ಕರ್ನಾಟಕ

karnataka

ETV Bharat / entertainment

ಸ್ವಾತಂತ್ರ್ಯ ದಿನಕ್ಕೆ ನಿರ್ದೇಶಕ ಮಂಸೋರೆ 19.20.21 ಚಿತ್ರದ ಹೊಸ ಪೋಸ್ಟರ್ ರಿಲೀಸ್ - ಜೈ ಭೀಮ್

ಹರಿವು, ನಾತಿಚರಾಮಿ, ಆ್ಯಕ್ಟ್​-1978 ರೀತಿಯ ವಿಭಿನ್ನ ಚಿತ್ರಗಳನ್ನು ಕೊಟ್ಟ ನಿರ್ದೇಶಕ ಮಂಸೋರೆ ಅವರ ಹೊಸ ಚಿತ್ರದ ಪೋಸ್ಟರ್​ನ್ನು ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಬಿಡುಗಡೆ ಮಾಡಿದ್ದಾರೆ.

Manso Re
ಸ್ವಾತಂತ್ರ್ಯ ದಿನಕ್ಕೆ 19.20.21 ಚಿತ್ರದ ಹೊಸ ಪೋಸ್ಟರ್ ರಿಲೀಸ್

By

Published : Aug 15, 2022, 4:59 PM IST

ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಿರ್ದೇಶಕ ಮಂಸೋರೆ ವಿಭಿನ್ನ ಸಿನಿಮಾಗಳನ್ನು ನಿರ್ದೇಶನ‌ ಮಾಡುವ ಮೂಲಕ ಚಿತ್ರರಂಗದಲ್ಲಿ ಭರವಸೆಯ ‌ನಿರ್ದೇಶಕ ಅಂತಾ ಕರೆಯಿಸಿಕೊಂಡಿದ್ದಾರೆ‌. ಈಗಾಗಲೇ ಹರಿವು, ನಾತಿಚರಾಮಿ, ಆ್ಯಕ್ಟ್​-1978 ಚಿತ್ರಗಳ ಮೂಲಕ ಪ್ರೇಕ್ಷಕರ ಗಮನ ಸೆಳೆದಿರುವ ಅವರು, ಸದ್ಯ '19.20.21' ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ.

75ನೇ ಸ್ವಾತಂತ್ರ್ಯ ದಿನದ ಅಂಗವಾಗಿ 19.20.21 ಚಿತ್ರತಂಡ ವಿಶೇಷವಾದ ಪೋಸ್ಟರ್​ವೊಂದನ್ನು ಬಿಡುಗಡೆ ಮಾಡಿದೆ. ಬಾಯಿಗೆ ಬಟ್ಟೆ ಕಟ್ಟಿರುವ ವ್ಯಕ್ತಿ, ಆತನ ಬೆನ್ನು, ಬಾಯಲ್ಲಿ ರಕ್ತದ ಕಲೆ ಇರುವ ಕೌತುಕ ಮೂಡಿಸುವ ಒಂದು ಪೋಸ್ಟರ್​ನ್ನು ಮಂಸೋರೆ ಬಳಗ ಅನಾವರಣ ಮಾಡಿದೆ.

ಜೈ ಭೀಮ್, ಜನಗಣಮನ ಸಿನಿಮಾಗಳ ಮಾದರಿಯಲ್ಲಿ '19.20.21' ನೈಜ ಘಟನೆಯಾಧಾರಿತ ಚಿತ್ರವಾಗಿದ್ದು, ಬಾಲಾಜಿ ಮನೋಹರ್, ಎಂಡಿ ಪಲ್ಲವಿ, ಶೃಂಗ, ಸಂಪತ್ ಮೈತ್ರೇಯ, ಅವಿನಾಶ್, ಕೃಷ್ಣ ಹೆಬ್ಬಾಲೆ ಮುಂತಾದ ತಾರಾಬಳಗ ಚಿತ್ರದಲ್ಲಿದೆ. ಆ್ಯಕ್ಟ್​-1978 ಸಿನಿಮಾವನ್ನು ನಿರ್ಮಾಣ ಮಾಡಿದ್ದ ದೇವರಾಜ್​ ಈ ಚಿತ್ರಕ್ಕೂ ಬಂಡವಾಳ ಹೂಡಿದ್ದು, ಬಿಂದುಮಾಲಿನಿ ಸಂಗೀತ, ರೋಣದ ಬಕ್ಕೇಶ್ ಹಿನ್ನೆಲೆ ಸಂಗೀತ, ಶಿವು ಬಿಕೆ ಕುಮಾರ್ ಕ್ಯಾಮರಾ, ಸುರೇಶ್ ಆರುಮುಗಂ ಸಂಕಲನವಿದ್ದು‌.

ಚಿತ್ರಕಥೆಯಲ್ಲಿ ಮಂಸೋರೆ ಜೊತೆಗೆ ವೀರೇಂದ್ರ ಮಲ್ಲಣ್ಣ ಲೇಖನಿ ಹಂಚಿಕೊಂಡಿದ್ದರೆ, ಸಂಭಾಷಣೆಗಳ ಬರವಣಿಗೆಯಲ್ಲಿ ಅವಿನಾಶ್ ಜಿ ಮತ್ತು ವೀರೇಂದ್ರ ಮಲ್ಲಣ್ಣ ತೊಡಗಿಸಿಕೊಂಡಿದ್ದಾರೆ. ಈಗಾಗಲೇ ಚಿತ್ರೀಕರಣ ಮುಗಿಸಿರುವ ತಂಡ, ಈಗ ಸಂಕಲನ ಮುಗಿಸಿ ಮುಂದಿನ ಹಂತದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳಲ್ಲಿದ್ದಾರೆ. ಈ ವರ್ಷದ ಅಂತ್ಯದೊಳಗೆ ಈ ಸಿನಿಮಾ ಬಿಡುಗಡೆಗೆ ಚಿತ್ರತಂಡ ಪ್ಲಾನ್ ಮಾಡಿದೆ.

ಇದನ್ನೂ ಓದಿ :75ನೇ ಸ್ವಾತಂತ್ರ್ಯೋತ್ಸವ.. ವಂದೇ ಮಾತರಂ ಹಾಡಿನಲ್ಲಿ ಕನ್ನಡ ತಾರೆಯರ ಮೆರಗು

ABOUT THE AUTHOR

...view details