ಕರ್ನಾಟಕ

karnataka

ETV Bharat / entertainment

ಮರೀಚಿ ಟೀಸರ್​: ಸೋನುಗೌಡ ಜೊತೆ ಕ್ರೈಮ್ ಥ್ರಿಲ್ಲರ್ ಕಥೆಯೊಂದಿಗೆ ಬಂದ ವಿಜಯ್​​​ ರಾಘವೇಂದ್ರ - sonu gowda

Marichi Teaser launch: ವಿಜಯ್​​​ ರಾಘವೇಂದ್ರ, ಸೋನುಗೌಡ ನಟನೆಯ ಮರೀಚಿ ಸಿನಿಮಾದ ಟೀಸರ್ ಅನಾವರಣಗೊಂಡಿದೆ.

Marichi Teaser launch event
ಸೋನುಗೌಡ ವಿಜಯ್​​​ ರಾಘವೇಂದ್ರ ಮರೀಚಿ ಸಿನಿಮಾ

By ETV Bharat Karnataka Team

Published : Sep 23, 2023, 11:51 AM IST

ವಿಭಿನ್ನ ಸಿನಿಮಾಗಳ ಮೂಲಕ ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ನಟ ವಿಜಯ್​​ ರಾಘವೇಂದ್ರ. ಸದ್ಯ 'ಮರೀಚಿ' ಎಂಬ ಚಿತ್ರದಲ್ಲಿ ಬ್ಯುಸಿಯಾಗಿದ್ದಾರೆ. ಚಿತ್ರತಂಡ ಸೈಲೆಂಟ್ ಆಗಿ ಶೂಟಿಂಗ್ ಮುಗಿಸಿದ್ದು, ಬಿಡುಗಡೆಗೆ ರೆಡಿಯಾಗುತ್ತಿದೆ. ವಿಜಯ್ ರಾಘವೇಂದ್ರ ಜೋಡಿಯಾಗಿ ಸೋನು ಗೌಡ ನಟಿಸಿದ್ದು, ಇತ್ತೀಚೆಗೆ ಸಿನಿಮಾದ ಟೀಸರ್ ಅನಾವರಣಗೊಂಡಿದೆ. ಸಸ್ಪೆನ್ಸ್, ಥ್ರಿಲ್ಲಿಂಗ್ ಅಂಶಗಳ ಝಲಕ್ ಪ್ರೇಕ್ಷಕರ ಕುತೂಹಲ ಹೆಚ್ಚಿಸಿದೆ. ಪೊಲೀಸ್ ಖದರ್​ನಲ್ಲಿ ರಾಘು ಕಾಣಿಸಿಕೊಂಡಿದ್ದಾರೆ. 'ಮರೀಚಿ' ಕುರಿತು ಚಿತ್ರತಂಡ ಕೆಲ ವಿಚಾರಗಳನ್ನು ಹಂಚಿಕೊಂಡಿದೆ.

ನಟ ವಿಜಯ್ ರಾಘವೇಂದ್ರ ಮಾತನಾಡಿ, ಮರೀಚಿ ಟೀಸರ್ ಲಾಂಚ್ ಆಗಿದೆ. ಟ್ಯಾಗ್ ಲೈನ್ 'God father of good and bad' ಎನ್ನುವಂತೆ ಪ್ರತಿಯೊಬ್ಬರ ಮನಸ್ಸೂ ಕೂಡ ಕಥೆ ಹೆಣೆಯುತ್ತದೆ. ನಮಗೂ ಅದೇ ಬೇಕಿರುವುದು. ಮರೀಚಿ ಸಿನಿಮಾ ಒಂದು ಕ್ರೈಮ್ ಥ್ರಿಲ್ಲರ್. ಟೀಸರ್ ನೋಡಿದರೆ ಗೊತ್ತಾಗುತ್ತದೆ. ಚಿತ್ರದಲ್ಲಿ ಪೊಲೀಸ್ ಪಾತ್ರ ಮಾಡುವ ಅವಕಾಶವನ್ನು ನಿರ್ದೇಶಕರು ಕೊಟ್ಟಿದ್ದಾರೆ. ತಾಂತ್ರಿಕ ವರ್ಗದವರನ್ನು ಎಷ್ಟು ಜವಾಬ್ದಾರಿಯಿಂದ ಆಯ್ಕೆ ಮಾಡಿದ್ದಾರೋ, ಅದೇ ರೀತಿ ತೆರೆ ಮೇಲೆ ಬರುವ ಕಲಾವಿದರನ್ನು ಅಷ್ಟೇ ಜವಾಬ್ದಾರಿಯಿಂದ ಆಯ್ಕೆ ಮಾಡಿದ್ದಾರೆ. ಅದರಲ್ಲಿ ನಾನು ಕೂಡ ಒಬ್ಬ ಎಂದು ಹೇಳಲು ಖುಷಿಯಾಗುತ್ತದೆ ಎಂದು ತಿಳಿಸಿದರು.

ಮರೀಚಿ ಟೀಸರ್ ಲಾಂಚ್​ ಈವೆಂಟ್​​

ನಟಿ ಸೋನುಗೌಡ ಮಾತನಾಡಿ, ಮರೀಚಿ ಸ್ಟೋರಿ ಲೈನ್ ನನಗೆ ಬಹಳ ಇಷ್ಟವಾಯಿತು. ಈ ಚಿತ್ರದಲ್ಲಿ ಪರ್ಫಾಮೆನ್ಸ್​ಗೆ ಬಹಳ ಸ್ಕೋಪ್ ಇತ್ತು. ನನ್ನ ಪಾತ್ರ ತುಂಬಾ ಚೆನ್ನಾಗಿ ಮೂಡಿ ಬಂದಿದೆ. ಹ್ಯಾಪಿ ನ್ಯೂ ಇಯರ್​ನಲ್ಲಿ ಗಂಡ ಹೆಂಡತಿಯಾಗಿ ನಾನು ವಿಜಯ್ ಸರ್ ನಟಿಸಿದ್ದೆವು. ಇಲ್ಲಿಯೂ ಪತಿ ಪತ್ನಿಯರಾಗಿ ಅಭಿನಯಿಸಿದ್ದೇವೆ. ಬಹಳ ಎಮೋಷನಲ್ ಆಗಿ ಮರೀಚಿ ಸಿನಿಮಾ ಮೂಡಿಬಂದಿದೆ. ತೆರೆಯಲ್ಲಿ ನಾವು ಹೇಗೆ ಕಾಣಿಸುತ್ತೇವೆ ಎಂಬುದನ್ನು ನೋಡಲು ನಾನು ಕೂಡ ಕಾತುರಳಾಗಿದ್ದೇನೆ ಎಂದರು.

ಬಳಿಕ ನಿರ್ದೇಶಕ ಕಂ ನಿರ್ಮಾಪಕ ಸಿದ್ಧ್ರುವ್ ಮಾತನಾಡಿ, ಮರೀಚಿ ಟೈಟಲ್ ಫೈನಲ್​ ಆಗುವ ಮೊದಲು 150 ಶೀರ್ಷಿಕೆಗಳು ನಮ್ಮ ಮುಂದೆ ಇದ್ದವು. ಅದರಲ್ಲಿ ಋಷಿ ಹೆಸರು ಬರುವಂತೆ ಟೈಟಲ್ ಆಯ್ಕೆ ಮಾಡಬೇಕಿತ್ತು. ಅದಕ್ಕೆ ಮರೀಚಿ ಟೈಟಲ್​​ ಆಯ್ಕೆ ಮಾಡಿದ್ದೇವೆ. ಮರೀಚಿ ಎಂದರೆ ಬ್ರಹ್ಮನ ಮಗ. ದೇವದಾಸ್ ಹಾಗೂ ಅಸುರರ ಗಾಡ್ ಫಾದರ್. ನಮ್ಮ ಚಿತ್ರದಲ್ಲಿ ಒಳ್ಳೆಯದು ಕೆಟ್ಟದಕ್ಕೆ ಮರೀಚಿ ಗಾಡ್ ಫಾದರ್ ಎಂದು ತೆಗೆದುಕೊಂಡಿದ್ದೇವೆ. ತುಂಬಾ ಅದ್ಭುತವಾಗಿ ಕಥೆ ಮೂಡಿ ಬಂದಿದೆ. ಒಂದೊಳ್ಳೆ ಪ್ರಯತ್ನ ಮಾಡಿದ್ದೇವೆ. ಸ್ಕ್ರೀನ್ ಪ್ಲೇ, ಸ್ಟೋರಿ ಎಲ್ಲವೂ ಚೆನ್ನಾಗಿ ಮೂಡಿ ಬಂದಿದೆ ಎಂದರು.

ಸೋನುಗೌಡ ವಿಜಯ್​​​ ರಾಘವೇಂದ್ರ ಮರೀಚಿ ಸಿನಿಮಾ

ಇದನ್ನೂ ಓದಿ:ವಿನೋದ್ ಪ್ರಭಾಕರ್ 'ಫೈಟರ್' ಸಿನಿಮಾಗೆ ಕನ್ನಡಪರ ಹೋರಾಟಗಾರರ ಸಾಥ್​: ರಿಲೀಸ್ ಡೇಟ್ ಅನೌನ್ಸ್

ಮರೀಚಿ ಲವ್ ಸ್ಟೋರಿ ಒಳಗೊಂಡಂತೆ ಸಸ್ಪೆನ್ಸ್, ಥ್ರಿಲ್ಲರ್ ಸಿನಿಮಾ. ಹಲವು ಕಿರುಚಿತ್ರಗಳನ್ನು ನಿರ್ದೇಶಿಸಿ, ಒಂದಿಷ್ಟು ಸಿನಿಮಾಗಳಿಗೆ ಸಹಾಯಕ ನಿರ್ದೇಶಕನಾಗಿ ದುಡಿದ ಅನುಭವ ಇರುವ ಸಿದ್ಧ್ರುವ್ ನಿರ್ದೇಶನದ ಮೊದಲ ಸಿನಿಮಾವಿದು. ಚಿತ್ರಕ್ಕೆ ಕಥೆ, ಚಿತ್ರಕಥೆ ಕೂಡ ಇವರೇ ಬರೆದಿದ್ದಾರೆ.

ಇದನ್ನೂ ಓದಿ:ನಿಜ ಜೀವನದ ಕನಸನ್ನು ಸಿನಿಮಾದಲ್ಲಿ ಈಡೇರಿಸಿಕೊಂಡ ಅದಿತಿ ಪ್ರಭುದೇವ: ಏನದು?

ವಿಜಯ್​​ ರಾಘವೇಂದ್ರ ಜೋಡಿಯಾಗಿ ನಟಿ ಸೋನುಗೌಡ ಕಾಣಿಸಿಕೊಂಡರೆ ಅಭಿದಾಸ್, ಸ್ಪಂದನ ಸೋಮಣ್ಣ, ಆರ್ಯನ್, ಶೃತಿ ಪಾಟೀಲ್, ಗೋಪಾಲ್ ಕೃಷ್ಣ ದೇಶಪಾಂಡೆ, ಅರುಣ ಬಾಲರಾಜ್ ಚಿತ್ರದ ತಾರಾಬಳಗದಲ್ಲಿದ್ದಾರೆ. ಮನೋಹರ್ ಜೋಶಿ ಛಾಯಾಗ್ರಹಣ, ಜ್ಯೂಡ ಸ್ಯಾಂಡಿ ಸಂಗೀತ ನಿರ್ದೇಶನ ಚಿತ್ರಕ್ಕಿರಲಿದೆ. ಎಸ್ ಎಸ್ ರೆಕ್ ಬ್ಯಾನರ್ ನಡಿ ನಿರ್ದೇಶಕ ಸಿದ್ಧ್ರುವ್ ಹಾಗೂ ಸಂತೋಷ್ ಮಾಯಪ್ಪ ಚಿತ್ರವನ್ನು ನಿರ್ಮಿಸಿದ್ದಾರೆ. ಶೂಟಿಂಗ್ ಮುಗಿಸಿರುವ ಚಿತ್ರತಂಡ ಶೀಘ್ರದಲ್ಲೇ ಸಿನಿಮಾವನ್ನು ತೆರೆಗೆ ತರುವ ಯೋಜನೆ ಹಾಕಿಕೊಂಡಿದೆ.

ABOUT THE AUTHOR

...view details