ಕೆಜಿಎಫ್ ಸಿನಿಮಾ ಮೂಲಕ ಖ್ಯಾತಿ ಗಳಿಸಿ, ಕೆಜಿಎಫ್ ತಾತ ಎಂದೇ ಹೆಸರುವಾಸಿಯಾಗಿದ್ದ ನಟ ಕೃಷ್ಣ ಜಿ ರಾವ್(73) ಅವರು ಇಂದು ಮಧ್ಯಾಹ್ನ ಇಹಲೋಕ ತ್ಯಜಿಸಿದ್ದಾರೆ. ಉಸಿರಾಟದ ತೊಂದರೆ ಹಾಗೂ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಅವರು ಕಳೆದ ಒಂದು ವಾರದಿಂದ ಬೆಂಗಳೂರಿನ ಸೀತಾ ಸರ್ಕಲ್ ಬಳಿಯ ವಿನಾಯಕ ಆಸ್ಪತ್ರೆ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಆದರೆ ಬುಧವಾರ ಮಧ್ಯಾಹ್ನ ಚಿಕಿತ್ಸೆಗೆ ಸ್ಪಂದಿಸದೆ ಕೃಷ್ಣ ಜಿ ರಾವ್ ನಿಧನರಾಗಿದ್ದಾರೆ ಎಂದು ಅವರ ಸಹೋದರ ನಾಗೇಂದ್ರ ರಾವ್ ತಿಳಿಸಿದ್ದಾರೆ. ಕೆಜಿಎಫ್ ಹಾಗೂ ಕೆಜಿಎಫ್ 2 ಸಿನಿಮಾದಲ್ಲಿನ ಪಾತ್ರವು ಕೃಷ್ಣ ಅವರಿಗೆ ದೊಡ್ಡಮಟ್ಟದ ಖ್ಯಾತಿ ತಂದುಕೊಟ್ಟಿತ್ತು. ಕೆಜಿಎಫ್ ಯಶಸ್ಸಿನ ಬಳಿಕ ಕೃಷ್ಣ ಜಿ ರಾವ್ ಅವರು ಅವರು ನಾಲ್ಕೈದು ಚಿತ್ರಗಳಲ್ಲಿ ಅಭಿನಯಿಸಿದ್ದರು. 'ನ್ಯಾನೋ ನಾರಾಯಣಪ್ಪ' ಚಿತ್ರದಲ್ಲಿ ಲೀಡ್ ರೋಲ್ ಮಾಡಿದ್ದರು. ಮಲೆಯಾಳಂ ಸಿನಿಮಾ 'ಧೂಮಂ' ಕೃಷ್ಣ ಅವರು ನಟಿಸಿದ ಕೊನೆಯ ಚಿತ್ರವಾಗಿದೆ.