ್ರರಂಗದಲ್ಲಿ ಈ ವರ್ಷ ಹ್ಯಾಟ್ರಿಕ್ ಹೀರೋ ಶಿವ ರಾಜ್ಕುಮಾರ್ ಅವರ 'ಘೋಸ್ಟ್' ಸಿನಿಮಾ ಬಿಡುಗಡೆ ಆಗಿದ್ದು ಬಿಟ್ಟರೆ, ಮತ್ಯಾವ ಸೂಪರ್ ಸ್ಟಾರ್ಗಳ ಸಿನಿಮಾ ಬಿಡುಗಡೆ ಆಗಿಲ್ಲ. ಇದೀಗ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷಿತ 'ಕಾಟೇರ' ಚಿತ್ರತಂಡ ಶುಭ ಸುದ್ದಿ ಹಂಚಿಕೊಂಡಿದೆ. ಶೀಘ್ರದಲ್ಲೇ ಕಾಟೇರ ಚಿತ್ರಮಂದಿರ ಪ್ರವೇಶಿಸಲಿದ್ದು, ಅಭಿಮಾನಿ ಬಗಳಗದಲ್ಲಿ ಸಂತಸದ ವಾತಾವರಣ ನಿರ್ಮಾಣ ಆಗಿದೆ.
ಹೌದು, ಕ್ರಾಂತಿ ಸಿನಿಮಾ ಆದ ಬಳಿಕ ದರ್ಶನ್ ಅವರ ಯಾವ ಸಿನಿಮಾ ಬಿಡುಗಡೆ ಆಗಲಿದೆ ಎಂದು ಎದುರು ನೋಡುತ್ತಿದ್ದ ಅಭಿಮಾನಿಗಳಿಗೆ ಬಿಗ್ ಅಪ್ಡೇಟ್ ಸಿಕ್ಕಿದೆ. ಚಾಲೆಂಜಿಂಗ್ ಸ್ಟಾರ್ ಪಕ್ಕಾ ಮಾಸ್ ಲುಕ್ನಲ್ಲಿ ಕಾಣಿಸಿಕೊಂಡಿರುವ ಕಾಟೇರ ಸಿನಿಮಾ ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದೆ. ಈ ಚಿತ್ರದ ಅನೌನ್ಸ್ಮೆಂಟ್ ವಿಡಿಯೋ ಅನಾವರಣಗೊಂಡಿದೆ. ನಟ ದರ್ಶನ್ ಲುಕ್ನ ಸಣ್ಣ ಝಲಕ್ ಅನ್ನು ಚಿತ್ರತಂಡ ರಿವೀಲ್ ಮಾಡಿದೆ. ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಬಿಡುಗಡೆ ದಿನಾಂಕವನ್ನು ಘೋಷಿಸಿದ್ದಾರೆ. ಡಿಸೆಂಬರ್ 29 ರಂದು ಸಿನಿಮಾ ರಿಲೀಸ್ ಆಗಲಿದೆ.
'ಕಾಟೇರ' 70ರ ದಶಕದ ನೈಜ ಘಟನೆಯೊಂದನ್ನು ಆಧರಿಸಿ ನಿರ್ಮಾಣವಾಗಿರುವ ಸಿನಿಮಾ. ಈ ಚಿತ್ರ 1970ರ ಕಾಲಘಟ್ಟದಲ್ಲಿ ನಡೆಯುವ ಕಥೆಯನ್ನು ಹೊಂದಿದೆ ಎಂದು ಈ ಹಿಂದೆ ಚಿತ್ರತಂಡ ಮಾಹಿತಿ ನೀಡಿತ್ತು. ಸದ್ಯ ರಿವೀಲ್ ಆಗಿರುವ ಮೇಕಿಂಗ್ ವಿಡಿಯೋದಲ್ಲಿ ದರ್ಶನ್ ಬೆಂಕಿಕಟ್ಟಿ ಮೂಲಕ ಬೀಡಿ ಹಚ್ಚಿಕೊಳ್ಳುವ ದೃಶ್ಯದ ಮೂಲಕ ನಾನು ಪಕ್ಕಾ ಮಾಸ್ ಅಂದಿದ್ದಾರೆ.