ಬಳ್ಳಾರಿ: ಈ ವರ್ಷದ ಬಹು ನಿರೀಕ್ಷಿತ ಸಿನಿಮಾಗಳ ಪೈಕಿ ಸ್ಮೈಲ್ ಶ್ರೀನು ನಿರ್ದೇಶನದ 'ಓ ಮೈ ಲವ್' ಚಿತ್ರವು ಮುಂಚೂಣಿಯಲ್ಲಿದೆ. ಇಗಾಗಲೇ ಹಾಡು, ಟೀಸರ್, ಹಾಗೂ ಟ್ರೇಲರ್ ಮೂಲಕ ಸದ್ದು ಮಾಡುತ್ತಿರುವ ಈ ಸಿನಿಮಾಕ್ಕೆ ನಿರೀಕ್ಷೆ ಹೆಚ್ಚುತ್ತಲೇ ಇದೆ ಎಂದು ಸುದ್ದಿಗೋಷ್ಠಿಯಲ್ಲಿ ಚಿತ್ರತಂಡ ತಿಳಿಸಿದೆ.
ಅಕ್ಷಿತ್ ಶಶಿಕುಮಾರ್ (ಸುಪ್ರೀಂ ಹೀರೋ ಶಶಿಕುಮಾರ್ ಇವರ ಪುತ್ರ) ಹಾಗೂ ಕೀರ್ತಿಕಲ್ಕೆರಿ ಪ್ರಮುಖ ಭೂಮಿಕೆಯಲ್ಲಿರುವ ಈ ಸಿನಿಮಾ ಜುಲೈ 15ರಂದು ರಾಜ್ಯಾದ್ಯಂತ ದೊಡ್ಡ ಮಟ್ಟದಲ್ಲಿ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ತಿಳಿಸಿದೆ.
ಸೆಂಚುರಿ ಸ್ಟಾರ್ ಶಿವರಾಜ್‌ಕುಮಾರ್, ರಿಯಲ್ ಸ್ಟಾರ್ ಉಪೇಂದ್ರ, ತೆಲುಗು ಚಿತ್ರರಂಗದ ಸಿನಿಮಾಬ್ರಹ್ಮ ಕೆ.ರಾಘವೇಂದ್ರರಾವ್, ಮಾಜಿ ಪೊಲೀಸ್ ಆಯುಕ್ತ, ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಸಚಿವ ಬಿ. ಶ್ರೀರಾಮುಲು ಚಿತ್ರದ ಹಾಡು ಹಾಗೂ ಟೀಸರ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡಕ್ಕೆ ಸಾಥ್ ನೀಡಿದ್ದಾರೆ.