ಬೆಂಗಳೂರು: ಜನಪ್ರಿಯ ವಸ್ತ್ರ ವಿನ್ಯಾಸಕ ಮತ್ತು ಹಾಸ್ಯ ನಟ ಗಂಡಸಿ ನಾಗರಾಜ್(65) ಭಾನುವಾರ ರಾತ್ರಿ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಇವರು ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದರು. ಕಳೆದ ರಾತ್ರಿ 10.30ಕ್ಕೆ ಬೆಂಗಳೂರಿನಲ್ಲಿ ವಿಧಿವಶರಾಗಿದ್ದಾರೆ.
ಕನ್ನಡದ 1,000ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ಗುಂಡನ ಮದುವೆ, ರಾಯರ ಮಗ, ಹಬ್ಬ, ಪರ್ವ, ಮಾತಾಡು ಮಾತಾಡ್ ಮಲ್ಲಿಗೆ, ಕೋಟಿಗೊಬ್ಬ-3 ಸೇರಿ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದ್ದಾರೆ. ವಸ್ತ್ರ ವಿನ್ಯಾಸಕರಾಗಿ ಚಿತ್ರರಂಗ ಪ್ರವೇಶಿಸಿದ ಇವರು ನವರಸ ನಾಯಕ ಜಗ್ಗೇಶ್ ಅವರ ಆಪ್ತ ವಸ್ತ್ರಾಲಂಕಾರರಾಗಿದ್ದರು. ಇದೇ ಪ್ರೇರಣೆಯಲ್ಲಿ ಸರ್ವರ್ ಸೋಮಣ್ಣ, ಬಂಡ ನನ್ನ ಗಂಡ, ಹಬ್ಬ, ಶ್ರೀ ಮಂಜುನಾಥ ಮತ್ತು ರಾಜ ಹುಲಿ ಚಿತ್ರದಲ್ಲಿ ಅಭಿನಯಿಸಿ ಗುರುತಿಸಿಕೊಂಡಿದ್ದಾರೆ.