ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಅಭಿನಯದ 'ಕಿಸಿ ಕಾ ಭಾಯ್ ಕಿಸಿ ಕಿ ಜಾನ್' ಬಿಡುಗಡೆಗೆ ಕ್ಷಣಗಣನೆ ಆರಂಭವಾಗಿದೆ. ಈಗಾಗಲೇ ಚಿತ್ರತಂಡದಿಂದ ಭರ್ಜರಿ ಪ್ರಚಾರ ಕಾರ್ಯ ಕೂಡಾ ನಡೆದಿದೆ. ಅಭಿಮಾನಿಗಳು ಕಾತರದಿಂದ ಕಾಯುತ್ತಿರುವ ಈ ಬಹು ನಿರೀಕ್ಷಿತ ಚಿತ್ರ ನಾಳೆ ಅಂದರೆ ಏಪ್ರಿಲ್ 21ರಂದು ದೇಶ ಸೇರಿದಂತೆ ವಿಶ್ವಾದ್ಯಂತ ಅದ್ಧೂರಿಯಾಗಿ ತೆರೆ ಕಾಣಲಿದೆ.
100ಕ್ಕೂ ಹೆಚ್ಚು ದೇಶಗಳಲ್ಲಿ ರಿಲೀಸ್: 'ಕಿಸಿ ಕಾ ಭಾಯ್ ಕಿಸಿ ಕಿ ಜಾನ್' ಸಿನಿಮಾ ಭಾರತದಲ್ಲಿ 4,500ಕ್ಕೂ ಹೆಚ್ಚು ಸ್ಕ್ರೀನ್‌ಗಳಲ್ಲಿ ಮತ್ತು ವಿದೇಶದಲ್ಲಿ 1,200ಕ್ಕೂ ಹೆಚ್ಚು ಸ್ಕ್ರೀನ್‌ಗಳಲ್ಲಿ ಪ್ರದರ್ಶನ ಕಾಣಲಿದೆ. 100ಕ್ಕೂ ಹೆಚ್ಚು ದೇಶಗಳಲ್ಲಿ ರಿಲೀಸ್ ಆಗುತ್ತಿದ್ದು, ದಿನಕ್ಕೆ 16 ಸಾವಿರಕ್ಕೂ ಹೆಚ್ಚು ಶೋಗಳು ನಡೆಯಲಿವೆ ಎಂದು ಸಲ್ಮಾನ್ ಖಾನ್ ಫಿಲ್ಮ್ಸ್ ತಮ್ಮ ಅಧಿಕೃತ ಇನ್ಸ್ಟಾ ಪೇಜ್ನಲ್ಲಿ ಮಾಹಿತಿ ಹಂಚಿಕೊಂಡಿದೆ.
ಸಲ್ಮಾನ್ ಖಾನ್ ಫಿಲ್ಮ್ಸ್ ಮಾಹಿತಿ: ತಮ್ಮ ಇನ್‌ಸ್ಟಾಗ್ರಾಮ್ ಪುಟದಲ್ಲಿ ಮಾಹಿತಿ ನೀಡಿದ ಸಲ್ಮಾನ್ ಖಾನ್ ಫಿಲ್ಮ್ಸ್, ’ಕಿಸಿ ಕಾ ಭಾಯಿ ಕಿಸಿ ಕಿ ಜಾನ್’ ಚಲನಚಿತ್ರವು 4,500ಕ್ಕೂ ಹೆಚ್ಚು ದೇಶೀಯ ಥಿಯೇಟರ್‌ಗಳಲ್ಲಿ ಬಿಡುಗಡೆ ಆಗಲಿದೆ ಮತ್ತು ಚಿತ್ರವು ದೇಶದಲ್ಲಿ ದಿನಕ್ಕೆ 16 ಸಾವಿರಕ್ಕೂ ಹೆಚ್ಚು ಪ್ರದರ್ಶನಗಳನ್ನು ನಡೆಸಲಿದೆ ಎಂದು ತಿಳಿಸಿದೆ. ಸಾಗರೋತ್ತರದಲ್ಲಿ, ಚಿತ್ರವು 100ಕ್ಕೂ ಹೆಚ್ಚು ದೇಶಗಳಲ್ಲಿ 1,200ಕ್ಕೂ ಹೆಚ್ಚು ಪರದೆಗಳಲ್ಲಿ ಪ್ರದರ್ಶನ ಕಾಣಲಿದೆ. ಒಟ್ಟಿನಲ್ಲಿ ’ಕಿಸಿ ಕಾ ಭಾಯ್ ಕಿಸಿ ಕಿ ಜಾನ್’ ಚಿತ್ರ ವಿಶ್ವದಾದ್ಯಂತ 5,700 ಸ್ಕ್ರೀನ್ ಗಳಲ್ಲಿ ಬಿಡುಗಡೆಯಾಗಲಿದೆ.