ಭಾರತೀಯ ಚಿತ್ರರಂಗದಲ್ಲೀಗ ಕಾಂತಾರದ್ದೇ ಸುದ್ದಿ. ಬಹುತೇಕ ಸಿನಿಮಾಗಳು ಪ್ಯಾನ್ ಇಂಡಿಯಾ ಆಗಿ ಥೀಯೇಟರ್ಗಳಲ್ಲಿ ಧೂಳೆಬ್ಬಿಸಿದರೆ, ಕಾಂತಾರ ಕನ್ನಡದಲ್ಲಿ ಬಿಡುಗಡೆ ಆಗಿ ಬಳಿಕ ಪ್ಯಾನ್ ಇಂಡಿಯಾ ಸಿನಿಮಾ ಸಿನಿಮಾ ಆಗಿ ಮಾರ್ಪಾಡಾದ ಹೆಗ್ಗಳಿಕೆ ಹೊಂದಿದೆ. ಕನ್ನಡದ ಸಿನಿಮಾವನ್ನು ಪರಭಾಷೆಯಲ್ಲೂ ಬಿಡುಗಡೆ ಮಾಡಬೇಕು ಎನ್ನುವ ಬೇಡಿಕೆ ಈ ಮಟ್ಟದಲ್ಲಿ ಬಂದಿದ್ದು ಇದೇ ಮೊದಲು.
ಸೆಪ್ಟೆಂಬರ್ 30ರಂದು ಬಿಡುಗಡೆ ಆದ ಕಾಂತಾರ ಕೇವಲ 15 ದಿನಗಳಲ್ಲಿ ಹಿಂದಿ, ತೆಲುಗು, ತಮಿಳಿಗೆ ಡಬ್ ಆಗಿ ಉತ್ತಮ ಪ್ರದರ್ಶನ ಕಾಣುತ್ತಿದೆ. ಇಂದು ಮಲೆಯಾಳಂ ಭಾಷೆಯಲ್ಲೂ ಸಿನಿಮಾ ರಿಲೀಸ್ ಆಗಿ ಸಖತ್ ಸೌಂಡ್ ಮಾಡುತ್ತಿದೆ. ಮಲೆಯಾಳಂ ಚಿತ್ರರಂಗದ ಸೂಪರ್ ಸ್ಟಾರ್ ಪೃಥ್ವಿರಾಜ್ ಸುಕುಮಾರನ್ ಅವರು ಈ ಕಾಂತಾರ ಸಿನಿಮಾವನ್ನು ಮಲೆಯಾಳಂನಲ್ಲಿ ಪ್ರಸ್ತುತಪಡಿಸಿದ್ದಾರೆ.
ಇದನ್ನೂ ಓದಿ:ಹಿಂದಿ ಹೇರಿಕೆ ಹೇಗೆ ಒಪ್ಪೋಕಾಗಲ್ವೋ ಹಿಂದುತ್ವ ಹೇರಿಕೆಯನ್ನೂ ಒಪ್ಪಲಾಗಲ್ಲ: ನಟ ಚೇತನ್