ಕರ್ನಾಟಕ

karnataka

ETV Bharat / entertainment

ಸಾಹಿತಿ ಕುಂ ವೀರಭದ್ರಪ್ಪ ಕಥೆಯಾಧಾರಿತ 'ಕುಬುಸ' ಚಿತ್ರ ಶೀಘ್ರದಲ್ಲೇ ತೆರೆಗೆ

ಸಾಹಿತಿ ಕುಂ ವೀರಭದ್ರಪ್ಪ ಅವರ ಕಥೆಯಾಧಾರಿತ ಕುಬುಸ ಎಂಬ ಚಿತ್ರ ಜನವರಿ ಕೊನೆಯಲ್ಲಿ ಬಿಡುಗಡೆ ಆಗಲು ಸಜ್ಜಾಗುತ್ತಿದೆ.

kubusa movie
'ಕುಬುಸ' ಚಿತ್ರ ಶೀಘ್ರದಲ್ಲೇ ತೆರೆಗೆ

By

Published : Dec 20, 2022, 4:11 PM IST

ಕನ್ನಡದ ಖ್ಯಾತ ಸಾಹಿತಿ ಕುಂ ವೀರಭದ್ರಪ್ಪ ಅವರ ಕಥೆಯಾಧಾರಿತ ಕುಬುಸ ಎಂಬ ಚಿತ್ರ ಹೊಸ ವರ್ಷಕ್ಕೆ ತೆರೆಕಾಣಲು ಸಿದ್ಧತೆ ನಡೆಸಿದೆ. ರಘು ರಾಮಚರಣ್ ಹೂವಿನ ಹಡಗಲಿ ಕುಬುಸ ಸಿನಿಮಾ ನಿರ್ದೇಶಿಸಿದ್ದಾರೆ. ಫಸ್ಟ್ ಲುಕ್ ಮೂಲಕ ಗಮನ ಸೆಳೆದಿರುವ ಈ ಸಿನಿಮಾ ಸೆನ್ಸಾರ್ ಅಂಗಳದಲ್ಲಿ ಪಾಸ್ ಆಗಿದ್ದು, ಯು ಸರ್ಟಿಫಿಕೇಟ್ ಪಡೆದುಕೊಂಡಿದೆ.

ಕುಬುಸ ಆರ್. ಚಂದ್ರು ಶಿಷ್ಯ ರಘು ರಾಮಚರಣ್ ಹೂವಿನ ಹಡಗಲಿ ನಿರ್ದೇಶನದ ಮೊದಲ ಸಿನಿಮಾ. ನಿರ್ದೇಶಕರಾದ ಟಿ.ಎಸ್. ನಾಗಾಭರಣ, ಪ್ರೇಮ್, ಸತ್ಯ ಪ್ರಕಾಶ್ ಸಿನಿಮಾಗಳಲ್ಲಿ ಸಹಾಯಕ ನಿರ್ದೇಶಕನಾಗಿ, ಕಲಾವಿದನಾಗಿ ಗುರುತಿಸಿಕೊಂಡಿರುವ ಇವರು ಕುಬುಸ ಸಿನಿಮಾ ಮೂಲಕ ಪೂರ್ಣ ಪ್ರಮಾಣದ ನಿರ್ದೇಶಕರಾಗಿ ಬಡ್ತಿ ಪಡೆದಿದ್ದಾರೆ.

ಸಾಹಿತಿ ಕುಂ ವೀರಭದ್ರಪ್ಪ

ತಾಯಿ ಮಗನ ಸೆಂಟಿಮೆಂಟ್ ಕಥೆ ಇರುವ ಈ ಚಿತ್ರದಲ್ಲಿ ರಾಮ ರಾಮ ರೇ ಸಿನಿಮಾ ಖ್ಯಾತಿಯ ನಟರಾಜ್ ಎಸ್ ಭಟ್, ರಂಗಭೂಮಿ ಕಲಾವಿದೆ ಹನುಮಕ್ಕ ಮರಿಯಮ್ಮನ ಹಳ್ಳಿ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ. ನಟರಾಜ್ ಎಸ್ ಭಟ್ ಚಿತ್ರದಲ್ಲಿ ಎರಡು ಶೇಡ್​​ನಲ್ಲಿ ನಟಿಸಿದ್ದು, ಆರ್ಯ ಮೈಸೂರು, ಅನಿಕ ರಮ್ಯ, ಮಹಾಲಕ್ಷ್ಮೀ ಕೂಡ ಚಿತ್ರದ ಲೀಡ್ ರೋಲ್​​ನಲ್ಲಿ ಬಣ್ಣ ಹಚ್ಚಿದ್ದಾರೆ.

'ಕುಬುಸ' ಚಿತ್ರತಂಡ

ಪದ್ಮಶ್ರೀ ಪುರಸ್ಕೃತ ಜೋಗತಿ ಮಂಜಮ್ಮ ಚಿತ್ರದ ಪ್ರಮುಖ ಆಕರ್ಷಣೆಯಾಗಿದ್ದಾರೆ. ಕರ್ನಾಟಕ ರಾಜ್ಯ ಯುವ ಪ್ರಶಸ್ತಿ ಹಾಗೂ ಮಕ್ಕಳ ಕಲ್ಯಾಣ ರಾಜ್ಯ ಪ್ರಶಸ್ತಿ ಪುರಸ್ಕೃತರಾದ ಗುಂಡಿ ರಮೇಶ್ ಹಾಗೂ ಪತ್ನಿ ಗುಂಡಿ ಭಾರತಿ ವಿಶೇಷ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಉಳಿದಂತೆ ಹೊನ್ನಾವರ ಸ್ವಾಮಿ, ಹುಲಿಗಪ್ಪ ಕಟ್ಟಿಮನಿ, ಕನ್ನಡ ಕಲಾ ಸಂಘ ಹೊಸಪೇಟೆ ಕಲಾವಿದರು ಚಿತ್ರದ ತಾರಾ ಬಳಗದಲ್ಲಿದ್ದಾರೆ.

ಹಳ್ಳಿಯಲ್ಲಿ ಕಲ್ಲು ಒಡೆದು ಜೀವನ ಸಾಗಿಸುವ ತಾಯಿ ತನ್ನ ಮಗನನ್ನು ದೂರದ ಊರಿನಲ್ಲಿ ಓದಿಸುತ್ತಿರುತ್ತಾಳೆ. ಯಾವತ್ತೂ ಬೇರೆ ಊರಿಗೆ ಪಯಣ ಬೆಳೆಸದ, ಬಸ್ಸು ಕೂಡ ಹತ್ತಿರದ ಆಕೆಯನ್ನು ಮಗ ಕೆಲಸ ಸಿಕ್ಕ ಮೇಲೆ ನಗರಕ್ಕೆ ಕರೆದುಕೊಂಡು ಬರುತ್ತಾನೆ. ಮೊದಲಿನಿಂದಲೂ ಕುಬುಸ ಧರಿಸಿ ಅಭ್ಯಾಸವಿರದ ಆಕೆ ಈ ಕಾರಣದಿಂದ ನಗರಕ್ಕೆ ಬಂದಾಗ ಹೇಗೆಲ್ಲ ಜನರಿಂದ ಮುಜುಗರಕ್ಕೆ ಒಳಗಾಗುತ್ತಾಳೆ, ಮುಂದೆ ಏನಾಗುತ್ತದೆ ಅನ್ನೋದು ಸಿನಿಮಾದ ಕಹಾನಿ.

ಇದನ್ನೂ ಓದಿ:ಶರಣ್, ಚಿಕ್ಕಣ್ಣ ಕಾಂಬಿನೇಶನ್​ನಲ್ಲಿ ಛೂ ಮಂತರ್.. ಪ್ರೇಕ್ಷಕರಿಗೆ ಮನೋರಂಜನೆಯ ರಸದೌತಣ ಪಕ್ಕಾ

ಕಲಾತ್ಮಕ ಸಿನಿಮಾಗಳಿಗಿಂತ ಭಿನ್ನವಾದ ಹೊಸತನ ಒಳಗೊಂಡ ಸಿನಿಮಾ ಕುಬುಸ. ಚಿತ್ರದಲ್ಲಿ ಮೂಲ ಕಥೆಯಲ್ಲಿರುವಂತೆ ಬಳ್ಳಾರಿ ಭಾಷೆಯ ಸೊಗಡನ್ನು ಕಾಣಬಹುದಾಗಿದೆ. ಮ್ಯೂಸಿಕಲ್ ಸಿನಿಮಾ ಕೂಡ ಆಗಿದ್ದು ಸನ್ನಿವೇಶಕ್ಕೆ ತಕ್ಕ ಹಾಗೆ ನಾಲ್ಕು ಹಾಡುಗಳಿದ್ದು ನಾಲ್ಕು ಬೀಟ್​ಗಳಿವೆ. ಜೋಗಿ ಪ್ರೇಮ್, ವಾಸುಕಿ ವೈಭವ್, ಶೃತಿ.ವಿ.ಎಸ್, ಶಿಲ್ಪ ಮುಡ್ಬಿ, ಪ್ರದೀಪ್ ಚಂದ್ರ ಚಿತ್ರದ ಹಾಡುಗಳಿಗೆ ದನಿಯಾಗಿದ್ದಾರೆ. ಪ್ರದೀಪ್ ಚಂದ್ರ ಸಂಗೀತ ಸಂಯೋಜನೆ ಚಿತ್ರಕ್ಕಿದ್ದು, ಅರ್ಜುನ್ ಕಿಟ್ಟು ಸಂಕಲನ, ಚೇತನ್ ಶರ್ಮಾ ಎ ಕ್ಯಾಮೆರಾ ವರ್ಕ್, ಶಿವಮೂರ್ತಿ ಡೋಣಿಮಲೈ ಸಹ ನಿರ್ದೇಶನ ಚಿತ್ರಕ್ಕಿದೆ. ವಿ. ಶೋಭಾ ಸಿನಿಮಾಸ್ ಬ್ಯಾನರ್ ಅಡಿ ವಿ. ಶೋಭಾ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಜನವರಿ ಕೊನೆಯಲ್ಲಿ ಸಿನಿಮಾ ಬಿಡುಗಡೆಯಾಗಲಿದ್ದು, ಶೀಘ್ರದಲ್ಲೇ ಟೀಸರ್ ಬಿಡುಗಡೆ ಮಾಡಲು ಚಿತ್ರತಂಡ ಸಿದ್ಧತೆ ನಡೆಸಿದೆ.

ABOUT THE AUTHOR

...view details