ನವಗ್ರಹ ಸಿನಿಮಾ ಮೂಲಕ ಕನ್ನಡ ಚಿತ್ರರಂಗದಲ್ಲಿ ಐಡೆಂಟಿಟಿ ಕ್ರಿಯೇಟ್ ಮಾಡಿಕೊಂಡಿರುವ ನಟ ಧರ್ಮ ಕೀರ್ತಿರಾಜ್. ಇದೀಗ ಬುಲೆಟ್ ಎಂಬ ಹೊಸ ಚಿತ್ರಕ್ಕೆ ಗ್ರೀನ್ ಸಿಗ್ನಲ್ ಕೊಟ್ಟಿದ್ದು, ನಿರ್ದೇಶಕ ಸತ್ಯಜಿತ್ ನಿರ್ಮಿಸಿ, ನಿರ್ದೇಶಿಸುತ್ತಿದ್ದಾರೆ. ಚಿತ್ರದ ಮುಹೂರ್ತ ಸಮಾರಂಭ ಆರ್ ಟಿ ನಗರದ ವಿನಾಯಕನ ದೇವಸ್ಥಾನದಲ್ಲಿ ನೆರವೇರಿದೆ.
ಚಿತ್ರದ ಮೊದಲ ದೃಶ್ಯಕ್ಕೆ ಶಾಸಕ ಭೈರತಿ ಸುರೇಶ್, ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಪ್ರವೀಣ್ ಶೆಟ್ಟಿ ಆರಂಭ ಫಲಕ ತೋರಿದರು. ಮಹಿಮ್ ಕ್ಯಾಮೆರಾ ಚಾಲನೆ ಮಾಡಿ ಆಲ್ ದಿ ಬೆಸ್ಟ್ ಹೇಳಿದರು. ಬಳಿಕ ಮಾತನಾಡಿದ ನಿರ್ದೇಶಕ ಸತ್ಯಜಿತ್, 'ವಿನಾಯಕನ ಸನ್ನಿಧಿಯಲ್ಲಿ ಮುಹೂರ್ತ ಮಾಡಿದ್ದೇವೆ. ಒಂದೇ ಹಂತದಲ್ಲಿ ಚಿತ್ರೀಕರಣ ನಡೆಯಲಿದೆ. ಬೆಂಗಳೂರು, ಗೋವಾ, ಮಂಗಳೂರಿನಲ್ಲಿ ಶೂಟಿಂಗ್ ಮಾಡಲಾಗುವುದು. ನಾಯಕನಾಗಿ ಧರ್ಮ ಕೀರ್ತಿರಾಜ್ ನಟಿಸುತ್ತಿದ್ದು, ಮುಂಬೈನ ಶ್ರೀಯಾ ಶುಕ್ಲಾ ಹಾಗೂ ಅಜಿತಾ ಜಾ ನಾಯಕಿಯರಾಗಿ ಬಣ್ಣ ಹಚ್ಚಲಿದ್ದಾರೆ. ಶ್ರೀಯಾ ಅವರು ಸುಶಾಂತ್ ಸಿಂಗ್ ಜೀವನಚರಿತ್ರೆ ಆಧಾರಿತ ಚಿತ್ರದಲ್ಲಿ ಮತ್ತು ಅಜಿತಾ ವೆಬ್ ಸೀರಿಸ್ಗಳಲ್ಲಿ ನಟಿಸಿದ್ದಾರೆ. ಸಿನಿಮಾವು ಕ್ರೈಮ್ ಥ್ರಿಲ್ಲರ್ ಹಾಗೂ ಫ್ಯಾಮಿಲಿ ಸೆಂಟಿಮೆಂಟ್ ಕಥೆ ಆಧರಿತವಾಗಿದೆ ಎಂದು ಹೇಳಿದರು.
ಇದನ್ನೂ ಓದಿ:ದರ್ಶನ್ಗೆ ಧರ್ಮ ಕೀರ್ತಿರಾಜ್ ಅಂದ್ರೆ ಇಷ್ಟವಂತೆ: ಯಾಕೆ ಗೊತ್ತಾ?