ಭಾರತೀಯ ಚಿತ್ರರಂಗದ ಸೂಪರ್ ಸ್ಟಾರ್ ರಜಿನಿಕಾಂತ್ ಅಭಿಮಾನಿಗಳಿಗೊಂದು ಗುಡ್ ನ್ಯೂಸ್. ರಜಿನಿಕಾಂತ್ ಪುತ್ರಿ ಐಶ್ವರ್ಯಾ ಹೊಸ ಸಿನಿಮಾವೊಂದನ್ನು ನಿರ್ದೇಶನ ಮಾಡಲಿದ್ದು, ಇದರಲ್ಲಿ ರಜಿನಿಕಾಂತ್ ವಿಶೇಷ ಪಾತ್ರದಲ್ಲಿ ನಟಿಸಲಿದ್ದಾರೆ. ಲಾಲ್ ಸಲಾಮ್ ಚಿತ್ರದ ಟೈಟಲ್.
ಈ ಮಾಹಿತಿಯನ್ನು ಸ್ವತಃ ಸಿನಿಮಾದ ನಿರ್ಮಾಪಕರೇ ಘೋಷಿಸಿದ್ದಾರೆ. ಲೈಕಾ ಪ್ರೊಡಕ್ಷನ್ ಸಂಸ್ಥೆ ಲಾಲ್ ಸಲಾಮ್ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದು, ಇಂದು ಪೋಸ್ಟರ್ ರಿಲೀಸ್ ಆಗಿದೆ. ವಿಷ್ಣು ವಿಶಾಲ್ ಮತ್ತು ವಿಕ್ರಾಂತ್ ನಾಯಕರಾಗಿ ನಟಿಸಲಿದ್ದಾರೆ. ಸಂಗೀತ ಮಾಂತ್ರಿಕ ಎ.ಆರ್.ರೆಹಮಾನ್ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ಲೈಕಾ ಪ್ರೊಡಕ್ಷನ್ ಬ್ಯಾನರ್ ಅಡಿ ಶ್ರೀಧರ್ ಪಿಲ್ಲೈ ಅವರು ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.