ಕರ್ನಾಟಕ

karnataka

ರಾಜ್ಯ ಸರ್ಕಾರಿ ಗೋಶಾಲೆಗಳಿಂದ 31 ಗೋವುಗಳನ್ನು ದತ್ತು ಪಡೆಯಲಿರುವ ಕಿಚ್ಚ ಸುದೀಪ್

ಸಿಎಂ ಬೊಮ್ಮಾಯಿ ಅವರು ತಮ್ಮ ಹುಟ್ಟುಹಬ್ಬದಂದು 11 ಗೋವು ದತ್ತು ಪಡೆದು, ತಮ್ಮ ಕನಸಿನ ಕೂಸಾದ ಪುಣ್ಯಕೋಟಿ ದತ್ತು ಯೋಜನೆ ಜಾರಿಗೆ ತಂದರು. ನಾನು ಕೂಡ ಜಿಲ್ಲೆಗೆ ಒಂದರಂತೆ 31 ಗೋವುಗಳನ್ನು ದತ್ತು ಪಡೆದಿದ್ದೇನೆ ಎಂದು ಸಚಿವ ಪ್ರಭು ಚವ್ಹಾಣ್ ಅವರು ವಿವರಿಸಿದಾಗ, ನಾನು ಕೂಡ ನಿಮ್ಮಂತೆ ದತ್ತು ಪಡೆಯುತ್ತಿದ್ದೇನೆ ಎಂದು ಕಿಚ್ಚ ಸುದೀಪ್ ಅವರು ಸಚಿವರಿಗೆ ತಿಳಿಸಿದರು.

By

Published : Nov 24, 2022, 3:05 PM IST

Published : Nov 24, 2022, 3:05 PM IST

Updated : Nov 24, 2022, 3:25 PM IST

Kichcha Sudeep decide to adopt 31 cows from Goshalas
ಗೋವುಗಳನ್ನು ದತ್ತು ಪಡೆಯಲಿರುವ ಕಿಚ್ಚ ಸುದೀಪ್

ಭಾರತೀಯ ಚಿತ್ರರಂಗದಲ್ಲಿ ತಮ್ಮದೇ ಸ್ಟಾರ್​ಡಮ್ ಹೊಂದಿರುವ ನಟ‌ ಕಿಚ್ಚ ಸುದೀಪ್. ಸಿನಿಮಾ ಜೊತೆಗೆ ಸಾಮಾಜಿಕ ಕೆಲಸಗಳನ್ನು ಮಾಡೋದ್ರಲ್ಲೂ ಸದಾ ಮುಂದು. ಈಗ ಮತ್ತೊಂದು ಒಳ್ಳೆ ಕೆಲಸಕ್ಕೆ ಕೈ ಹಾಕಿದ್ದಾರೆ ಅಭಿನಯ ಚಕ್ರವರ್ತಿ.

ಸರ್ಕಾರಿ ಗೋಶಾಲೆಗಳಲ್ಲಿ ಪ್ರತಿ ಜಿಲ್ಲೆಗೆ ಒಂದರಂತೆ 31 ಗೋವುಗಳನ್ನು ದತ್ತು ಪಡೆಯಲು ಕಿಚ್ಚ ಸುದೀಪ್ ಮುಂದಾಗಿದ್ದಾರೆ. ಇಂದು ತಮ್ಮ ನಿವಾಸದಲ್ಲಿ ಪಶುಸಂಗೋಪನಾ ಸಚಿವ ಪ್ರಭು ಬಿ. ಚವ್ಹಾಣ್ ಅವರೊಂದಿಗೆ ಗೋಪೂಜೆ ನೇರವೇರಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಗೋಸಂಕುಲ ಸಂರಕ್ಷಣೆಯಲ್ಲಿ ಮಹತ್ವದ ಕೆಲಸ ಮಾಡುತ್ತಿದೆ ಎಂದರು.

ಗೋವುಗಳನ್ನು ದತ್ತು ಪಡೆಯಲಿರುವ ಕಿಚ್ಚ ಸುದೀಪ್

ನನ್ನನ್ನು ಪುಣ್ಯಕೋಟಿ ದತ್ತು ಯೋಜನೆಯ ರಾಯಭಾರಿಯನ್ನಾಗಿ ನೇಮಕ ಮಾಡಿ ಸರ್ಕಾರ ನನ್ನ ಜವಾಬ್ದಾರಿಯನ್ನು ಹೆಚ್ಚಿಸಿದೆ. ನನ್ನನ್ನು ನೇಮಕ ಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವ ಪ್ರಭು ಚವ್ಹಾಣ್ ಅವರಿಗೆ ಕೃತಜ್ಞತೆ ತಿಳಿಸುತ್ತೇನೆ. ಸಾರ್ವಜನಿಕರು, ಚಿತ್ರರಂಗದ ಕಲಾವಿದರು, ಸಾರ್ವಜನಿಕ ಸಂಘ ಸಂಸ್ಥೆಗಳು ಗೋವುಗಳನ್ನು ದತ್ತು ಪಡೆಯಬೇಕು ಎಂದು ಸುದೀಪ್ ಮನವಿ ಮಾಡಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಹುಟ್ಟುಹಬ್ಬದಂದು 11 ಗೋವು ದತ್ತು ಪಡೆದು, ತಮ್ಮ ಕನಸಿನ ಕೂಸಾದ ಪುಣ್ಯಕೋಟಿ ದತ್ತು ಯೋಜನೆ ಜಾರಿಗೆ ತಂದರು. ನಾನು ಕೂಡ ಜಿಲ್ಲೆಗೆ ಒಂದರಂತೆ 31 ಗೋವುಗಳನ್ನು ದತ್ತು ಪಡೆದಿದ್ದೇನೆ ಎಂದು ಸಚಿವ ಪ್ರಭು ಚವ್ಹಾಣ್ ಅವರು ವಿವರಿಸಿದಾಗ, ನಾನು ಕೂಡ ನಿಮ್ಮಂತೆ ದತ್ತು ಪಡೆಯುತ್ತಿದ್ದೇನೆ ಎಂದು ಸುದೀಪ್ ಅವರು ಸಚಿವರಿಗೆ ತಿಳಿಸಿದರು.

ಗೋವುಗಳನ್ನು ದತ್ತು ಪಡೆಯಲಿರುವ ಕಿಚ್ಚ ಸುದೀಪ್

ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ತಂದ ನಂತರ 100 ಸರ್ಕಾರಿ ಗೋಶಾಲೆ ಸ್ಥಾಪಿಸಲಾಗುತ್ತಿದೆ.‌ ರಾಷ್ಟ್ರದಲ್ಲಿಯೇ ಪುಣ್ಯಕೋಟಿ ದತ್ತು ಯೋಜನೆ ಜಾರಿಗೆ ತಂದ ಮೊದಲ ರಾಜ್ಯ ಕರ್ನಾಟಕ. ಪ್ರಾಣಿ ಕಲ್ಯಾಣ ಮಂಡಳಿ, ಪ್ರಾಣಿ ಸಹಾಯವಾಣಿ ಕೇಂದ್ರ, ಪಶು ಸಂಜೀವಿನಿ ಆಂಬ್ಯುಲೆನ್ಸ್, ಗೋಮಾತ ಸಹಕಾರ ಸಂಘ, ಆತ್ಮ ನಿರ್ಭರ ಗೋಶಾಲೆ ಸ್ಥಾಪನೆ ಸೇರಿದಂತೆ ಹತ್ತು ಹಲವು ಕಾರ್ಯಕ್ರಮಗಳನ್ನು ಜಾರಿಗೆ ತರಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.

ಜಾನುವಾರುಗಳ ದತ್ತು ಯೋಜನೆಯಡಿ ಪುಣ್ಯಕೋಟಿ ದತ್ತು ಪೋರ್ಟಲ್‌ನಲ್ಲಿರುವ ಯಾವುದೇ ಗೋಶಾಲೆಗಳ ಪ್ರತಿ ಜಾನುವಾರುಗೆ ವಾರ್ಷಿಕ ರೂ.11,000/- (ರೂಪಾಯಿ ಹನ್ನೊಂದು ಸಾವಿರ)ಗಳು, ಜಾನುವಾರುಗಳಿಗಾಗಿ ಆಹಾರ ಪೂರೈಕೆ ಯೋಜನೆಯಡಿ ಸಾರ್ವಜನಿಕರು ತಮ್ಮ ಜೀವನದ ವಿಶೇಷ ಸಂದರ್ಭಗಳಲ್ಲಿ (ಹುಟ್ಟುಹಬ್ಬ, ಮದುವೆ ವಾರ್ಷಿಕೋತ್ಸವ ಇತ್ಯಾದಿ) ರಾಸುಗಳಿಗೆ ಒಂದು ದಿನಕ್ಕೆ ರೂ.70, ಗೋಶಾಲೆಗಳಿಗೆ ದೇಣಿಗೆ ಮತ್ತು ಗೋಶಾಲೆ ನಿರ್ವಹಣೆ ಯೋಜನೆಯಡಿ ಸಾರ್ವಜನಿಕರು ಪುಣ್ಯಕೋಟಿ ದತ್ತು ಪೋರ್ಟಲ್‌ನಲ್ಲಿರುವ ಯಾವುದೇ ಗೋಶಾಲೆಗಳಿಗೆ ಕನಿಷ್ಠ ರೂ.10 ರಿಂದ ತಮ್ಮ ಶಕ್ತಾನುಸಾರ ಎಷ್ಟು ಬೇಕಾದರೂ ಮೂಲಭೂತ ಸೌಕರ್ಯ ಹಾಗೂ ಇತರೆ ವೆಚ್ಚಗಳಿಗಾಗಿ ದೇಣಿಗೆ ನೀಡಬಹುದು. ಈ ಯೋಜನೆಗೆ ಸೆಕ್ಷನ್ 80ಜಿ ಅಡಿ ಆದಾಯ ತೆರಿಗೆ ವಿನಾಯಿತಿ ನೀಡಲಾಗಿದೆ ಎಂದು ಸಚಿವರು ಪುಣ್ಯಕೋಟಿ ಯೋಜನೆ ಕುರಿತು ಮಾಹಿತಿ ನೀಡಿದರು.

ಗೋಶಾಲೆಗಳನ್ನು ಆರ್ಥಿಕವಾಗಿ ಸದೃಢಗೊಳಿಸಿ, ಸಾರ್ವಜನಿಕರ ಸಹಕಾರದಿಂದ ಯಾವುದೇ ಅಡಚಣೆಯಿಲ್ಲದೇ ನಡೆಸುವುದು ಈ ಯೋಜನೆ ಉದ್ದೇಶ. ಗೋವು ದತ್ತು, ಗೋಶಾಲೆಗೆ ದೇಣಿಗೆ ಮತ್ತು ಜಾನುವಾರುಗಳಿಗೆ ಆಹಾರ ಯೋಜನೆಯಡಿ ಸಾರ್ವಜನಿಕರು ಪಾಲ್ಗೊಳ್ಳುವಂತೆ ಗೋವುಗಳ ಪಾಲನೆಗೆ ಅವಕಾಶ ಕಲ್ಪಿಸಲಾಗಿದೆ. ತಾವು ಸರ್ಕಾರದೊಂದಿಗೆ ಕೈಜೋಡಿಸಿ ಗೋಸಂಕುಲ ಸಂರಕ್ಷಣೆಯಲ್ಲಿ ಭಾಗವಹಿಸಬೇಕು ಎಂದು ಪ್ರಭು ಚವ್ಹಾಣ್ ಅವರು ಚಿತ್ರನಟ ಸುದೀಪ್ ಅವರಿಗೆ ಮನವಿ ಮಾಡಿದರು.

ಇದನ್ನೂ ಓದಿ:ಅಂಬಿ ಪುಣ್ಯಸ್ಮರಣೆ: ಭಾವನಾತ್ಮಕ ಟ್ವೀಟ್ ಮಾಡಿದ ಪತ್ನಿ ಸುಮಲತಾ

ಇದೇ ಸಂದರ್ಭದಲ್ಲಿ ನಟ ಸುದೀಪ್ ಅವರಿಗೆ ಪುಣ್ಯಕೋಟಿ ದತ್ತು ಯೋಜನೆಯ ರಾಯಭಾರಿ ನೇಮಕಾತಿ ಪತ್ರ ವಿತರಿಸಿ, ನೆನಪಿನ ಕಾಣಿಕೆ ನೀಡಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಇಲಾಖೆ ಕಾರ್ಯದರ್ಶಿ ಡಾ.ಸಲ್ಮಾ ಕೆ. ಫಾಹೀಮ್, ಆಯುಕ್ತೆ ಎಸ್. ಅಶ್ವಥಿ, ಅಪರ ನಿರ್ದೇಶಕ ಡಾ. ಶ್ರೀನಿವಾಸ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Last Updated : Nov 24, 2022, 3:25 PM IST

ABOUT THE AUTHOR

...view details