ಮುಂಬೈ (ಮಹಾರಾಷ್ಟ್ರ): ಬಾಲಿವುಡ್ ಸೆಲೆಬ್ರಿಟಿ ಜೋಡಿ ಅರ್ಜುನ್ ಕಪೂರ್ ಮತ್ತು ಮಲೈಕಾ ಅರೋರಾ ಬ್ರೇಕಪ್ ಆಗಿದೆ ಎಂಬ ವದಂತಿ ಹರಡಿತ್ತು. ಸದ್ಯ ಈ ರೂಮರ್ಸ್ಗೆ ಬ್ರೇಕ್ ಬಿದ್ದಿದೆ.
ಮಲೈಕಾ ಅರೋರಾ ಜತೆ ಬ್ರೇಕ್ ಅಪ್ ಆಗಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿರುವಾಗಲೇ ನಟಿ ಅರ್ಜುನ್ ಕಪೂರ್ ಜೊತೆ ಕಾಣಿಸಿಕೊಂಡಿದ್ದಾರೆ. ಇಬ್ಬರ ಫೋಟೋ ವಿಡಿಯೋ ವೈರಲ್ ಆಗಿದೆ. ಅರ್ಜುನ್ ಕಪೂರ್ ಹಾಗೂ ಮಲೈಕಾ ಒಟ್ಟಿಗೆ ಲಂಚ್ ಡೇಟ್ಗೆ ಹೋಗಿದ್ದಾರೆ. ಈ ವೇಳೆ ಪಾಪರಾಜಿಗಳ ಕ್ಯಾಮೆರಾಗೆ ಸೆರೆ ಸಿಕ್ಕಿದ್ದಾರೆ. ಒಟ್ಟಿಗೆ ಕಾಣಿಸಿಕೊಳ್ಳುವ ಮೂಲಕ ಇಬ್ಬರೂ ಬ್ರೇಕಪ್ ವದಂತಿಗೆ ಬ್ರೇಕ್ ಹಾಕಿದ್ದಾರೆ.
ಬ್ರೇಕಪ್ ಸುದ್ದಿಗಳು ಹರಿದಾಡುತ್ತಿರುವ ನಡುವೆಯೆ ಭಾನುವಾರ ಮಧ್ಯಾಹ್ನ ಮುಂಬೈನ ಮಳೆಯ ನಡುವೆ ನಟಿ ಮಲೈಕಾ ಅರೋರಾ ಮತ್ತು ಅರ್ಜುನ್ ಕಪೂರ್ ಒಟ್ಟಿಗೆ ಕಾಣಿಸಿಕೊಂಡರು. ಅರ್ಜುನ್ ಕಪೂರ್ ಕಪ್ಪು ಟಿ ಶರ್ಟ್ ಮತ್ತು ಪ್ಯಾಂಟ್‌ನಲ್ಲಿ ಸ್ಪೋರ್ಟಿ ಲುಕ್‌ನಲ್ಲಿ ಕಾಣಿಸಿಕೊಂಡರು. ಮಲೈಕಾ ಅವರು ಬಿಳಿ ಟಾಪ್‌ನೊಂದಿಗೆ ಮ್ಯಾಚಿಂಗ್ ಶಾರ್ಟ್ಸ್‌ನಲ್ಲಿ ಕಾಣಿಸಿಕೊಂಡರು.
ಅರ್ಜುನ್ ಮತ್ತು ಮಲೈಕಾ ಇಬ್ಬರೂ ಒಟ್ಟಿಗೆ ರೆಸ್ಟೋರೆಂಟ್‌ನಿಂದ ಹೊರ ಬಂದರು. ಬಳಿಕ ಒಂದೇ ಕಾರಿನಲ್ಲಿ ಹೊರಟರು. ಈ ವಿಚಾರ ಅವರ ಅಭಿಮಾನಿಗಳಿಗೆ ಸಂತಸವನ್ನುಂಟು ಮಾಡಿತು. "ಧನ್ಯವಾದ ದೇವರೆ. ಬ್ರೇಕ್-ಅಪ್ ವರದಿಗಳು ನಿಜವಲ್ಲ" ಎಂದು ಸಾಮಾಜಿಕ ಮಾಧ್ಯಮ ಬಳಕೆದಾರರು ಕಾಮೆಂಟ್ ಮಾಡಿದ್ದಾರೆ. "ಅವರು ಒಟ್ಟಿಗೆ ಚೆನ್ನಾಗಿ ಕಾಣುತ್ತಾರೆ," ಇನ್ನೊಬ್ಬರು ತಮ್ಮ ಅನಿಸಿಕೆ ವ್ಯಕ್ತಪಡಿಸಿದ್ದಾರೆ.