'ಆರ್ಎಕ್ಸ್ 100' ಚಿತ್ರದ ಮೂಲಕ ತೆಲುಗು ಚಿತ್ರರಂಗದಲ್ಲಿ ಹೊಸ ಸಂಚಲನ ಸೃಷ್ಟಿಸಿದ್ದ ನಿರ್ದೇಶಕ ಅಜಯ್ ಭೂಪತಿ. ಇದೀಗ ಅವರು 'ಮಂಗಳವಾರಂ' ಎಂಬ ಪ್ಯಾನ್ ಇಂಡಿಯಾ ಸಿನಿಮಾ ನಿರ್ದೇಶನ ಮಾಡಿದ್ದು, ಬಹುತೇಕ ಚಿತ್ರೀಕರಣ ಮುಗಿಸಿ ಬಿಡುಗಡೆಗೆ ಸಜ್ಜಾಗಿದೆ.
ಚಿತ್ರತಂಡ: 'ಮಂಗಳವಾರಂ' ರಸ್ಟ್ರಿಕ್ ಆಕ್ಷನ್ ಥ್ರಿಲ್ಲರ್ ಸಿನಿಮಾವಾಗಿದ್ದು, ಪಾಯಲ್ ರಜಪೂತ್, ಶ್ರೀತೇಜ್ ಮುಖ್ಯಭೂಮಿಕೆಯಲ್ಲಿದ್ದಾರೆ. ಇದರ ಜೊತೆಗೆ ಚೈತನ್ಯ ಕೃಷ್ಣ, ಅಜಯ್ ಘೋಷ್, ಲಕ್ಷ್ಮಣ್ ಸೇರಿದಂತೆ ಹಲವಾರು ಕಲಾವಿದರು ಈ ಸಿನಿಮಾದಲ್ಲಿದ್ದಾರೆ.
'ಮಂಗಳವಾರಂ' ಚಿತ್ರಕ್ಕೆ ಕನ್ನಡದ ಅಜನೀಶ್ ಲೋಕನಾಥ್ ಸಂಗೀತ ಸಂಯೋಜಿಸುತ್ತಿದ್ದು, ದಾಶರಥಿ ಶಿವೇಂದ್ರ ಅವರ ಛಾಯಾಗ್ರಹಣವಿರಲಿದೆ. ರಘು ಕುಲಕರ್ಣಿ ಅವರ ಕಲಾ ನಿರ್ದೇಶನವಿರಲಿದೆ. ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರಾಗಿ ಸಾಯಿಕುಮಾರ್ ಯಡವಲ್ಲಿ ಕಾರ್ಯನಿರ್ವಹಿಸಿದ್ದಾರೆ. 'ಕಾಂತಾರ' ಸಿನಿಮಾದ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಮಂಗಳವಾರಂ ಎಂಬ ಸಿನಿಮಾ ಮುಖಾಂತರ ತೆಲುಗು ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ.
ಸಿನಿಮಾವನ್ನು ಸ್ವಾತಿ ಗುಣಪತಿ ಮತ್ತು ಸುರೇಶ್ ವರ್ಮಾ ಒಡೆತನದ ಮುದ್ರಾ ಮೀಡಿಯಾ ವರ್ಕ್ಸ್ ಹಾಗೂ ಅಜಯ್ ಭೂಪತಿ ಅವರ ಎ ಕ್ರಿಯೇಟಿವ್ ವರ್ಕ್ಸ್ ಜಂಟಿಯಾಗಿ ನಿರ್ಮಿಸುತ್ತಿವೆ. ಇದುವರೆಗೂ ನಿರ್ದೇಶಕರಾಗಿದ್ದ ಅಜಯ್ ಭೂಪತಿ ಈ ಚಿತ್ರದ ಮೂಲಕ ನಿರ್ಮಾಪಕರಾಗಿದ್ದಾರೆ. ಈ ಚಿತ್ರದ ಬಿಡುಗಡೆಗೆ ದಿನಾಂಕ ನಿಗದಿಯಾಗಿದ್ದು, ನವೆಂಬರ್ 17ರಂದು ಕನ್ನಡ, ತಮಿಳು, ತೆಲುಗು, ಹಿಂದಿ ಹಾಗೂ ಮಲಯಾಳಂ ಭಾಷೆಯಲ್ಲಿ ರಿಲೀಸ್ ಆಗಲಿದೆ.