ಬೆಂಗಳೂರು : ಹೊಸಬರ ಪ್ರಯತ್ನಗಳಿಗೆ ಸದಾ ಬೆನ್ನು ತಟ್ಟಿ ಪ್ರೋತ್ಸಾಹಿಸುವ ಸ್ಯಾಂಡಲ್‌ವುಡ್ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್, ಬಡಿಗೇರ್ ದೇವೇಂದ್ರ ನಿರ್ದೇಶನದ ಪ್ರಯೋಗಾತ್ಮಕ 'ಇನ್' ಚಿತ್ರದ ಟೀಸರ್ ಬಿಡುಗಡೆ ಮಾಡಿದ್ದಾರೆ. ಈ ಹಿಂದೆ ಮಹಿಳಾ ಪ್ರಧಾನ ರುದ್ರಿ ಚಿತ್ರವನ್ನು ನಿರ್ದೇಶಿಸಿದ್ದ ಬಡಿಗೇರ್ ದೇವೇಂದ್ರ ಅವರು, ಈ ಬಾರಿಯೂ ಒಂದು ಮಹಿಳಾ ಪ್ರಧಾನ ಸಿನಿಮಾ ನಿರ್ದೇಶಿಸಿದ್ದಾರೆ. ಚಿತ್ರದ ಟೀಸರ್ ಬಿಡುಗಡೆ ಮಾಡಿರುವ ನಟ ಸುದೀಪ್ ಮೆಚ್ಚುಗೆ ವ್ಯಕ್ತಪಡಿಸಿ, ಈ ಸಿನಿಮಾ ಯಶಸ್ವಿಯಾಗಲಿ ಎಂದು ಚಿತ್ರ ತಂಡಕ್ಕೆ ಶುಭ ಹಾರೈಸಿದ್ದಾರೆ.
ಚಿತ್ರದ ಕುರಿತು ನಿರ್ದೇಶಕ ಬಡಿಗೇರ್ ದೇವೇಂದ್ರ ಮಾತನಾಡಿ, ಕೊರೊನಾ ಲಾಕ್‌ಡೌನ್ ಸಂದರ್ಭದಲ್ಲಿ ಸಿದ್ಧವಾಗಿರುವ ಪ್ರಯೋಗಾತ್ಮಕ ಚಿತ್ರ ಇದಾಗಿದೆ. ಕನ್ನಡ ಚಿತ್ರರಂಗದಲ್ಲಿ ಇದೊಂದು ವಿಭಿನ್ನ ಪ್ರಯತ್ನ ಎಂದು ಸುದೀಪ್ ಅಭಿಪ್ರಾಯ ಪಟ್ಟಿದ್ದಾರೆ. ಚಿತ್ರದ ನಾಯಕಿ ಪಾವನಾ ಗೌಡ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.