ಕರ್ನಾಟಕ

karnataka

ETV Bharat / entertainment

ಆ್ಯಕ್ಷನ್​​ ಪ್ರಿನ್ಸ್​​ ಅಭಿಮಾನಿಗಳಿಗೆ ಗುಡ್ ನ್ಯೂಸ್: ಮಾರ್ಟಿನ್ ಟೀಸರ್ ಬಿಡುಗಡೆಗೆ ಮುಹೂರ್ತ ಫಿಕ್ಸ್ - ಧ್ರುವ ಸರ್ಜಾ ಲೇಟೆಸ್ಟ್ ನ್ಯೂಸ್

ಟೀಸರ್​ ಬಿಡುಗಡೆ ದಿನಾಂಕವನ್ನು ಘೋಷಿಸಿದೆ ಮಾರ್ಟಿನ್​ ಚಿತ್ರತಂಡ.

Martin movie
ಮಾರ್ಟಿನ್ ಸಿನಿಮಾ

By

Published : Feb 15, 2023, 7:29 PM IST

ಪೊಗರು ಸಿನಿಮಾ ಬಳಿಕ ಆ್ಯಕ್ಷನ್ ಪ್ರಿನ್ಸ್‌ ಧ್ರುವ ಸರ್ಜಾ ಬಣ್ಣ ಹಚ್ಚಿರುವ ಬಹು ನಿರೀಕ್ಷಿತ ಚಿತ್ರ 'ಮಾರ್ಟಿನ್'. ಟೈಟಲ್ ಜೊತೆಗೆ ಫಸ್ಟ್ ಲುಕ್​ನಿಂದಲೇ ಸೌತ್ ಸಿಸಿರಂಗದಲ್ಲಿ ಕ್ರೇಜ್ ಹುಟ್ಟಿಸಿರೋ ಮಾರ್ಟಿನ್ ಸಿನಿಮಾ ಬಗ್ಗೆ ಅಭಿಮಾನಿಗಳು ಭಾರೀ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ನಿರ್ದೇಶಕ ಎ.ಪಿ ಅರ್ಜುನ್ ನಿರ್ದೇಶನದ ಮಾರ್ಟಿನ್ ಚಿತ್ರ ಅಂದುಕೊಂಡಂತೆ ನಡೆದಿದ್ದರೆ ಇಷ್ಟು ಹೊತ್ತಿಗಾಗಲೇ ತೆರೆ ಮೇಲೆ ಅಬ್ಬರಿಸಬೇಕಿತ್ತು. ಆದರೆ, ಕೆಲ ಟೆಕ್ನಿಕಲ್ ಕಾರಣಗಳಿಂದ ಮಾರ್ಟಿನ್ ಚಿತ್ರ ಬಿಡುಗಡೆ ತಡವಾಗಿದೆ. ಲೇಟ್ ಆದ್ರೂ ಲೇಟೆಸ್ಟ್ ಆಗಿ ಬರುತ್ತೇವೆ ಎಂದು ಚಿತ್ರತಂಡ ತಿಳಿಸಿದೆ. ಬಹುತೇಕ ಶೂಟಿಂಗ್ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿರೋ ಮಾರ್ಟಿನ್ ಚಿತ್ರದ ಬಗ್ಗೆ ಇಂದು ಧ್ರುವ ಸರ್ಜಾ ತಮ್ಮ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ.

ಮಾರ್ಟಿನ್ ಟೀಸರ್ ರಿಲೀಸ್​ ಡೇಟ್: ಇದೇ ಫೆಬ್ರವರಿ 23ರಂದು ಕನ್ನಡ, ತೆಲುಗು, ತಮಿಳು, ಮಲೆಯಾಳಂ ಹಾಗು ಹಿಂದಿ ಭಾಷೆಯಲ್ಲಿ ಮಾರ್ಟಿನ್ ಚಿತ್ರದ ಟೀಸರ್ ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದೆ. ಇಲ್ಲಿಂದ ಧ್ರುವ ಸರ್ಜಾರ ಮಾರ್ಟಿನ್ ಚಿತ್ರದ ಕಾರುಬಾರು ಶುರುವಾಗಲಿದೆ. ಬಳಿಕ ಪ್ರಚಾರ ಕಾರ್ಯದಲ್ಲಿ ತೊಡಗಲಿದೆ ಚಿತ್ರತಂಡ.

ಇನ್ನೂ ಚಿತ್ರದ ಫಸ್ಟ್ ಲುಕ್ ಲಾಂಚ್ ಕಾರ್ಯಕ್ರಮದಲ್ಲಿ ನಿರ್ದೇಶಕ ಎ.ಪಿ ಅರ್ಜುನ್ ಮಾರ್ಟಿನ್ ಸಿನಿಮಾ ಔಟ್ ಅಂಡ್ ಔಟ್ ಸಾಹಸಮಯ ಚಿತ್ರ ಎಂದು ತಿಳಿಸಿದ್ದರು. ಇದರಲ್ಲಿ ನಮ್ಮ ದೇಶ ಪ್ರೇಮ, ಒಂದು ಮುದ್ದಾದ ಲವ್ ಸ್ಟೋರಿ ಜೊತೆಗೆ ಫ್ಯಾಮಿಲಿ ಸ್ಟೋರಿ ಇರಲಿದೆ. ಈ ಮಾತಿನಂತೆ ಸದ್ಯ ರಿವೀಲ್ ಆಗಿರುವ ಪೋಸ್ಟರ್​ಗಳನ್ನ ನೋಡ್ತಾ ಇದ್ದರೆ ಮಾರ್ಟಿನ್​ ಚಿತ್ರದಲ್ಲಿ ಧ್ರುವ ಸರ್ಜಾ ದೇಶ ಕಾಯುವ ರಕ್ಷಕ ಅನ್ನೋದು ಗೊತ್ತಾಗುತ್ತದೆ. ಅಲ್ಲದೇ ಧ್ರುವ ಎಡಗೈ ತೋಳಿನ ಮೇಲೆ ಇಂಡಿಯಾ ಎಂದು ಟ್ಯಾಟೂ ಕೂಡ ಹಾಕಿಸಿಕೊಂಡಿದ್ದಾರೆ. ಕೆ.ಎಂ 232 ಹೆಸರಿನ ಮಿಷನ್ ಗನ್ ಹಿಡಿದು ಶತ್ರುಗಳನ್ನು ಸಂಹಾರ ಮಾಡುವ ಚಿತ್ರ ಸಖತ್​ ವೈರಲ್​ ಆಗಿ, ಫ್ಯಾನ್ಸ್ ಮೆಚ್ಚಿಕೊಂಡಿದ್ದಾರೆ.

ಧ್ರುವ ಸರ್ಜಾ ಜೋಡಿಯಾಗಿ ವೈಭವಿ ಶಾಂಡಿಲ್ಯ ನಟಿಸಿದ್ದು, ಅನ್ವೇಶಿ ಜೈನ್‌, ನಿಕಿತೀನ್‌ ಧೀರ್‌ ಸೇರಿದಂತೆ ದೊಡ್ಡ ತಾರಾ ಬಳಗವಿದೆ. ಬೆಂಗೂಳೂರು, ಉತ್ತರ ಭಾರತದ ಕಾಶ್ಮೀರದ ಸುಂದರ ತಾಣಗಳಲ್ಲಿ ಮಾರ್ಟಿನ್ ಚಿತ್ರೀಕರಣ ಮಾಡಲಾಗಿದೆ. ಕಾಶ್ಮೀರದ ಐಸ್‌ವಾರ್ ಸಾಹಸ ದೃಶ್ಯಗಳ ಜೊತೆಗೆ ರೋಮಾಂಚನಕಾರಿ ಸ್ಕೇಟಿಂಗ್ ಆ್ಯಕ್ಷನ್ ಸೀನ್‌ಗಳು ಚಿತ್ರದಲ್ಲಿರಲಿದೆ. ಮಾರ್ಟಿನ್ ಚಿತ್ರದ ಕ್ಲೈಮ್ಯಾಕ್ಸ್‌ ಸನ್ನಿವೇಶಗಳನ್ನು ಸಾಹಸ ನಿರ್ದೇಶಕರಾದ ರವಿವರ್ಮ ಹಾಗೂ ರಾಮ್‌ ಲಕ್ಷ್ಮಣ್‌ ಕಂಪೋಸ್‌ ಮಾಡಿದ್ದಾರೆ.

ಇದನ್ನೂ ಓದಿ:ಎಲ್ಲೆಡೆ 'ಕಬ್ಜ' ಟೈಟಲ್​​ ಸಾಂಗ್​​ನದ್ದೇ​ ಸೌಂಡ್​: ಮೇಕಿಂಗ್​ ವಿಡಿಯೋ ರಿವೀಲ್​​

ಈ ಚಿತ್ರಕ್ಕೆ ತೆಲುಗಿನ ಹೆಸರಾಂತ ಮ್ಯೂಸಿಕ್ ಡೈರೆಕ್ಟರ್ ಮಣಿಶರ್ಮಾ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ. ರವಿ ಬಸ್ರೂರ್ ಈ ಚಿತ್ರತಂಡದ ಜೊತೆ ಕೈ ಜೋಡಿಸಿದ್ದಾರೆ. ಸತ್ಯ ಹೆಗಡೆ ಅವರ ಛಾಯಾಗ್ರಹಣ, ಮಹೇಶ್‌ರೆಡ್ಡಿ ಅವರ ಸಂಕಲನ ಈ ಚಿತ್ರಕ್ಕಿದೆ. ಉದಯ್ ಮೆಹ್ತಾ ಮಾರ್ಟಿನ್ ಚಿತ್ರಕ್ಕೆ ಹಣ ಹೂಡಿದ್ದಾರೆ. ಇದೇ ಮೊದಲ ಬಾರಿಗೆ ನಿರ್ಮಾಪಕ ಉದಯ್ ಮೆಹ್ತಾ ಪ್ಯಾನ್ ಇಂಡಿಯಾ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಹತ್ತು ಹಲವು ವಿಶೇಷತೆಗಳನ್ನು ಇಟ್ಟುಕೊಂಡಿರುವ ಮಾರ್ಟಿನ್​ ಚಿತ್ರ ಎಂದು ತೆರೆ ಕಾಣಲಿದೆ ಎಂಬುದನ್ನು ಚಿತ್ರತಂಡ ಶೀಘ್ರದಲ್ಲೇ ಬಹಿರಂಗಪಡಿಸಲಿದೆ.

ABOUT THE AUTHOR

...view details