ಮುಂಬೈ (ಮಹಾರಾಷ್ಟ್ರ) : ರಿಷಬ್ ಶೆಟ್ಟಿ ನಟನೆ ಮತ್ತು ನಿರ್ದೇಶನದ 'ಕಾಂತಾರ' ಮಗದೊಂದು ದಾಖಲೆ ಮಾಡಿದೆ. ಬಿಡುಗಡೆಗೊಂಡು 25 ದಿನ ಕಳೆದರೂ ಹಣ ಗಳಿಕೆಯಲ್ಲಿ ಮುನ್ನುಗ್ಗುತ್ತಿದ್ದು, ಈ ವಿಚಾರದಲ್ಲಿ ಹೊಸ ಅಧ್ಯಾಯ ಬರೆದಿದೆ. ಕರ್ನಾಟಕ ಮಾತ್ರವಲ್ಲದೇ ದೇಶ-ವಿದೇಶಗಳಲ್ಲಿ ಹೊಸ ಅಲೆ ಎಬ್ಬಿಸಿರುವ ಕಾಂತಾರ ಚಿತ್ರವು, ಯಶ್ ಅಭಿನಯದ 'ಕೆಜಿಎಫ್' ಅನ್ನು ಹಿಂದಿಕ್ಕಿ ಸಾರ್ವಕಾಲಿಕ ಅತಿ ಹೆಚ್ಚು ಗಳಿಕೆ ಮಾಡಿದ ಎರಡನೇ ಕನ್ನಡ ಚಿತ್ರವಾಗಿ ಹೊರಹೊಮ್ಮಿದೆ.
ಅತ್ಯಂತ ಕಡಿಮೆ ಬಜೆಟ್ನಲ್ಲಿ ನಿರ್ಮಾಣಗೊಂಡ ಕಾಂತಾರ ಚಿತ್ರವು ಈ ಪ್ರಮಾಣದಲ್ಲಿ ಕ್ರೇಜ್ ಹೆಚ್ಚಿಸಿರುವುದು ಕನ್ನಡ ಸಿನಿಮಾ ರಂಗದಲ್ಲಿ ಮೊದಲು ಎನ್ನಲಾಗುತ್ತಿದೆ. ಈ ಚಿತ್ರದಿಂದ ರಿಷಬ್ ಶೆಟ್ಟಿ ಅವರ ವರ್ಚಸ್ಸನ್ನು ಕೂಡ ಹೆಚ್ಚಾಗಿದೆ.
ಈ ವರೆಗಿನ ಮಾಹಿತಿ ಪ್ರಕಾರ ಭಾರತದಲ್ಲಿ 170 ಕೋಟಿ ಗಳಿಸಿರುವ ಕಾಂತಾರ ವಿದೇಶದಲ್ಲಿ 18 ಕೋಟಿ ರೂ. ಕಲೆಕ್ಷನ್ ಮಾಡಿಕೊಂಡಿದೆ. ವಿಶ್ವದಾದ್ಯಂತ ಒಟ್ಟು 188 ಕೋಟಿ ಗಳಿಸುವ ಮೂಲಕ 'ಕೆಜಿಎಫ್' ಅನ್ನು ಹಿಂದಿಕ್ಕಿ ಸಾರ್ವಕಾಲಿಕ ಅತಿ ಹೆಚ್ಚು ಗಳಿಕೆ ಮಾಡಿದ ಎರಡನೇ ಕನ್ನಡ ಚಿತ್ರವಾಗಿದೆ.