ಸಿಕ್ಕಾಪಟ್ಟೆ ಕ್ರೇಜ್ ಹುಟ್ಟಿಸಿರುವ ಕಿಚ್ಚ ಸುದೀಪ್ ಅಭಿನಯದ 'ವಿಕ್ರಾಂತ್ ರೋಣ' ಚಿತ್ರ ನಾಡಿದ್ದು(ಜುಲೈ 28) ತೆರೆಗೆ ಅಪ್ಪಳಿಸಲಿದೆ. ಅದಕ್ಕೋಸ್ಕರ ಭರದ ಪ್ರಚಾರ ಕಾರ್ಯ ನಡೆಯುತ್ತಿದೆ. ಇದರ ಮಧ್ಯೆ ಸಂಸದರು, ಉನ್ನತ ಅಧಿಕಾರಿಗಳಿಗೋಸ್ಕರ ಸುದೀಪ್ ದೆಹಲಿಯಲ್ಲಿ ವಿಶೇಷ ಪ್ರೀಮಿಯರ್ ಶೋ ಕಾರ್ಯಕ್ರಮ ಆಯೋಜನೆ ಮಾಡಿದ್ದಾರೆ.
ದೆಹಲಿಯಲ್ಲಿ ಜುಲೈ 28ರಂದು ಸಂಜೆ ಈ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ದೆಹಲಿಯ ಚಾಣಕ್ಯಪುರಿಯ ಪಿವಿಆರ್ ಥಿಯೇಟರ್ನಲ್ಲಿ ಪ್ರೀಮಿಯರ್ ಶೋ ಕಾರ್ಯಕ್ರಮ ನಡೆಯಲಿದೆ. ಇದರಲ್ಲಿ ಭಾಗಿಯಾಗುವಂತೆ ಸಂಸದ ಪ್ರತಾಪ್ ಸಿಂಹ ಅವರಿಗೂ ಆಹ್ವಾನ ಹೋಗಿದೆ. ಇದಕ್ಕೆ ಸಂಬಂಧಿಸಿದಂತೆ ಟ್ವೀಟರ್ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ಸುದೀಪ್ಗೆ ಧನ್ಯವಾದ ಅರ್ಪಿಸಿದ್ದಾರೆ. ಈ ಪ್ರಿಮಿಯರ್ ಶೋನಲ್ಲಿ ರಾಜ್ಯಸಭಾ, ಲೋಕಸಭಾ ಸದಸ್ಯರು ಹಾಗೂ ಕೇಂದ್ರ ಸರ್ಕಾರದ ಉನ್ನತ ಹುದ್ದೆಯಲ್ಲಿರುವ ಅಧಿಕಾರಿಗಳಿಗೆ ಆಹ್ವಾನ ನೀಡಲಾಗಿದೆ ಎಂದು ತಿಳಿದು ಬಂದಿದೆ.