ಕರ್ನಾಟಕ

karnataka

ETV Bharat / entertainment

ಕರಾವಳಿ ಸಿನಿಮಾಕ್ಕಾಗಿ ವಿಭಿನ್ನ ಗೆಟಪ್‌ನಲ್ಲಿ ಕಾಣಿಸಿಕೊಂಡ ನಟ ಪ್ರಜ್ವಲ್ ದೇವರಾಜ್ - ಕರಾವಳಿ

ನಟ ಪ್ರಜ್ವಲ್ ದೇವರಾಜ್ ನಟನೆಯ ಕರಾವಳಿ ಸಿನಿಮಾದ ಪೋಸ್ಟರ್ ಬಿಡುಗಡೆಯಾಗಿದ್ದು, ಸಿನಿ ಪ್ರಿಯರನ್ನು ಆಕರ್ಷಿಸುತ್ತಿದೆ.

Etv Bharatkaravali-movie-new-poster-released
ಕರಾವಳಿ ಸಿನಿಮಾಕ್ಕಾಗಿ ವಿಭಿನ್ನ ಗೆಟಪ್‌ನಲ್ಲಿ ಕಾಣಿಸಿಕೊಂಡ ನಟ ಪ್ರಜ್ವಲ್ ದೇವರಾಜ್

By ETV Bharat Karnataka Team

Published : Jan 1, 2024, 10:51 PM IST

ಕರಾವಳಿ, ಸದ್ಯ ಸ್ಯಾಂಡಲ್ ವುಡ್ ನಲ್ಲಿ ಸದ್ದು ಮಾಡುತ್ತಿರುವ ಸಿನಿಮಾ. ಗುರುದತ್ ಗಾಣಿಗ ನಿರ್ದೇಶನದ, ಪ್ರಜ್ವಲ್ ದೇವರಾಜ್ ನಟನೆಯ 'ಕರಾವಳಿ' ಟೀಸರ್ ಈಗಾಗಲೇ ರಿಲೀಸ್ ಆಗಿದ್ದು ಅಭಿಮಾನಿಗಳ ಹೃದಯ ಗೆದ್ದಿದೆ. ಟೀಸರ್ ಸಿಕ್ಕಾಪಟ್ಟೆ ವೈರಲ್ ಆಗಿದ್ದು ಎಲ್ಲರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಇದೀಗ ಸಿನಿಮಾ ತಂಡ ಹೊಸ ಪೋಸ್ಟರ್ ರಿಲೀಸ್ ಮಾಡುವ ಮೂಲಕ ಚಿತ್ರದ ಮೇಲಿನ ಕುತೂಹಲವನ್ನು ಮತ್ತಷ್ಟು ಹೆಚ್ಚಿಸಿದೆ.

ಹೌದು, ಹೊಸ ವರ್ಷಕ್ಕೆ ಕರಾವಳಿ ತಂಡ ರಿಲೀಸ್ ಮಾಡಿರುವ ಪೋಸ್ಟರ್ ಆಕರ್ಷಕವಾಗಿದೆ. ಪ್ರಜ್ವಲ್ ದೇವರಾಜ್ ಕೋಣವನ್ನೇರಿ ವಿಭಿನ್ನ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಪ್ರಾಣಿ ಮತ್ತು ಮನುಷ್ಯನ ಸಂಘರ್ಷದ ಬಗ್ಗೆ ಇರುವ ಕರಾವಳಿ ಸಿನಿಮಾ ಈಗಾಗಲೇ ಭಾರಿ ನಿರೀಕ್ಷೆ ಮೂಡಿಸಿದೆ. ಕರಾವಳಿ ಕೇವಲ ಸ್ಯಾಂಡಲ್ ವುಡ್ ನಲ್ಲಿ ಮಾತ್ರವಲ್ಲದೇ ಪರ ಭಾಷೆಯಲ್ಲೂ ಸದ್ದು ಮಾಡುತ್ತಿದೆ.

ನಟ ಪ್ರಜ್ವಲ್ ದೇವರಾಜ್

ಟೀಸರ್ ನೋಡಿದ ಅನೇಕ ಮಂದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಸಿನಿಮಾದ ಮೇಲಿನ ಡಿಮ್ಯಾಂಡ್ ಕೂಡ ಹೆಚ್ಚಾಗಿದೆ. ಕೇವಲ ಕನ್ನಡದಲ್ಲಿ ಮಾತ್ರ ತಯಾರಾಗುತ್ತಿರುವ ಕರಾವಳಿ ಸಿನಿಮಾ ಪರಭಾಷೆಯಲ್ಲೂ ರಿಲೀಸ್ ಮಾಡುವಂತೆ ಅನೇಕರು ಕೇಳಿಕೊಳ್ಳುತ್ತಿದ್ದಾರೆ. ಇನ್ನು ಸಿನಿಮಾದ ಚಿತ್ರೀಕರಣವೇ ಪ್ರಾರಂಭವಾಗಿಲ್ಲ ಆದರೆ ಆಗಲೇ ಸ್ಯಾಂಡಲ್​ವುಡ್ ಮಾತ್ರವಲ್ಲದೆ ಪರಭಾಷೆಯಲ್ಲೂ ಸಿನಿಮಾದ ಬೇಡಿಕೆ ಹೆಚ್ಚಾಗಿರುವುದು ಸಿನಿಮಾ ತಂಡಕ್ಕೆ ಖುಷಿಯ ಜೊತೆಗೆ, ಜವಾಬ್ದಾರಿ ಕೂಡ ಅಷ್ಟೇ ಹೆಚ್ಚಾಗಿದೆ. ಸದ್ಯ ಕರಾವಳಿ ಸಿನಿಮಾದ ಚಿತ್ರೀಕರಣ ಇದೇ ತಿಂಗಳಿನಿಂದ ಪ್ರಾರಂಭವಾಗಲಿದೆ. ಇನ್ನು ಸಿನಿಮಾ ಹೇಗಿರಲಿದೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಮನೆ ಮಾಡಿದೆ.

ಇದನ್ನೂ ಓದಿ:'ಒಂದು ಸರಳ ಪ್ರೇಮಕಥೆ' ಚಿತ್ರದ ಹಾಡು ಬಿಡುಗಡೆ; ಪ್ರಿಯತಮೆ ಹುಡುಕಾಟದಲ್ಲಿ ವಿನಯ್ ರಾಜ್​​ಕುಮಾರ್

ABOUT THE AUTHOR

...view details