ಪಣಜಿ (ಗೋವಾ):ಇಸ್ರೇಲ್ ಮೂಲದ ಚಲನಚಿತ್ರ ನಿರ್ಮಾಪಕ ಮತ್ತು ಐಎಫ್‌ಎಫ್‌ಐ (ಇಂಟರ್‌ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ ಆಫ್ ಇಂಡಿಯಾ) 2022ರ ತೀರ್ಪುಗಾರರ ಮುಖ್ಯಸ್ಥ ನಡಾವ್ ಲಪಿಡ್ (Nadav Lapid) ಅವರು ಭಾರತದ ಸೂಪರ್ ಹಿಟ್ 'ದಿ ಕಾಶ್ಮೀರ್ ಫೈಲ್ಸ್' ಚಲನಚಿತ್ರವನ್ನು "ಪ್ರಚಾರ ಮತ್ತು ಅಶ್ಲೀಲ ಚಲನಚಿತ್ರ" ಎಂದು ಟೀಕಿಸಿದ್ದಾರೆ.
ಸೋಮವಾರ ಗೋವಾದಲ್ಲಿ ನಡೆದ 'ಇಂಟರ್‌ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ ಆಫ್ ಇಂಡಿಯಾ'ದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ಸಮಾರೋಪ ಸಮಾರಂಭದಲ್ಲಿ ಹಲವಾರು ಗಣ್ಯರು ಭಾಗವಹಿಸಿದ್ದರು. ತಮ್ಮ ಭಾಷಣದಲ್ಲಿ ಈ ಹೇಳಿಕೆ ನೀಡಿದ್ದಾರೆ. ಚಲನಚಿತ್ರೋತ್ಸವದಲ್ಲಿ ಈ 'ದಿ ಕಾಶ್ಮೀರ್ ಫೈಲ್ಸ್' ಚಿತ್ರ ಪ್ರದರ್ಶನಗೊಳ್ಳುತ್ತಿರುವುದನ್ನು ನೋಡಿ ತೀರ್ಪುಗಾರರು "ವಿಚಲಿತರಾದರು ಮತ್ತು ಆಘಾತಕ್ಕೊಳಗಾಗಿದ್ದಾರೆ" ಎಂದು ನಡಾವ್ ಲಪಿಡ್ ಹೇಳಿದರು.