ಕನ್ನಡ ಚಿತ್ರರಂಗ ಅಲ್ಲದೇ ತಮಿಳು ಭಾಷೆಯಲ್ಲಿ ದೊಡ್ಡ ಮಟ್ಟದ ಹೈಪ್ ಕ್ರಿಯೇಟ್ ಮಾಡಿರೋ ಚಿತ್ರ ಮ್ಯಾಕ್ಸ್. ಕಿಚ್ಚ ಸುದೀಪ್ ಔಟ್ ಅಂಟ್ ಔಟ್ ಮಾಸ್ ಲುಕ್ನಲ್ಲಿ ಕಾಣಿಸಿಕೊಂಡಿರುವ ಮ್ಯಾಕ್ಸ್ ಚಿತ್ರ ತಂಡದಿಂದ ಹೊಸ ಅಪ್ಡೇಟ್ ಹೊರ ಬಿದ್ದಿದೆ. ಕನ್ನಡ ಮತ್ತು ತಮಿಳಿನಲ್ಲಿ ಏಕಕಾಲಕ್ಕೆ ನಿರ್ಮಾಣ ಆಗುತ್ತಿರುವ ಮ್ಯಾಕ್ಸ್ ಚಿತ್ರದ ಫೋಟೋವೊಂದನ್ನ ಇತ್ತೀಚಿಗೆ ಕಿಚ್ಚ ಹಂಚಿಕೊಂಡಿದ್ದರು. ಇದೀಗ ಮ್ಯಾಕ್ಸ್ ಸಿನಿಮಾ ಟೀಮ್ನಿಂದ ಬಿಗ್ ಅಪ್ಡೇಟ್ವೊಂದು ಸಿಕ್ಕಿದೆ.
ಸದ್ಯ ಚೆನ್ನೈನ ಮಹಾಬಲಿಪುರಂನಲ್ಲಿ ಅದ್ದೂರಿ ಸೆಟ್‌ಗಳನ್ನು ಹಾಕಿ ಭರದಿಂದ ಮ್ಯಾಕ್ಸ್ ಚಿತ್ರದ ಚಿತ್ರೀಕರಣ ಮಾಡಲಾಗುತ್ತಿದೆ. ತಮಿಳು ನಿರ್ದೇಶಕ ವಿಜಯ್ ಕಾರ್ತಿಕೇಯ ಆಕ್ಷನ್ ಕಟ್ ಹೇಳುತ್ತಿರುವ ಮ್ಯಾಕ್ಸ್ ಚಿತ್ರದಲ್ಲಿ ಕಿಚ್ಚನ ಪಾತ್ರ ಏನು ಅನ್ನೋದನ್ನ ಚಿತ್ರತಂಡ ರಿವೀಲ್ ಮಾಡಿದೆ. ಈ ಚಿತ್ರದಲ್ಲಿ ಕಿಚ್ಚ ಸುದೀಪ್ ಖಡಕ್ ಪೊಲೀಸ್ ಆಫೀಸರ್ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಆ ಪಾತ್ರದ ಹೆಸರು ಅರ್ಜುನ್ ಮಹಾಕ್ಷಯ್.
ಯೆಸ್ ಅರ್ಜುನ್ ಮಹಾಕ್ಷಯ್ ಖಡಕ್ ಪೊಲೀಸ್ ಆಫೀಸರ್. 2 ತಿಂಗಳು ಅಮಾನತಿನಲ್ಲಿದ್ದ ಅರ್ಜುನ್ ಬಳಿಕ ಹೊಸ ಪೊಲೀಸ್ ಠಾಣೆಯಲ್ಲಿ ಡ್ಯೂಟಿಗೆ ರಿಪೋರ್ಟ್ ಮಾಡಿಕೊಳ್ಳುತ್ತಾನೆ. ಈ ಹಾದಿಯಲ್ಲಿ ಮಂತ್ರಿಗಳ ಮಗ ತನ್ನ ಇಲಾಖೆಯ ಅಧಿಕಾರಿಗಳ ಮೇಲೆ ದೌರ್ಜನ್ಯ ಎಸಗುತ್ತಿರುವುದನ್ನು ನೋಡಿ ಬಂಧಿಸುತ್ತಾನೆ. ದುರಾದೃಷ್ಟವಶಾತ್ ಆತ ಸಾಯ್ತಾನೆ. ಮುಂದೆ ಅರ್ಜುನ್ ಏನು ಮಾಡ್ತಾನೆ? ಅನ್ನೋದೇ ಮ್ಯಾಕ್ಸ್ ಸಿನಿಮಾ ಕಥೆ. ಈ ಹಿಂದೆ ಬಿಡುಗಡೆಯಾಗಿದ್ದ ಫಸ್ಟ್ ಲುಕ್ ಟೀಸರ್ ಸೂಪರ್ ಹಿಟ್ ಆಗಿತ್ತು. ಕಿಚ್ಚನ ಖಡಕ್ ಲುಕ್, ಬಾಡಿ ಲಾಂಗ್ವೇಜ್ ನೋಡಿ ಅಭಿಮಾನಿಗಳು ಫಿದಾ ಆಗಿದ್ದರು. ಇದೀಗ ಅರ್ಜುನ್ ಮಹಾಕ್ಷಯ್ ಕಥೆ ಕೇಳಿ ಥ್ರಿಲ್ಲಾಗಿದ್ದಾರೆ.