ಬಾಲಿವುಡ್ನ ನಟ ಸುನೀಲ್ ಶೆಟ್ಟಿ ಪುತ್ರಿ, ನಟಿ ಅಥಿಯಾ ಶೆಟ್ಟಿ 30ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ನಟಿಗೆ ಕುಟುಂಬಸ್ಥರು, ಆತ್ಮೀಯರು ಸೇರಿದಂತೆ ಅಭಿಮಾನಿಗಳು ಶುಭಾಶಯ ಕೋರುತ್ತಿದ್ದಾರೆ.
ಇನ್ಸ್ಟಾಗ್ರಾಮ್ನಲ್ಲಿ ಸುನೀಲ್ ಶೆಟ್ಟಿ ಮಗಳೊಂದಿಗಿನ ಫೋಟೋ ಶೇರ್ ಮಾಡಿ, ಹುಟ್ಟುಹಬ್ಬದ ಶುಭಾಶಯಗಳು ನನ್ನ ಜೀವನ ಎಂದು ಬರೆದಿದ್ದಾರೆ. ಚಿತ್ರದಲ್ಲಿ ತಂದೆ-ಮಗಳು ನಗು ಮೊಗದಲ್ಲಿ ಮಿಂಚಿದ್ದಾರೆ. ಈ ಫೋಟೋ ಭಾರಿ ಮೆಚ್ಚುಗೆ ಪಡೆದಿದೆ.
ಟೀಂ ಇಂಡಿಯಾ ಉಪನಾಯಕ ಕೆಎಲ್ ರಾಹುಲ್ ಭಾವಿ ಪತ್ನಿ ಅಥಿಯಾ ಶೆಟ್ಟಿಗೆ ವಿಶೇಷವಾಗಿ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಪ್ರೀತಿ ತುಂಬಿದ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ. ಮೂರು ಚಿತ್ರಗಳನ್ನು ಹಂಚಿಕೊಂಡ ಅವರು, ನನ್ನ ಪ್ರೀತಿಗೆ ಜನ್ಮದಿನದ ಶುಭಾಶಯಗಳು, ನೀವು ಎಲ್ಲವನ್ನೂ ಉತ್ತಮಗೊಳಿಸುತ್ತೀರಿ ಎಂದು ಬರೆದಿದ್ದಾರೆ.
ಇದನ್ನೂ ಓದಿ:ಖುಷಿ ಜನ್ಮದಿನಕ್ಕೆ ವಿಶೇಷವಾಗಿ ಶುಭಕೋರಿದ ಸಹೋದರಿ ಜಾನ್ವಿ ಕಪೂರ್
ಪೋಸ್ಟ್ ಹಾಕಿದ ಕೂಡಲೇ ಅಥಿಯಾ ಶೆಟ್ಟಿ ಐ ಲವ್ ಯೂ ಎಂದು ಪ್ರತಿಕ್ರಿಯೆ ಕೊಟ್ಟಿದ್ದಾರೆ. ಇನ್ನೂ ಅಥಿಯಾ ಶೆಟ್ಟಿ ಮತ್ತು ಕೆಎಲ್ ರಾಹುಲ್ 2023ರ ಜನವರಿಯಲ್ಲಿ ಮಹಾರಾಷ್ಟ್ರದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಎಂದು ವರದಿಯಾಗಿದೆ.
ರಾಹುಲ್ ಮತ್ತು ಅಥಿಯಾ ಶೆಟ್ಟಿ