ಮಂಡ್ಯ:ಜಿಲ್ಲೆಯ ಪಾಂಡವಪುರ ಪಟ್ಟಣದಲ್ಲಿರುವ ಕ್ರೀಡಾಂಗಣದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಪುನೀತೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ. ಮೇಲುಕೋಟೆ ಕ್ಷೇತ್ರದ ಜೆಡಿಎಸ್ ಶಾಸಕ ಸಿ.ಎಸ್.ಪುಟ್ಟರಾಜು ನೇತೃತ್ವದಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ಸಂಜೆ ನಟ, ರಾಜಕಾರಣಿ ನಿಖಿಲ್ ಕುಮಾರಸ್ವಾಮಿ ಚಾಲನೆ ನೀಡಲಿದ್ದಾರೆ.
ಕಾರ್ಯಕ್ರಮದಲ್ಲಿ ಸ್ಯಾಂಡಲ್‌ವುಡ್‌ನ ಹಲವು ನಟ ಮತ್ತು ನಟಿಯರು ಭಾಗಿಯಾಗುವರು. ಸಂಗೀತ ನಿರ್ದೇಶಕ ಅರ್ಜುನ್ ಜನ್ಯ, ಗಾಯಕ ವಿಜಯ್ ಪ್ರಕಾಶ್ ಹಾಗೂ ಗಾಯಕಿ ಅನನ್ಯ ಭಟ್ ನೇತೃತ್ವದಲ್ಲಿ ಸಂಗೀತ ಕಾರ್ಯಕ್ರಮವಿರಲಿದೆ. ಅಲ್ಲದೇ, ಖ್ಯಾತ ಹಾಸ್ಯನಟರಿಂದ ಹಾಸ್ಯ ಸಂಜೆ ನಡೆಯಲಿದೆ.