ಅದ್ಧೂರಿ ತಾರಾಗಣದಲ್ಲಿ ತಯಾರಾಗುತ್ತಿರುವ 'ಪ್ರಾಜೆಕ್ಟ್ ಕೆ' ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದೆ. ನಾಗ್ ಅಶ್ವಿನ್ ನಿರ್ದೇಶನದ ಹಾಗೂ ಪ್ಯಾನ್ ಇಂಡಿಯಾ ಸ್ಟಾರ್ ಪ್ರಭಾಸ್ ನಟನೆಯ ಬಹುನಿರೀಕ್ಷಿತ ಚಿತ್ರ ಇದಾಗಿದ್ದು, ಅದ್ಧೂರಿ ಸೆಟ್ ಹಾಗೂ ತಾರೆಯರ ಸಮಾಗಮದಿಂದ ದಿನದಿಂದ ದಿನಕ್ಕೆ ಕುತೂಹಲ ಮೂಡಿಸುತ್ತಿದೆ. ಬಾಲಿವುಡ್ ಸೂಪರ್ ಸ್ಟಾರ್ ಅಮಿತಾಭ್ ಬಚ್ಚನ್ ಅವರಂತಹ ಮೇರು ನಟರು ಚಿತ್ರದ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ನಟ ಕಮಲ್ ಹಾಸನ್ ಕೂಡ ಮುಂದಿನ ತಿಂಗಳು ಪ್ರಾಜೆಕ್ಟ್ ಕೆ ಚಿತ್ರತಂಡವನ್ನು ಸೇರಲು ಸಿದ್ಧರಾಗಿದ್ದಾರೆ. ಆಗಸ್ಟ್ನಲ್ಲಿ ಚಿತ್ರದ ಶೂಟಿಂಗ್ಗಾಗಿ ದಿನಾಂಕಗಳನ್ನು ನಿಗದಿಪಡಿಸಿದ್ದಾರೆ. ಪ್ರಸ್ತುತ ಕಮಲ್ ಹಾಸನ್, ನಿರ್ಮಾಪಕ ಶಂಕರ್ ಇಂಡಿಯನ್ 2 ನಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಚಿತ್ರಕ್ಕಾಗಿ ಸುಮಾರು 20 ದಿನಗಳ ಕಾಲ ಚಿತ್ರೀಕರಣದಲ್ಲಿ ಬ್ಯುಸಿ ಇರಲಿದ್ದಾರೆ.
ಅದರ ಜೊತೆಗೆ ನಟ ತಮಗಿರುವ ಕಮಿಟ್‌ಮೆಂಟ್‌ಗಳನ್ನು ಮುಗಿಸಿದ ತಕ್ಷಣ ನಾಗ್ ಅಶ್ವಿನ್ ತಂಡದ ಜೊತೆ ಚಿತ್ರೀಕರಣವನ್ನು ಪ್ರಾರಂಭಿಸಲು ಯೋಜಿಸಿದ್ದಾರೆ. ಎಲ್ಲವೂ ಯೋಜಿಸಿದಂತೆ ನಡೆದರೆ, ಕಮಲ್ ಹಾಸನ್ ಆಗಸ್ಟ್ ಆರಂಭದಲ್ಲಿ 'ಪ್ರಾಜೆಕ್ಟ್ ಕೆ' ಸೆಟ್‌ಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಸಿನಿಮಾವನ್ನು 500 ಕೋಟಿ ರೂಪಾಯಿಗಳ ಬೃಹತ್ ಬಜೆಟ್‌ನಲ್ಲಿ ನಿರ್ಮಿಸಲಾಗುತ್ತಿದೆ ಎಂದು ವರದಿಯಾಗಿದೆ. ಹೀಗಾಗಿ ಕಮಲ್ ಹಾಸನ್ ಈ ಚಿತ್ರದಲ್ಲಿನ ಪಾತ್ರಕ್ಕಾಗಿ 150 ಕೋಟಿ ರೂಪಾಯಿಗಳನ್ನು ಪಡೆದುಕೊಳ್ಳಲಿದ್ದಾರಂತೆ.
ಇದನ್ನೂ ಓದಿ:Rakshit Shetty: ಕನ್ನಡ ಚಿತ್ರರಂಗದಲ್ಲಿ ವಿನೂತನ ಪ್ರಯೋಗಕ್ಕೆ ಮುಂದಾದ 'ಸಪ್ತ ಸಾಗರದಾಚೆ ಎಲ್ಲೋ'; ಏನದು ಗೊತ್ತಾ?