ಎಸ್ ಶಂಕರ್ ನಿರ್ದೇಶನದ ಮುಂಬರುವ ತಮಿಳು ಸಿನಿಮಾ 'ಇಂಡಿಯನ್ 2' ಪ್ರೇಕ್ಷಕರಲ್ಲಿ ಈಗಾಗಲೇ ಸಾಕಷ್ಟು ಕುತೂಹಲ ಮೂಡಿಸಿದೆ. ಕಮಲ್ ಹಾಸನ್ ಅಭಿಮಾನಿಗಳು ಕಾತರದಿಂದ ಕಾಯುತ್ತಿರುವ ಈ ಚಿತ್ರದ ಫಸ್ಟ್ ಗ್ಲಿಂಪ್ಸ್ ನಾಳೆ ಹೊರಬೀಳಲಿದೆ. ಭಾರತೀಯ ಚಿತ್ರರಂಗದ ಸ್ಟಾರ್ ನಟರಿಂದ ಮೊದಲ ನೋಟ ಅನಾವರಣಗೊಳ್ಳಲಿದೆ. ಈ ಬಗ್ಗೆ ಚಿತ್ರ ನಿರ್ಮಾಣ ಸಂಸ್ಥೆ ಲೈಕಾ ಪ್ರೊಡಕ್ಷನ್ಸ್ ಮಾಹಿತಿ ನೀಡಿದೆ.
'ಇಂಡಿಯನ್ 2' ಫಸ್ಟ್ ಗ್ಲಿಂಪ್ಸ್ ಅನ್ನು ನಾಳೆ ಕಾಲಿವುಡ್ ಸೂಪರ್ಸ್ಟಾರ್ ರಜನಿಕಾಂತ್, ಬಾಲಿವುಡ್ ನಟ ಅಮೀರ್ ಖಾನ್, ನಿರ್ದೇಶಕ ಎಸ್ಎಸ್ ರಾಜಮೌಳಿ ಮತ್ತು ಕನ್ನಡದ ಮಾಣಿಕ್ಯ ಕಿಚ್ಚ ಸುದೀಪ್ ಬಿಡುಗಡೆ ಮಾಡಲಾಗಿದ್ದಾರೆ. ಆಯಾಯ ನಟರು ಆಯಾಯ ಭಾಷೆಯಲ್ಲಿ ಮೊದಲ ನೋಟವನ್ನು ಅನಾವರಣ ಮಾಡಲಿದ್ದಾರೆ. ನಾಳೆ ಸಂಜೆ 5.30ಕ್ಕೆ ಬಹುನಿರೀಕ್ಷೆಯ ಫಸ್ಟ್ ಗ್ಲಿಂಪ್ ರಿಲೀಸ್ ಆಗಲಿದೆ.
ಲೈಕಾ ಪ್ರೊಡಕ್ಷನ್ಸ್ ಮತ್ತು ರೆಡ್ ಗೈಂಟ್ ಮೂವೀಸ್ ಮೂಲಕ ಸುಬಾಸ್ಕರನ್ ಅಲ್ಲಿರಾಜ ಮತ್ತು ಉದಯನಿಧಿ ಸ್ಟಾಲಿನ್ ಸೇರಿ ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ. 'ಇಂಡಿಯನ್ 2' ಚಿತ್ರ 1996ರಲ್ಲಿ ಮೂಡಿಬಂದ 'ಇಂಡಿಯನ್'ನ ಮುಂದುವರಿದ ಭಾಗ. ಸೌತ್ ಸಿನಿಮಾ ಇಂಡಸ್ಟ್ರಿಯ ಸೂಪರ್ ಸ್ಟಾರ್ ಕಮಲ್ ಹಾಸನ್ ಅವರು ಸೇನಾಪತಿ/ಇಂಡಿಯನ್ ಪಾತ್ರವನ್ನು ಮುಂದುವರಿಸಲಿದ್ದಾರೆ.
'ಇಂಡಿಯನ್ 2' ಸಿನಿಮಾ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಭ್ರಷ್ಟಾಚಾರ - ಅಪರಾಧ ಚಟುವಟಿಕೆಗಳ ವಿರುದ್ಧ ನಿಲ್ಲುವ ಕಥೆಯನ್ನು ಒಳಗೊಂಡಿದೆ. ಚಿತ್ರದಲ್ಲಿ ಸಿದ್ಧಾರ್ಥ್, ಕಾಜಲ್ ಅಗರ್ವಾಲ್, ರಾಕುಲ್ ಪ್ರೀತ್ ಸಿಂಗ್, ಪ್ರಿಯಾ ಭವಾನಿ ಶಂಕರ್, ಕಾಳಿದಾಸ್ ಜಯರಾಮ್, ಗುಲ್ಶನ್ ಗ್ರೋವರ್, ನೆಡುಮುಡಿ ವೇಣು, ವಿವೇಕ್, ಸಮುದ್ರಕನಿ, ಬಾಬಿ ಸಿಂಹ, ಗುರು ಸೋಮಸುಂದರಂ, ದೆಹಲಿ ಗಣೇಶ್, ಜಯಪ್ರಕಾಶ್, ಮನೋಬಾಲಾ, ವೆನ್ನೆಲ ಕಿಶೋರ್, ದೀಪಾ ಶಂಕರ್ ಕೂಡ ಕಾಣಿಸಿಕೊಳ್ಳಲಿದ್ದಾರೆ. ಅನಿರುದ್ಧ್ ರವಿಚಂದರ್ ಸಂಗೀತ, ರವಿವರ್ಮನ್ ಮತ್ತು ರತ್ನವೇಲು ಅವರ ಕ್ಯಾಮರಾ ವರ್ಕ್, ಎ. ಶ್ರೀಕರ್ ಪ್ರಸಾದ್ ಅವರ ಎಡಿಟಿಂಗ್ ಇರಲಿದೆ.