ಸ್ಯಾಂಡಲ್ವುಡ್ನಲ್ಲಿ ಇತ್ತೀಚೆಗೆ ಡಿಫರೆಂಟ್ ಟೈಟಲ್ಗಳುಳ್ಳ ಸಿನಿಮಾಗಳು ಬರುತ್ತಿವೆ. ವಿಭಿನ್ನ ಶೀರ್ಷಿಕೆಗಳಿಂದಲೇ ಸಿನಿಪ್ರಿಯರನ್ನು ಆಕರ್ಷಿಸುವ ಟ್ರೆಂಡ್ ಶುರುವಾಗಿದೆ. ಈಗ ಅಂಥಹದ್ದೇ ಮತ್ತೊಂದು ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಅದುವೇ ಮಂಕು ಭಾಯ್ ಫಾಕ್ಸಿ ರಾಣಿ ಸಿನಿಮಾ. ಮಂಗಳೂರಿನ ಪ್ರತಿಭಾನ್ವಿತ ಯುವ ಸಿನಿಮೋತ್ಸಾಹಿಗಳ ತಂಡ ತಯಾರಿಸಿರುವ ಈ ಚಿತ್ರ ಸೆನ್ಸಾರ್ ಪಾಸಾಗಿ ಬಿಡುಗಡೆ ಹೊಸ್ತಿಲಿನಲ್ಲಿ ನಿಂತಿದೆ.
ಬಿಗ್ ಬಾಸ್ ಖ್ಯಾತಿಯ ರೂಪೇಶ್ ಶೆಟ್ಟಿ ನಾಯಕನಾಗಿ ಬಣ್ಣ ಹಚ್ಚಿದ್ದು, ಇವರಿಗೆ ಜೋಡಿಯಾಗಿ ಬ್ರಹ್ಮಗಂಟು ಸೀರಿಯಲ್ ಕಲಾವಿದೆ ಗೀತಾ ಭಾರತಿ ಭಟ್ ಅಭಿನಯಿಸಿದ್ದಾರೆ. ಪ್ರಕಾಶ್ ತೂಮಿನಾಡ್, ಪಂಚಮಿ ರಾವ್, ಅರ್ಜುನ್ ಕಜೆ ತಾರಾಬಳಗದಲ್ಲಿದ್ದಾರೆ. ತುಳು ಸಿನಿಮಾಗಳಲ್ಲಿ ಅಸೋಸಿಯೇಟ್ ಡೈರೆಕ್ಟರ್ ಆಗಿ ಕೆಲಸ ಮಾಡಿರುವ ಗಗನ್ ಎಂ ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುವ ಮೂಲಕ ಸ್ವತಂತ್ರ ನಿರ್ದೇಶಕರಾಗಿ ಬಡ್ತಿ ಪಡೆದಿದ್ದಾರೆ.