ಕರ್ನಾಟಕ

karnataka

ETV Bharat / entertainment

ಐಪಿಎಸ್ ಅ‍ಧಿಕಾರಿಯ ನೈಜ ಕಥೆ "12th ಫೇಲ್".. ಕನ್ನಡದಲ್ಲಿ ಕೆಆರ್​ಜಿ ಸ್ಟುಡಿಯೋಸ್​ ವಿತರಣೆ - 12th ಫೇಲ್

ಕೆಆರ್​​ಜಿ ಸ್ಟುಡಿಯೋಸ್ ಸಂಸ್ಥೆ ಅನುರಾಗ್‍ ಪಾಠಕ್‍ ಅವರ ಕಾದಂಬರಿ ಆಧಾರಿತ ನೈಜ ಜೀವನದ ಕಥೆಯಾದ "12th ಫೇಲ್" ಸಿನಿಮಾವನ್ನು ಕನ್ನಡದಲ್ಲಿ ವಿತರಣೆ ಮಾಡುತ್ತಿದೆ.

KRG Studios promoting
KRG Studios promoting

By ETV Bharat Karnataka Team

Published : Oct 25, 2023, 7:57 PM IST

" ಪರಿಂದ", "1942 ಎ ಲವ್ ಸ್ಟೋರಿ", "ಥ್ರೀ ಇಡಿಯೆಟ್ಸ್" ಸೇರಿದಂತೆ ಅನೇಕ ಜನಪ್ರಿಯ ಚಿತ್ರಗಳ ನಿರ್ದೇಶಕ ವಿಧು ವಿನೋದ್ ಚೋಪ್ರಾ ನಿರ್ಮಾಣ ಹಾಗೂ ನಿರ್ದೇಶನದ ಬಹು ನಿರೀಕ್ಷಿತ ಪ್ಯಾನ್ ಇಂಡಿಯಾ ಚಿತ್ರ "12th ಫೇಲ್" ಅಕ್ಟೋಬರ್ 27 ರಂದು ಕನ್ನಡ, ಹಿಂದಿ ಸೇರಿದಂತೆ ಅನೇಕ ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗಲಿದೆ‌.

ಕರ್ನಾಟಕದಲ್ಲಿ ಈ ಚಿತ್ರದ ವಿತರಣೆ ಹಕ್ಕನ್ನು ಹೆಸರಾಂತ ಕೆಆರ್​​ಜಿ ಸ್ಟುಡಿಯೋಸ್ ಸಂಸ್ಥೆ ಪಡೆದುಕೊಂಡಿದೆ. 12th ಫೇಲ್‍ ಚಿತ್ರ ಅನುರಾಗ್‍ ಪಾಠಕ್‍ ಅವರ ಕಾದಂಬರಿಯನ್ನು ಆಧರಿಸಿದೆ. ಹಲವು ಅಡೆತಡೆಗಳನ್ನು ದಾಟಿ ಪರೀಕ್ಷೆಗಳಲ್ಲಿ ಉತ್ತೀರ್ಣರಾದ ಐಪಿಎಸ್ ಅ‍ಧಿಕಾರಿ ಮನೋಜ್‍ ಕುಮಾರ್ ಶರ್ಮಾ ಜೀವನವನ್ನು ಆಧರಿಸಿ ಈ ಸಿನಿಮಾ ತಯಾರಾಗಿದೆ.

ಮೇಧಾ ಶಂಕರ್ ಮತ್ತು ವಿಕ್ರಾಂತ್ ಮಾಸ್ಸೆ

ಚಿಕ್ಕ ವಯಸ್ಸಿನಿಂದ ವಿಧು ವಿನೋದ್ ಚೋಪ್ರಾ ಅವರ ಚಿತ್ರಗಳನ್ನು ನೋಡುತ್ತಾ ಬೆಳೆದವನು ನಾನು ಎಂದು ಮಾತು ಆರಂಭಿಸಿದ ಕೆ.ಆರ್.ಜಿ ಸಂಸ್ಥೆಯ ಕಾರ್ತಿಕ್ ಗೌಡ ಅವರು, ಈ ಚಿತ್ರವನ್ನು ಕರ್ನಾಟಕದಾದ್ಯಂತ ನಾವು ಸುಮಾರು 100 ಕ್ಕೂ ಅಧಿಕ ಚಿತ್ರಮಂದಿರದಲ್ಲಿ ಬಿಡುಗಡೆ ಮಾಡುತ್ತಿದ್ದೇವೆ. ರೋಹಿತ್ ಪದಕಿ ಅವರ ಸಾರಥ್ಯದಲ್ಲಿ ಈ ಚಿತ್ರವನ್ನು ಕನ್ನಡಕ್ಕೆ ಡಬ್ ಮಾಡಲಾಗಿದೆ. ಕನ್ನಡದ ಹಾಡುಗಳನ್ನು ಕೇಳಿ ನಿರ್ದೇಶಕರು ಸಂತೋಷ ಪಟ್ಟಿದ್ದಾರೆ. ತಮ್ಮ ಮುಂದಿನ ಚಿತ್ರಗಳನ್ನು ಕೆ.ಆರ್.ಜಿ ಸ್ಟುಡಿಯೋಸ್ ಮೂಲಕವೇ ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ. ವಿಧು ವಿನೋದ್ ಚೋಪ್ರಾ ಅವರಿಗೆ ಧನ್ಯವಾದ. ಸದಭಿರುಚಿಯ ಈ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು. ಇದೇ ವೇಳೆ ಉತ್ತಮ ಸಂದೇಶವುಳ್ಳ ಚಿತ್ರವನ್ನು ವಿತರಣೆ ಮಾಡುತ್ತಿರುವುದಕ್ಕೆ ಖುಷಿಯಾಗಿದೆ ಎಂದು ಕೆ.ಆರ್.ಜಿ ಸಂಸ್ಥೆಯ ಯೋಗಿ ಜಿ ರಾಜ್ ತಿಳಿಸಿದರು.

ಬಳಿಕ ವಿಕ್ರಾಂತ್ ಮಾಸ್ಸೆ ಮಾತನಾಡಿ ನಾನು ಈವರೆಗೂ ಸಾಕಷ್ಟು ಚಿತ್ರಗಳಲ್ಲಿ ನಟಿಸಿದ್ದೇನೆ. ಆದರೆ ಈ ಚಿತ್ರದ ಪಾತ್ರ ತುಂಬಾ ಚೆನ್ನಾಗಿದೆ. ವಿಧು ವಿನೋದ್ ಚೋಪ್ರಾ ಅವರು ಕರೆ ಮಾಡಿ ನೀವು ಈ ಚಿತ್ರದಲ್ಲಿ ನಟಿಸಬೇಕು ಎಂದಾಗ ತುಂಬಾ ಸಂತೋಷವಾಯಿತು. ಅಸಾಧ್ಯವನ್ನು ಸಾಧ್ಯವಾಗಿಸಿದ ಐ.ಪಿ.ಎಸ್ ಮನೋಜ್ ಕುಮಾರ್ ಶರ್ಮ ಅವರ ಜೀವನಾಧಾರಿತ ಈ ಚಿತ್ರದಲ್ಲಿ ಅಭಿನಯಿಸಿರುವುದು ನಿಜಕ್ಕೂ ಹೆಮ್ಮೆ ಎಂದರು.

ಮಾಡಲಿಂಗ್ ಕ್ಷೇತ್ರದಲ್ಲಿ ಸಾಕಷ್ಟು ಹೆಸರು ಮಾಡಿರುವ ಮೇಧಾ ಶಂಕರ್ ಈ ಚಿತ್ರದ ನಾಯಕಿಯಾಗಿ ಅಭಿನಯಿಸಿದ್ದಾರೆ‌. ಉತ್ತಮ ಸಂದೇಶವಿರುವ ಈ ಚಿತ್ರದಲ್ಲಿ ನಟಿಸಿರುವುದು ನನಗೆ ಹೆಮ್ಮೆ ಇದೆ ಎಂದು ಮೇಧಾ ಶಂಕರ್ ಸಂತಸ ಹಂಚಿಕೊಂಡರು.

ಇದನ್ನೂ ಓದಿ:ಹುಲಿ ಉಗುರಿನ ಪೆಂಡೆಂಟ್ ಧರಿಸಿದ ಆರೋಪ : ನಟ ದರ್ಶನ್, ಜಗ್ಗೇಶ್ ಸೇರಿ ಹಲವರ ವಿರುದ್ಧ ದೂರು..

ABOUT THE AUTHOR

...view details