ತೆಲುಗು ಸಿನಿಮಾ ರಂಗದಲ್ಲಿ ಅನನ್ಯ ಸೇವೆಗೈದ ಸಾಧಕರಿಗೆ ಕೊಡಮಾಡುವ ನಂದಿ ಪ್ರಶಸ್ತಿ ಈಗ ಕನ್ನಡದಲ್ಲಿಯೂ ಪ್ರಾರಂಭವಾಗುತ್ತಿದೆ. ಅದರ ಮೊದಲ ಭಾಗ ಎನ್ನುವಂತೆ ನಂದಿ ಅವಾರ್ಡ್ ಲೋಗೋ ಬಿಡುಗಡೆ ಮಾಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಗೋ ಲಾಂಚ್ ಮಾಡಿ ಕನ್ನಡ ಸಿನಿಮಾ ಇಂಡಸ್ಟ್ರಿಗೆ ಶುಭಕೋರಿದರು.
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ಭಾ.ಮಾ.ಹರೀಶ್ ನೇತೃತ್ವದಲ್ಲಿ ಇತ್ತೀಚೆಗೆ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ಲೋಗೋ ಅನಾವರಣ ಮಾಡಿಸಿದ್ದಾರೆ. ಅನಿತಾ ರೆಡ್ಡಿ, ನಿತ್ಯಾನಂದ ಪ್ರಭು, ಪದ್ಮಾವತಿ ಚಂದ್ರಶೇಖರ್, ಭಾಮಾ ಗಿರೀಶ್, Aiplex ಗಿರೀಶ್ ಸೇರಿದಂತೆ ಇತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಸ್ಯಾಂಡಲ್ವುಡ್ನಲ್ಲೂ 'ನಂದಿ ಫಿಲ್ಮ್ ಅವಾರ್ಡ್'; ಲೋಗೋ ಲಾಂಚ್ ಮಾಡಿದ ಸಿಎಂ ಸಿದ್ದರಾಮಯ್ಯ 'ನಂದಿ.. ಕನ್ನಡದ ಹೆಮ್ಮೆ' ಈ ಹೆಸರಿನಲ್ಲಿ ಪ್ರಶಸ್ತಿ ಕೊಡಬೇಕೆಂದು ಸಿನಿಮಾ ರಂಗದ ಸ್ನೇಹಿತರೊಂದಿಗೆ ಚರ್ಚಿಸಿ ಈ ತೀರ್ಮಾನ ಮಾಡಲಾಗಿದೆ ಎಂದು ಅಧ್ಯಕ್ಷ ಭಾ.ಮಾ.ಹರೀಶ್ ತಿಳಿಸಿದರು. ನವೆಂಬರ್ ತಿಂಗಳಲ್ಲಿ ಪ್ರಶಸ್ತಿ ಕಾರ್ಯಕ್ರಮ ಆಯೋಜನೆ ಮಾಡಲಾಗುತ್ತದೆ. ಪ್ರತಿ ವರ್ಷ ಸಿನಿಮಾ ರಂಗದಲ್ಲಿ ಸಾಧನೆ ಮಾಡಿದ ಕಲಾವಿದರನ್ನು ಸನ್ಮಾನಿಸಿ ಗೌರವಿಸಿ ನಂದಿ ಪ್ರಶಸ್ತಿ ನೀಡಲಾಗುತ್ತದೆ.
ಸದ್ಯ ನಂದಿ ಪ್ರಶಸ್ತಿ ಲೋಗೋ ಬಿಡುಗಡೆ ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ ಕಾರ್ಯಕ್ರಮದ ರೂಪುರೇಷೆಗಳನ್ನು ತಿಳಿಸಲಾಗುತ್ತದೆ. ಸೈಮಾ, ಫಿಲಂ ಫೇರ್ ಮಾದರಿಯಲ್ಲಿಯೇ ಕನ್ನಡ ಸಿನಿಮಾರಂಗಕ್ಕೆ ಪ್ರತ್ಯಕ್ಷ ಪ್ರಶಸ್ತಿ ಪ್ರಶಸ್ತಿ ನಂದಿ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ಭಾ.ಮಾ. ಹರೀಶ್ ತಿಳಿಸಿದ್ದಾರೆ.
ಸ್ಯಾಂಡಲ್ವುಡ್ನಲ್ಲೂ 'ನಂದಿ ಫಿಲ್ಮ್ ಅವಾರ್ಡ್'; ಲೋಗೋ ಲಾಂಚ್ ಮಾಡಿದ ಸಿಎಂ ಸಿದ್ದರಾಮಯ್ಯ ಕನ್ನಡ ಕಲಾವಿದರಿಗೆ ಒಲಿದ 'ಸೈಮಾ':ಸೌತ್ ಇಂಡಿಯನ್ ಇಂಟರ್ನ್ಯಾಷನಲ್ ಮೂವಿ ಅವಾರ್ಡ್ಸ್ (SIIMA) ಶುಕ್ರವಾರದಂದು ಅದ್ಧೂರಿಯಾಗಿ ಆರಂಭಗೊಂಡು ಇಂದು ಕೂಡ ನಡೆಯುತ್ತಿದೆ. 11ನೇ ಆವೃತ್ತಿಯ ದಕ್ಷಿಣ ಚಿತ್ರರಂಗದ ಪ್ರತಿಷ್ಠಿತ ಪ್ರಶಸ್ತಿ ಪ್ರದಾನ ಸಮಾರಂಭ ದುಬೈನ ವರ್ಲ್ಡ್ ಟ್ರೇಡ್ ಸೆಂಟರ್ನಲ್ಲಿ ಜರುಗುತ್ತಿದೆ. ಈಗಾಗಲೇ ಸಿನಿ ಕ್ಷೇತ್ರದ ದಿಗ್ಗಜರು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದ್ದಾರೆ.
ಕಾಂತಾರ ಸಿನಿಮಾದಲ್ಲಿನ ಅದ್ಭುತ ನಟನೆಗೆ ರಿಷಬ್ ಶೆಟ್ಟಿ ಅವರು ಅತ್ಯುತ್ತಮ ನಟ (ಕ್ರಿಟಿಕ್ಸ್) ಅವಾರ್ಡ್ ಪಡೆದುಕೊಂಡಿದ್ದಾರೆ. ಅಲ್ಲದೇ ವಿಶೇಷ ಮೆಚ್ಚುಗೆ ಪ್ರಶಸ್ತಿಯನ್ನೂ ತನ್ನದಾಗಿಸಿಕೊಂಡಿದ್ದಾರೆ. ಕಾಂತಾರ ಚಿತ್ರದ ಅಚ್ಯುತ್ ಕುಮಾರ್ ನೆಗೆಟಿವ್ ರೋಲ್ಗೆ ಅತ್ಯುತ್ತಮ ನಟ ಪ್ರಶಸ್ತಿ ಸಿಕ್ಕಿದೆ. ರಕ್ಷಿತ್ ಶೆಟ್ಟಿ ನಟನೆಯ 777 ಚಾರ್ಲಿ ಸಿನಿಮಾ ಅತ್ಯುತ್ತಮ ಚಿತ್ರ ಪ್ರಶಸ್ತಿ ಗೌರವಕ್ಕೆ ಪಾತ್ರವಾಗಿದೆ. ಗಾಳಿಪಟ 2 ಚಿತ್ರದಲ್ಲಿನ ಪೋಷಕ ಪಾತ್ರಕ್ಕೆ ಅತ್ಯುತ್ತಮ ನಟ ಪ್ರಶಸ್ತಿಯನ್ನು ಸ್ಯಾಂಡಲ್ವುಡ್ನ ದೂದ್ಪೇಡಾ ದಿಗಂತ್ ಪಡೆದುಕೊಂಡಿದ್ದಾರೆ.
ಕನ್ನಡ ಚಿತ್ರರಂಗದಿಂದ ಕಾಂತಾರ ಸಿನಿಮಾ ಹೆಚ್ಚು ಪ್ರಶಸ್ತಿಗಳನ್ನು ಬಾಚಿಕೊಂಡಿದೆ. ಕಾಂತಾರ ಡೈರೆಕ್ಟರ್ ರಿಷಬ್ ಶೆಟ್ಟಿಗೆ 'ಅತ್ಯುತ್ತಮ ನಿರ್ದೇಶಕ' ಪ್ರಶಸ್ತಿ ಲಭಿಸಿದೆ. ಇನ್ನೂ ನಾಯಕಿ ಸಪ್ತಮಿ ಗೌಡ 'ಅತ್ಯುತ್ತಮ ನಟಿ' (ವಿಮರ್ಶಕರ ಆಯ್ಕೆ) ಪ್ರಶಸ್ತಿಗೆ ಭಾಜನರಾಗಿದ್ದಾರೆ. ಬ್ಲಾಕ್ ಬಸ್ಟರ್ 'ಕೆಜಿಎಫ್ ಚಾಪ್ಟರ್ 2' ಚಿತ್ರದಲ್ಲಿನ ಅದ್ಭುತ ನಟನೆಗಾಗಿ ಯಶ್ ಅವರಿಗೆ 'ಅತ್ಯುತ್ತಮ ನಟ' ಪ್ರಶಸ್ತಿ, ಶ್ರೀನಿಧಿ ಶೆಟ್ಟಿ ಅವರಿಗೆ 'ಅತ್ಯುತ್ತಮ ನಟಿ' ಪ್ರಶಸ್ತಿ ನೀಡಲಾಗಿದೆ.
ಇದನ್ನೂ ಓದಿ:SIIMA 2023: ದಕ್ಷಿಣ ಚಿತ್ರರಂಗದ ಪ್ರತಿಷ್ಠಿತ ಪ್ರಶಸ್ತಿ ಪ್ರದಾನ ಸಮಾರಂಭದ ಸುಮಧುರ ಕ್ಷಣಗಳು!