ಕರ್ನಾಟಕ

karnataka

ETV Bharat / entertainment

ನನ್ನ ಸಿನಿ ಜರ್ನಿಯಲ್ಲೇ ನಾನು ಕೇಳಿರುವ ಉತ್ತಮ ಕಥೆ 'ಕೌಸಲ್ಯ ಸುಪ್ರಜಾ ರಾಮ': ಡಾರ್ಲಿಂಗ್ ಕೃಷ್ಣ - Darling Krishna

ಯಶಸ್ಸಿಲೆಯಲ್ಲಿ ತೇಲುತ್ತಿರುವ 'ಕೌಸಲ್ಯ ಸುಪ್ರಜಾ ರಾಮ' ಚಿತ್ರತಂಡ ಹರ್ಷ ಹಂಚಿಕೊಂಡಿದೆ.

Kousalya Supraja Rama
'ಕೌಸಲ್ಯ ಸುಪ್ರಜಾ ರಾಮ'

By

Published : Aug 4, 2023, 1:28 PM IST

ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಹಿಟ್ ಚಿತ್ರಗಳನ್ನು ನೀಡಿರುವ ಶಶಾಂಕ್ ನಿರ್ದೇಶನದಲ್ಲಿ ಮೂಡಿ ಬಂದಿರುವ "ಕೌಸಲ್ಯ ಸುಪ್ರಜಾ ರಾಮ" ಚಿತ್ರ ಕಳೆದ ವಾರ ಬಿಡುಗಡೆಯಾಗಿ, ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಮುಂದುವರಿಸಿದೆ. ಡಾರ್ಲಿಂಗ್ ಕೃಷ್ಣ ಹಾಗೂ ಮಿಲನಾ ನಾಗರಾಜ್ ಜೋಡಿಯ ಈ ಸಿನಿಮಾ ಹಿಟ್​ ಆಗಿದ್ದು, ಯಶಸ್ಸಿನ ಖುಷಿಯನ್ನು ಚಿತ್ರತಂಡ ಹಂಚಿಕೊಂಡಿದೆ.

'ಕೌಸಲ್ಯ ಸುಪ್ರಜಾ ರಾಮ' ಕಲಾವಿದರು

ಈ ಗೆಲವು ನನಗೆ ಬೇಕಿತ್ತು ಎಂದು ಮಾತು ಆರಂಭಿಸಿದ ನಿರ್ದೇಶಕ ಶಶಾಂಕ್, "ಕೌಸಲ್ಯ ಸುಪ್ರಜಾ ರಾಮ ಚಿತ್ರದ ಕಥೆಯನ್ನು ಡಾರ್ಲಿಂಗ್ ಕೃಷ್ಣ ಅವರಿಗಾಗಿಯೇ ಮಾಡಿದ್ದು. ಸಾಮಾನ್ಯವಾಗಿ ನಾನು ಕಥೆ ಮಾಡಿಕೊಳ್ಳುತ್ತೇನೆ. ಬಳಿಕ ನಾಯಕರ ಬಳಿ ಚರ್ಚಿಸುತ್ತೇನೆ. ಆದರೆ, ಈ ಕಥೆಯನ್ನು ಕೃಷ್ಣ ಅವರಿಗಾಗಿಯೇ ಮಾಡಿದ್ದೇನೆ. ಮಿಲನಾ ನಾಗರಾಜ್ ಅವರು ಮೊದಲು ಈ ಪಾತ್ರಕ್ಕೆ ಒಪ್ಪಲಿಲ್ಲ. ನಾನು ಹಾಗೂ ಕೃಷ್ಣ ಸೇರಿ ಅವರನ್ನು ಒಪ್ಪಿಸಲು ಬಹಳ ಶ್ರಮ ಪಟ್ಟೆವು. ಇದೀಗ ಅವರ ಪಾತ್ರವನ್ನು ಎಲ್ಲರೂ ಮೆಚ್ಚಿಕೊಳ್ಳುತ್ತಿದ್ದಾರೆ. ಇನ್ನು ಈ ಚಿತ್ರ ಇಷ್ಟು ಅದ್ಧೂರಿಯಾಗಿ ಮೂಡಿಬರಲು ಬಿ.ಸಿ ಪಾಟೀಲ್ ಅವರು ಕಾರಣ. ನಮ್ಮ ಚಿತ್ರ ಕರ್ನಾಟಕ ಮಾತ್ರವಲ್ಲ, ಪಕ್ಕದ ಆಂಧ್ರಪ್ರದೇಶ ಹಾಗೂ ತಮಿಳುನಾಡಿನಲ್ಲೂ ಬಿಡುಗಡೆ ಆಗಿತ್ತು. ಅಲ್ಲಿನ ಜನರೂ ಸಹ ನಮ್ಮ ಚಿತ್ರವನ್ನು ಮೆಚ್ಚಿಕೊಂಡಿದ್ದಾರೆ'' ಎಂದು ತಿಳಿಸಿದರು.

'ಕೌಸಲ್ಯ ಸುಪ್ರಜಾ ರಾಮ' ತಂಡ

ಬಳಿಕ ಮಾತನಾಡಿದ‌ ನಟ ಡಾರ್ಲಿಂಗ್ ಕೃಷ್ಣ, ''ಶಶಾಂಕ್ ಸರ್ ನನ್ನ ಬಳಿ ಬಂದು, ಆ್ಯಕ್ಷನ್ ಜಾನರ್ ಸಿನಿಮಾ ಮಾಡೋಣವೇ? ಎಂದರು. ನಾನು ಬೇಡ ಸರ್, "ಕೃಷ್ಣ ಲೀಲಾ" ತರಹ ಕೌಟುಂಬಿಕ ಚಿತ್ರ ಮಾಡೋಣ ಎಂದು ತಿಳಿಸಿದೆ. ಒಂದು ತಿಂಗಳಲ್ಲಿ ಶಶಾಂಕ್ ಅವರು ಕಥೆ ಸಿದ್ಧ ಮಾಡಿಕೊಂಡು ಬಂದರು. ಚಿತ್ರ ಆರಂಭವಾಯಿತು. ನನ್ನ ಹತ್ತು ವರ್ಷಗಳ ಸಿನಿ ಜರ್ನಿಯಲ್ಲೇ ನಾನು ಕೇಳಿರುವ ಉತ್ತಮ ಕಥೆಯಿದು. ಚಿತ್ರ ಬಿಡುಗಡೆಯಾದ ಮೇಲೆ ಪ್ರೇಕ್ಷಕರು ತೋರಿಸುತ್ತಿರುವ ಪ್ರೀತಿಗೆ ಮನಸ್ಸು ತುಂಬಿ ಬಂದಿದೆ. ನನ್ನೊಡನೆ ನಟಿಸಿರುವ ಎಲ್ಲ ಕಲಾವಿದರ ಅದ್ಭುತ ಅಭಿನಯ, ತಂತ್ರಜ್ಞರ ಕಾರ್ಯವೈಖರಿ ಈ ಚಿತ್ರದ ಯಶಸ್ಸಿಗೆ ಕಾರಣ. ಎಲ್ಲರಿಗೂ ಧನ್ಯವಾದ'' ಎಂದು ತಿಳಿಸಿದರು.

ನಂತರ ಮಿಲನಾ ನಾಗರಾಜ್ ಮಾತನಾಡಿ, ''ನಾನು ಮೊದಲು ಈ ಪಾತ್ರ ಮಾಡಲು ಒಪ್ಪಿರಲಿಲ್ಲ. ಕೃಷ್ಣ ಹಾಗೂ ಶಶಾಂಕ್ ಅವರು ಒಪ್ಪಿಸಿದರು. ಸದ್ಯ ನನ್ನ ಪಾತ್ರಕ್ಕೆ ಸಿಗುತ್ತಿರುವ ಪ್ರಶಂಸೆ ಕಂಡು ಸಂತೋಷವಾಗಿದೆ'' ಎಂದು ತಿಳಿಸಿದರು. ನಟ ನಾಗಭೂಷಣ್ ಹಾಗೂ ಚಿತ್ರದ ಮತ್ತೊಬ್ಬ ನಾಯಕಿ ಬೃಂದಾ ಆಚಾರ್ಯ ಚಿತ್ರದ ಯಶಸ್ಸಿನ ಕುರಿತು ಹರ್ಷ ವ್ಯಕ್ತಪಡಿಸಿದರು. ಬೃಂದಾ ಆಚಾರ್ಯ ಅವರೇ ನಿರೂಪಣೆ ಮಾಡಿದ್ದು ವಿಶೇಷವಾಗಿತ್ತು.

ಇದನ್ನೂ ಓದಿ:Skanda: ಉಸ್ತಾದ್ ರಾಮ್ ಪೋತಿನೇನಿ ಜೊತೆ ಬಬ್ಲಿ ಬೆಡಗಿ ಶ್ರೀಲೀಲಾ ಬೊಂಬಾಟ್ ಡ್ಯಾನ್ಸ್

ಈ ಸಿನಿಮಾದ ನಿರ್ಮಾಪಕ ಬಿ.ಸಿ ಪಾಟೀಲ್ ಮಾತನಾಡಿ, ನನಗೆ ಶಶಾಂಕ್ ಅವರು ಕೌರವ ಚಿತ್ರದ ಕಾಲದಿಂದಲೂ ಪರಿಚಯ. ಈ ಚಿತ್ರದ ಕಥೆ ಅವರು ಹೇಳಿದ ತಕ್ಷಣ ನನಗೆ ಇಷ್ಟವಾಯಿತು. ನಿರ್ಮಾಣಕ್ಕೆ ಮುಂದಾದೆ. ಈಗ ಚಿತ್ರ ಬಿಡುಗಡೆಯಾಗಿ ಎಲ್ಲರ ಮನ ಗೆಲ್ಲುತ್ತಿದೆ. ಮುಂದಿನ ವಾರ ವಿದೇಶಗಳಲ್ಲೂ ಈ ಚಿತ್ರ ಬಿಡುಗಡೆಯಾಗಲಿದೆ. ಜೀ ವಾಹಿನಿಗೆ ಟಿವಿ ರೈಟ್ಸ್ ಹಾಗೂ ವೂಟ್​ಗೆ ಓಟಿಟಿ ಹಕ್ಕು ಮಾರಾಟವಾಗಿದೆ. ಚಿತ್ರದ ಯಶಸ್ಸಿಗೆ ಕಾರಾಣರಾದ ಪ್ರತಿಯೊಬ್ಬರಿಗೂ ಧನ್ಯವಾದ ಎಂದು ತಿಳಿಸಿದರು. ಈ ಸಂಧರ್ಭದಲ್ಲಿ ಸೃಷ್ಟಿ ಪಾಟೀಲ್ ಅವರು ಚಿತ್ರತಂಡಕ್ಕೆ ಅಭಿನಂದನೆ ತಿಳಿಸಿದರು‌.

ABOUT THE AUTHOR

...view details