ಕರ್ನಾಟಕ

karnataka

ETV Bharat / entertainment

''ಸ್ವಾತಂತ್ರ್ಯ ಅಂದ್ರೆ ಕೊಡೋದಲ್ಲ, ಕಿತ್ತುಕೊಳ್ಳೋದು": ಕುತೂಹಲ ಮೂಡಿಸಿದ ಸ್ಪೈ ಟ್ರೇಲರ್ - Spy trailer release

ನಟ ನಿಖಿಲ್ ಸಿದ್ದಾರ್ಥ್ ಅಭಿನಯದ ಸ್ಪೈ ಸಿನಿಮಾ ಟ್ರೇಲರ್ ಬಿಡುಗಡೆ ಆಗಿದೆ.

Spy trailer
ಸ್ಪೈ ಟ್ರೇಲರ್

By

Published : Jun 24, 2023, 3:21 PM IST

ತೆಲುಗು ಚಿತ್ರರಂಗದಲ್ಲಿ ವಿಭಿನ್ನ ಸಿನಿಮಾಗಳ ಮೂಲಕ ತಮ್ಮದೇ ಸ್ಟಾರ್ ಡಮ್ ಹೊಂದಿರುವ ನಟ ನಿಖಿಲ್ ಸಿದ್ದಾರ್ಥ್. ಬಹುಬೇಡಿಕೆ ನಟನ ಮುಂದಿನ ಬಹುನಿರೀಕ್ಷಿತ ಸಿನಿಮಾ ಸ್ಪೈ. ನಿಖಿಲ್ ಸಿದ್ದಾರ್ಥ್ ಸಿನಿಮಾ ಬಿಡುಗಡೆಗೆ ದಿನಗಣನೆ ಶುರುವಾಗಿದೆ. ಇದೇ ಜೂ. 29ಕ್ಕೆ ವಿಶ್ವಾದ್ಯಂತ ಸಿನಿಮಾ ರಿಲೀಸ್ ಆಗಲಿದೆ. ಇದೀಗ ಸ್ಪೈ ಟ್ರೇಲರ್ ರಿಲೀಸ್ ಆಗಿದ್ದು, ಸಿನಿಮಾ ಮೇಲಿನ ನಿರೀಕ್ಷೆಯನ್ನು ಹೆಚ್ಚಿಸಿದೆ.

ಭಾರತದ ಟಾಪ್ ಸೀಕ್ರೆಟ್ ರಹಸ್ಯಗಳು, ವಿಮಾನ ಅಪಘಾತದಲ್ಲಿ ನೇತಾಜಿ ಸುಭಾಷ್ ಚಂದ್ರಬೋಸ್ ಸಾವನ್ನಪ್ಪಿದ್ದಾರೆ ಎನ್ನಲಾದ ವಿಚಾರಗಳನ್ನು ಬೆನ್ನತ್ತುವ ಗೂಢಾಚಾರಿ ಪಾತ್ರದಲ್ಲಿ ನಟ ನಿಖಿಲ್ ಸಿದ್ದಾರ್ಥ್ ಅಭಿನಯಿಸಿದ್ದಾರೆ. ಐಶ್ವರ್ಯಾ ಮೆನನ್ ನಾಯಕಿಯಾಗಿ, ಸಾನ್ಯಾ ಠಾಕೂರ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಸ್ಪೆಷಲ್ ರೋಲ್​ನಲ್ಲಿ ಬಾಹುಬಲಿ ಬಲ್ಲಾಳದೇವ ರಾಣಾ ದಗ್ಗುಭಾಟಿ ಕೂಡ ಕಾಣಿಸಿಕೊಂಡಿದ್ದಾರೆ. ಅಭಿನವ್ ಗೋಮತಮ್, ಮಕರಂದ್ ದೇಶಪಾಂಡೆ, ನಿತಿನ್ ಮೆಹ್ತಾ, ರವಿವರ್ಮ, ಕೃಷ್ಣ ತೇಜ, ಪ್ರಿಶಾ ಸಿಂಗ್, ಸೋನಿಯಾ ನರೇಶ್ ಮತ್ತು ಇತರರು ತಾರಾಬಳಗದಲ್ಲಿದ್ದಾರೆ.

ಖ್ಯಾತ ನಿರ್ದೇಶಕ ಹಾಗೂ ಸಂಕಲನಕಾರರೂ ಆಗಿರುವ ಗ್ಯಾರಿ ಬಿ ಹೆಚ್ 'ಸ್ಪೈ' ಸಿನಿಮಾಗೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ಹಿಟ್ ಸಿನಿಮಾಗಳ ನಿರ್ಮಾಪಕ ಕೆ.ರಾಜಶೇಖರ್ ರೆಡ್ಡಿ ಈಡಿ ಎಂಟರ್‌ಟೈನ್‌ಮೆಂಟ್‌ನಡಿ ಚರಣ್ ರಾಜ್ ಉಪ್ಪಲಪತಿ ಜೊತೆಗೂಡಿ ಅದ್ಧೂರಿಯಾಗಿ ಸ್ಪೈ ಚಿತ್ರ ನಿರ್ಮಿಸಿದ್ದಾರೆ.

ಇದನ್ನೂ ಓದಿ:ಮದುವೆಯಾಗದಿದ್ದರೆ ಹೆಣ್ಣಿಗೆ ಅಸ್ತಿತ್ವ ಇಲ್ವೇ?: ಹೆಣ್ಣುಮಕ್ಕಳ ಮೂಕವೇದನೆಗೆ ದನಿಯಾದ 'ಅಮೃತಧಾರೆ'!

ತೆಲುಗು, ಕನ್ನಡ, ತಮಿಳು, ಹಿಂದಿ ಹಾಗೂ ಮಲಯಾಳಂ ಭಾಷೆಗಳಲ್ಲಿ‌ ಮೂಡಿ ಬರುತ್ತಿರುವ ಈ ಚಿತ್ರಕ್ಕೆ ರಾಜಶೇಖರ್ ರೆಡ್ಡಿ ನಿರ್ಮಾಣದ ಜೊತೆಗೆ ಕಥೆ ಕೂಡ ಬರೆದಿದ್ದಾರೆ. ಗ್ಯಾರಿ ಬಿ.ಎಚ್. ನಿರ್ದೇಶನದ ಜೊತೆಗೆ ಸಂಕಲನದ ಹೊಣೆ ಹೊತ್ತಿದ್ದಾರೆ. ಜೂನಿಯನ್ ಅಮರು ಸೂರಿಸೆಟ್ಟಿ ಛಾಯಾಗ್ರಹಣ, ಶ್ರೀಚರಣ್ ಪಕಳ ಸಂಗೀತ, ಅರ್ಜುನ್ ಸೂರಿಸೆಟ್ಟಿ ಕಲಾ ನಿರ್ದೇಶನ 'ಸ್ಪೈ' ಸಿನಿಮಾಕ್ಕಿದೆ.

ಇದನ್ನೂ ಓದಿ:ಆಲಿಯಾ ಭಟ್ ಜೊತೆಗಿನ ಮುದ್ದಾದ ಫೋಟೋ ಹಂಚಿಕೊಂಡ ಹಿರಿಯ ನಟ ಧರ್ಮೇಂದ್ರ

ಆ್ಯಕ್ಷನ್ ಪ್ಯಾಕ್ಡ್ ಕಥಾಹಂದರವುಳ್ಳ ಈ ಸ್ಪೈ ಸಿನಿಮಾ ಈ ಸಾಲಿನ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾಗಳಲ್ಲೊಂದು. 2022ರಲ್ಲಿ ಬಿಡುಗಡೆ ಅದ 'ಕಾರ್ತಿಕೇಯ 2' ಬಳಿಕ ನಟ ನಿಖಿಲ್ ಸಿದ್ದಾರ್ಥ್ ಅಭಿನಯಿಸಿಸುತ್ತಿರುವ ಚಿತ್ರವಿದು. ಕೆಲ ದಿನಗಳ ಹಿಂದಷ್ಟೇ ಇದರ ಟೀಸರ್ ದೆಹಲಿಯ ರಾಜ್ ಪಥ್​​ನಲ್ಲಿರುವ ಸುಭಾಷ್ ಚಂದ್ರಬೋಸ್ ಪುತ್ಥಳಿ ಎದುರು ರಿಲೀಸ್​ ಮಾಡಲಾಗಿತ್ತು. ಟೀಸರ್, ಟ್ರೇಲರ್​​​​ ಪ್ರೇಕ್ಷಕರ ಕುತೂಹಲ ಹೆಚ್ಚಿಸಿದೆ. ನಿಖಿಲ್ ಸಿದ್ದಾರ್ಥ್ ಈವರೆಗೆ ಕಾಣಿಸಿಕೊಳ್ಳದಂತ ಡಿಫ್ರೆಂಟ್​​ ಗೆಟಪ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ABOUT THE AUTHOR

...view details