ಕರ್ನಾಟಕ

karnataka

ETV Bharat / entertainment

ಮಾತಿನಮನೆಯಲ್ಲಿ ಲಂಕಾಸುರ ವಿನೋದ್ ಪ್ರಭಾಕರ್! - ಲಂಕಾಸುರ ಡಬ್ಬಿಂಗ್​

ವಿಜೇತ್ ಕೃಷ್ಣ ಸಂಗೀತ ನಿರ್ದೇಶನ, ಸುಜ್ಞಾನ್ ಛಾಯಾಗ್ರಹಣ, ಮುರಳಿ, ಮೋಹನ್ ಅವರ ನೃತ್ಯ ನಿರ್ದೇಶನ ಹಾಗೂ ದೀಪು ಎಸ್. ಕುಮಾರ್ ಸಂಕಲನ ಈ ಚಿತ್ರಕ್ಕಿದೆ.

ಲಂಕಾಸುರಕ್ಕೆ ಡಬ್ಬಿಂಗ್ ಕಾರ್ಯದಲ್ಲಿ ತೊಡಗಿರುವ ನಟ ವಿನೋದ್​ ಪ್ರಭಾಕರ್
ಲಂಕಾಸುರಕ್ಕೆ ಡಬ್ಬಿಂಗ್ ಕಾರ್ಯದಲ್ಲಿ ತೊಡಗಿರುವ ನಟ ವಿನೋದ್​ ಪ್ರಭಾಕರ್

By

Published : Apr 6, 2022, 10:54 PM IST

ಸ್ಯಾಂಡಲ್​ವುಡ್​ನಲ್ಲಿ ವಿಭಿನ್ನ ಚಿತ್ರಗಳ ಮೂಲಕ ಭರವಸೆ ಹುಟ್ಟಿಸಿರುವ ನಟ ವಿನೋದ್ ಪ್ರಭಾಕರ್ ವರದ ಸಿನಿಮಾದ ಬಳಿಕ‌ ಲಂಕಾಸುರಕ್ಕೆ ಬಣ್ಣ ಹಚ್ಚಿದ್ದಾರೆ. ಇದೀಗ ಸಿನಿಮಾದ ಚಿತ್ರೀಕರಣ ಬಹುತೇಕ ಮುಕ್ತಾಯವಾಗಿದೆ. ಇತ್ತೀಚೆಗೆ ಆಕಾಶ್ ಸ್ಟುಡಿಯೋದಲ್ಲಿ ಮಾತಿನ ಜೋಡಣೆ ನಡೆಯುತ್ತಿದೆ. ನಟ‌ ವಿನೋದ್ ಪ್ರಭಾಕರ್ ತಮ್ಮ ಪಾತ್ರಕ್ಕೆ ಡಬ್ಬಿಂಗ್ ಮಾಡುವುದರಲ್ಲಿ ಬ್ಯುಸಿಯಾಗಿದ್ದಾರೆ.

ಲಂಕಾಸುರಕ್ಕೆ ಡಬ್ಬಿಂಗ್ ಕಾರ್ಯದಲ್ಲಿ ತೊಡಗಿರುವ ನಟ ವಿನೋದ್​ ಪ್ರಭಾಕರ್

ಒಂದು ಸಾಹಸ ಸನ್ನಿವೇಶ ಮಾತ್ರ ಬಾಕಿಯಿದೆ. ಈ ಸಾಹಸ ದೃಶ್ಯಕ್ಕಾಗಿ ವಿನೋದ್ ಹತ್ತು ಕೆಜಿ ತೂಕ ಇಳಿಸಿಕೊಳ್ಳುತ್ತಿದ್ದಾರಂತೆ. ಈ ಹಿಂದೆ ಮೂರ್ಕಲ್ ಎಸ್ಟೇಟ್ ಎಂಬ ಚಿತ್ರ ನಿರ್ದೇಶಿಸಿದ್ದ ಪ್ರಮೋದ್ ಕುಮಾರ್ ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ ಐದು ಸಾಹಸ ಸನ್ನಿವೇಶಗಳಿವೆ. ಡಿಫರೆಂಟ್ ಡ್ಯಾನಿ, ವಿನೋದ್, ಚೇತನ್ ಡಿಸೋಜ, ಅರ್ಜುನ್ ರಾಜ್ ಈ ಚಿತ್ರದ ಸಾಹಸ ನಿರ್ದೇಶಕರು.

ವಿಜೇತ್ ಕೃಷ್ಣ ಸಂಗೀತ ನಿರ್ದೇಶನ, ಸುಜ್ಞಾನ್ ಛಾಯಾಗ್ರಹಣ, ಮುರಳಿ, ಮೋಹನ್ ಅವರ ನೃತ್ಯ ನಿರ್ದೇಶನ ಹಾಗೂ ದೀಪು ಎಸ್.ಕುಮಾರ್ ಸಂಕಲನ ಈ ಚಿತ್ರಕ್ಕಿದೆ. ವಿನೋದ್ ಪ್ರಭಾಕರ್ ಟೈಗರ್ ಟಾಕೀಸ್ ಎಂಬ ನಿರ್ಮಾಣ ಸಂಸ್ಥೆ ಪ್ರಾರಂಭ ಮಾಡಿದ್ದು, ಲಂಕಾಸುರ ಎಂಬ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ನಿಶಾ ವಿನೋದ್ ಪ್ರಭಾಕರ್ ಈ ಚಿತ್ರದ ನಿರ್ಮಾಪಕರು.

ವಿನೋದ್ ಪ್ರಭಾಕರ್ ಅವರಿಗೆ ನಾಯಕಿಯಾಗಿ ಪಾರ್ವತಿ ಅರುಣ್ ನಟಿಸಿದ್ದಾರೆ. ಮೊದಲ ಬಾರಿಗೆ ಲೂಸ್ ಮಾದ ಯೋಗಿ ವಿನೋದ್ ಪ್ರಭಾಕರ್ ಅವರೊಂದಿಗೆ ನಟಿಸಿದ್ದಾರೆ. ಹಿರಿಯ ನಟರಾದ ದೇವರಾಜ್ ಹಾಗೂ ರವಿಶಂಕರ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಸದ್ಯ ಡಬ್ಬಿಂಗ್ ಹಂತದಲ್ಲಿರೋ ಲಂಕಾಸುರ ಸಿನಿಮಾ ಸದ್ಯದಲ್ಲೇ ಟ್ರೈಲರ್ ಬಿಡುಗಡೆ ಮಾಡಿಕೊಂಡು ತೆರೆಗೆ ಬರುವ ಸಿದ್ದತೆಯಲ್ಲಿದೆ ಚಿತ್ರತಂಡ.

ಇದನ್ನೂ ಓದಿ:ಕೋವಿಡ್‌ ಹೊಸ ರೂಪಾಂತರಿ XE: ದೇಶದ ಮೊದಲ ಪ್ರಕರಣ ಮುಂಬೈನಲ್ಲಿ ಪತ್ತೆ!

ABOUT THE AUTHOR

...view details