ಕರ್ನಾಟಕ

karnataka

ETV Bharat / entertainment

ಕನ್ನಡತಿ ಖ್ಯಾತಿಯ ಕಿರಣ್ ರಾಜ್ ಅಭಿನಯದ ಶೇರ್ ಸಿನಿಮಾ ಮುಹೂರ್ತ.. ಆ. 22ರಿಂದ‌ ಚಿತ್ರೀಕರಣ - ಕಂಠೀರವ ಸ್ಟುಡಿಯೋ

ಕನ್ನಡತಿ ಖ್ಯಾತಿಯ ಕಿರಣ್ ರಾಜ್ ಅಭಿನಯದ ಶೇರ್ ಸಿನಿಮಾ ಮುಹೂರ್ತ ಸಮಾರಂಭ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿತು.

Kiran Raj starrer sher film shooting starts from august 22nd
ಕನ್ನಡತಿ ಖ್ಯಾತಿಯ ಕಿರಣ್ ರಾಜ್ ಅಭಿನಯದ ಶೇರ್ ಸಿನಿಮಾ ಮುಹೂರ್ತ

By

Published : Aug 18, 2022, 12:25 PM IST

ಕನ್ನಡತಿ ಖ್ಯಾತಿಯ ಕಿರಣ್ ರಾಜ್ ಶೇರ್ ಸಿನಿಮಾ ಪಾತ್ರಕ್ಕೆ ಬಣ್ಣ ಹಚ್ಚಲು ಗ್ರೀನ್‌ ಸಿಗ್ನಲ್ ಕೊಟ್ಟಿದ್ದಾರೆ.‌ ಬುಧವಾರ ಶೇರ್ ಸಿನಿಮಾ ಮುಹೂರ್ತ ಸಮಾರಂಭ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿತು. ಬೀದರ್ ಮೂಲದ ನಿರ್ಮಾಪಕ ಡಾ. ಸುದರ್ಶನ್ ಸುಂದರರಾಜ್ ಚಿತ್ರದ ಮೊದಲ ಸನ್ನಿವೇಶಕ್ಕೆ ಆರಂಭ ಫಲಕ ತೋರಿಸಿದರು. ಸಾಕಷ್ಟು ಗಣ್ಯರು ಮುಹೂರ್ತ ಸಮಾರಂಭಕ್ಕೆ ಸಾಕ್ಷಿಯಾದರು.

ಶೇರ್ ಚಿತ್ರದ ನಿರ್ದೇಶಕ ಪ್ರಸಿದ್ಧ್ ಮಾತನಾಡಿ, ಶೇರ್ ಪಕ್ಕಾ ಆ್ಯಕ್ಷನ್ ಥ್ರಿಲ್ಲರ್ ಚಿತ್ರ. ಅನಾಥಾಶ್ರಮದಲ್ಲಿ ಹೆಚ್ಚಿನ ಕಥೆ ನಡೆಯುತ್ತದೆ. ಅಲ್ಲೊಬ್ಬ ರಾಜಕಾರಣಿ ಇರುತ್ತಾರೆ, ಎರಡು ಗುಂಪುಗಳೂ ಸಹ ಇರುತ್ತವೆ. ಒಂದು ಗುಂಪಿನವರು ಅನಾಥಾಶ್ರಮವನ್ನೇ ತಮ್ಮ ಅಡ್ಡ ಮಾಡಿಕೊಂಡಿರುತ್ತಾರೆ. ಅಲ್ಲಿ ಒಳ್ಳೆಯ ಗುಂಪು ಸಹ ಇರುತ್ತದೆ. ನಾಯಕ-ನಾಯಕಿ ಅನಾಥರ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಎ.ಪಿ.ಎಂ.ಸಿ ಮಾರುಕಟ್ಟೆಯಲ್ಲೂ ನಮ್ಮ ಚಿತ್ರದ ಕಥೆ ಸಾಗುತ್ತದೆ ಎಂದು ತಿಳಿಸಿದರು.

ಶೇರ್ ಸಿನಿಮಾ ನಟ ನಟಿ

ಕಿರಣ್ ರಾಜ್ ಚಾಕೋಲೆಟ್ ಹೀರೋ ಅಂತಲೇ ಫೇಮಸ್. ಅವರಿಗೆ ರಗಡ್ ಲುಕ್ ಸರಿ ಹೊಂದುವುದೇ? ಅಂತ ಅನೇಕರು ಕೇಳಿದರು. ಆದರೆ ಮಾಸ್ ಪಾತ್ರಕ್ಕೆ ಬೇಕಾದ ಕಿಕ್ ಬಾಕ್ಸಿಂಗ್, ಮಾರ್ಷಲ್ ಆರ್ಟ್ಸ್ ಮುಂತಾದವುಗಳನ್ನು ಕಿರಣ್ ರಾಜ್ ಅಭ್ಯಾಸ ಮಾಡಿದ್ದಾರೆ. ನನ್ನ ಹಾಗೂ ಕಿರಣ್ ರಾಜ್ ಕಾಂಬಿನೇಶನ್​​ನಲ್ಲಿ ಮೂಡಿಬಂದಿರುವ ಭರ್ಜರಿ ಗಂಡು ಚಿತ್ರ ಸಹ ಸೆಪ್ಟೆಂಬರ್​ನಲ್ಲಿ ತೆರೆ ಕಾಣಲಿದೆ. ಆ ಚಿತ್ರದಲ್ಲಿ ಭಾಗಿಯಾಗಿರುವ ಬಹುತೇಕ ತಂಡವೇ ಈ ಸಿನಿಮಾದಲ್ಲಿ ಮುಂದುವರೆಯಲಿದೆ. ಬೀದರ್ ಸುದರ್ಶನ್ ಸುಂದರರಾಜ್ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ ಎಂದರು.

ಬಳಿಕ‌ ನಟ ಕಿರಣ್ ರಾಜ್ ಮಾತನಾಡಿ,‌ ಆ್ಯಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ‌ ಚಿತ್ರದಲ್ಲಿ ನಟಿಸಲು ಖುಷಿಯಾಗಿದೆ. ಇದಕ್ಕಾಗಿ ಕಿಕ್ ಬಾಕ್ಸಿಂಗ್, ಮಾರ್ಷಲ್ ಆರ್ಟ್ಸ್ ಮುಂತಾದ ಕಲೆಗಳನ್ನು ಅಭ್ಯಾಸ ಮಾಡಿದ್ದೇನೆ. ಭರ್ಜರಿ ಗಂಡು ಚಿತ್ರದಲ್ಲೂ ಸಾಹಸ ಸನ್ನಿವೇಶಗಳು ಭರ್ಜರಿಯಾಗಿ ಮೂಡಿಬಂದಿವೆ ಎಂದು ಹೇಳಿದರು.

ಮೂಲತಃ ಬೀದರ್​ನವರಾದ ಸುದರ್ಶನ್ ಬೀದರ್​ನಲ್ಲೇ ವಕೀಲರಾಗಿ ಕಾರ್ಯ ನಿರ್ವಸುತ್ತಿದ್ದಾರೆ. ರಾಜಕೀಯದಲ್ಲೂ ಇದ್ದಾರೆ. ನಿರ್ದೇಶಕರು ಹೇಳಿದ ಕಥೆ ಇಷ್ಟವಾಯಿತು. ಹಾಗಾಗಿ ನಿರ್ಮಾಣಕ್ಕೆ ಮುಂದಾದೆ ಎಂದು ತಿಳಿಸಿದರು. ಈ ಚಿತ್ರಕ್ಕೆ ಕಿಟ್ಟಿ ಕೌಶಿಕ್ ಛಾಯಾಗ್ರಹಣವಿದ್ದು, ಗುಮ್ಮಿನೇನಿ‌ ವಿಜಯ್ ಸಂಗೀತ ನೀಡಲಿದ್ದಾರೆ‌. ಶೇರ್ ಸಿನಿಮಾ ಶೂಟಿಂಗ್ ಇದೇ 22ರಿಂದ‌ ಆರಂಭವಾಗಲಿದೆ.

ABOUT THE AUTHOR

...view details