ಕನ್ನಡದ ಖ್ಯಾತ ನಟಿ ಪವಿತ್ರಾ ಲೋಕೇಶ್ ಹಾಗೂ ತೆಲುಗು ನಟ ನರೇಶ್ ಮತ್ತೆ ಸುದ್ದಿಯಲ್ಲಿದ್ದಾರೆ. ಮತ್ತೇನಾಯ್ತು? ಅನ್ನೋದು ನಿಮ್ಮ ಪ್ರಶ್ನೆನಾ. ಇವರಿಬ್ಬರ ನಟನೆಯ 'ಮತ್ತೆ ಮದುವೆ' ಟೀಸರ್ ರಿಲೀಸ್ ಆಗಿದೆ. ಸಣ್ಣ ಝಲಕ್ ಮೂಲಕ ಸಂಚಲನ ಸೃಷ್ಟಿಸಿದ್ದ ಈ ಚಿತ್ರದ ಟೀಸರ್ನಲ್ಲಿ ಹಲವು ವಿಷಯಗಳನ್ನು ಬಿಚ್ಚಿಡಲಾಗಿದೆ. ಇದು ಸಿನಿಮಾನ ಅಥವಾ ನಿಜ ಜೀವನದ ಕಥೆಯೋ ಅನ್ನೋ ಗೊಂದಲದಲ್ಲಿ ಪ್ರೇಕ್ಷಕರಿದ್ದಾರೆ. ಅಥವಾ ಸಿನಿಮಾ ಪ್ರಚಾರಕ್ಕೆ ಹೀಗೆಲ್ಲಾ ಮಾಡಿದ್ರಾ ಅನ್ನೋ ಗೊಂದಲ ಕೂಡ ಹಲವರಲ್ಲಿದೆ.
ಹೌದು. 'ತೆಲುಗು ಇಂಡಸ್ಟ್ರಿಯವರು ಕನ್ನಡದ ಮೇಲೆ ಕಣ್ಣು ಹಾಕ್ತಿದಿರಲ್ವಾ' ಎಂಬ ಡೈಲಾಗ್ ಮೂಲಕ ಶುರುವಾಗುವ ಟೀಸರ್ ಥೇಟ್ ನರೇಶ್ ಮತ್ತು ಪವಿತ್ರಾ ರಿಯಲ್ ಕಥೆಯಂತಿದೆ. ನರೇಶ್ ಮೂರನೇ ಪತ್ನಿ ನಡೆಸಿದ ಗಲಾಟೆ, ಮೈಸೂರಿನ ಹೋಟೆಲ್ನಲ್ಲಿ ನಡೆದ ಘಟನೆ, ನರೇಶ್ ಬಾಳಲ್ಲಿ ಪವಿತ್ರಾ ಲೋಕೇಶ್ ಎಂಟ್ರಿ ಎಲ್ಲವನ್ನೂ ಟೀಸರ್ನಲ್ಲಿ ಬಿಚ್ಚಿಡಲಾಗಿದೆ. ಇದು ರಿಯಲ್ ಲೈಫ್ ಕಥೆಯಂತೆ ಭಾಸವಾಗಿದೆ. ಅಥವಾ ಕೇವಲ ಸಿನಿಮಾ ಕಥೆಯೋ ಎಂಬುದನ್ನು ಇವರೇ ಹೇಳಬೇಕಿದೆ.
ಜಯಸುಧ ಮತ್ತು ಶರತ್ ಬಾಬು ಚಿತ್ರದ ಪ್ರಮುಖ ಪಾತ್ರಗಳಿಗೆ ಬಣ್ಣ ಹಚ್ಚಿದ್ದಾರೆ. ವನಿತ ವಿಜಯಕುಮಾರ್, ಅನನ್ಯ ನಾಗೆಲ್ಲ, ರೋಶನ್, ರವಿವರ್ಮ, ಅನ್ನಪೂರ್ಣ, ಭದ್ರಂ, ಯುಕ್ತ, ಪ್ರವೀಣ್ ಯಂಡಮುರಿ ಹಾಗೂ ಮಧು ಒಳಗೊಂಡ ಬಹು ತಾರಾಬಳಗ ಚಿತ್ರದಲ್ಲಿದೆ. ಸುರೇಶ್ ಬೊಬ್ಬಿಲಿ ಸಂಗೀತ ನಿರ್ದೇಶನ, ಅರುಲ್ ದೇವ್ ಹಿನ್ನೆಲೆ ಸಂಗೀತ, ಎಂ.ಎನ್ ಬಾಲ್ ರೆಡ್ಡಿ ಕ್ಯಾಮರಾ ವರ್ಕ್, ಜುನೈದ್ ಸಿದ್ದಿಕಿ ಸಂಕಲನ, ಅನಂತ ಶ್ರೀರಾಮ್ ಸಾಹಿತ್ಯ ಚಿತ್ರಕ್ಕಿದೆ.