ಕರ್ನಾಟಕ

karnataka

ETV Bharat / entertainment

ಪ್ಯಾನ್ ಇಂಡಿಯಾ ಸಿನಿಮಾ‌ ಹನು-ಮಾನ್ ಚಿತ್ರದ ಟೀಸರ್ ರಿವೀಲ್‌ - ರಿಲೀಸ್ ಡೇಟ್ ಅನೌನ್ಸ್

ಚಿತ್ರದಲ್ಲಿ ನಾಯಕಿಯಾಗಿ ಅಮೃತಾ ಐಯ್ಯರ್ ನಟಿಸಿದ್ದಾರೆ. ಬಿಡುಗಡೆಯಾಗಿರುವ ಟೀಸರ್ ಸಖತ್ ಪ್ರಾಮಿಸಿಂಗ್ ಆಗಿದ್ದು, ನಾಯಕ ನಟ ತೇಜ ಸಜ್ಜಾ ಲುಕ್, ಚಿತ್ರದ ಮೇಕಿಂಗ್, ಕ್ಯಾಮರಾ ವರ್ಕ್, ಮ್ಯೂಸಿಕ್ ಎಲ್ಲವೂ ಗಮನ ಸೆಳೆಯುತ್ತಿದೆ.

Pan India Movie Hanu Maan Teaser Revealed
ಪ್ಯಾನ್ ಇಂಡಿಯಾ ಸಿನಿಮಾ‌ ಹನು-ಮಾನ್ ಚಿತ್ರದ ಟೀಸರ್ ರಿವೀಲ್‌

By

Published : Nov 21, 2022, 7:55 PM IST

ಸಖತ್ ಥ್ರಿಲ್ಲಿಂಗ್ ಆಗಿರುವ ಬಿಗ್ ಬಜೆಟ್ ಪ್ಯಾನ್ ಇಂಡಿಯಾ ಚಿತ್ರ "ಹನು-ಮಾನ್" ಟೀಸರ್ ಬಿಡುಗಡೆಯಾಗಿದ್ದು, ಪ್ರಶಾಂತ್ ವರ್ಮಾ ಆ್ಯಕ್ಷನ್ ಕಟ್ ಹೇಳಿದ್ದಾರೆ. ತೇಜ ಸಜ್ಜಾ ನಾಯಕನಾಗಿ ನಟಿಸುತ್ತಿದ್ದು, ಪಂಚಭಾಷೆಯಲ್ಲಿ ಟೀಸರ್ ತೆರೆ ಕಂಡಿದೆ.

ನಿರ್ದೇಶಕ ಪ್ರಶಾಂತ್ ವರ್ಮಾ ಭಾರತದ ಮೊದಲ ಸೂಪರ್ ಹೀರೋ ‘ಹನು-ಮಾನ್’ ಬಗ್ಗೆ ಕಥೆ ಹೆಣೆದು ಪ್ಯಾನ್ ಇಂಡಿಯಾ ನಿರ್ದೇಶಕನಾಗಿ ಹೊರ ಹೊಮ್ಮುತ್ತಿದ್ದಾರೆ. ಚಿತ್ರದಲ್ಲಿ ನಾಯಕ ನಟನಾಗಿ ಪ್ರತಿಭಾವಂತ ನಟ ತೇಜ ಸಜ್ಜಾ ನಟಿಸುತ್ತಿದ್ದು, ಚಿತ್ರಕ್ಕಾಗಿ ಭರ್ಜರಿ ತಯಾರಿ ನಡೆಸಿರೋದು ಟೀಸರ್ ಝಲಕ್ ನೋಡಿದಾಗಲೇ ತಿಳಿದು ಬರುತ್ತಿದೆ. ಚಿತ್ರದಲ್ಲಿ ನಾಯಕಿಯಾಗಿ ಅಮೃತಾ ಐಯ್ಯರ್ ನಟಿಸಿದ್ದಾರೆ. ಬಿಡುಗಡೆಯಾಗಿರುವ ಟೀಸರ್ ಸಖತ್ ಪ್ರಾಮಿಸಿಂಗ್ ಆಗಿದ್ದು, ನಾಯಕ ನಟ ತೇಜ ಸಜ್ಜಾ ಲುಕ್, ಚಿತ್ರದ ಮೇಕಿಂಗ್, ಕ್ಯಾಮರಾ ವರ್ಕ್, ಮ್ಯೂಸಿಕ್ ಎಲ್ಲವೂ ಗಮನ ಸೆಳೆಯುತ್ತಿವೆ.

ವರಲಕ್ಷಿ ಶರತ್ ಕುಮಾರ್, ವಿನಯ್ ರೈ, ರಾಜ್ ದೀಪಕ್ ಶೆಟ್ಟಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಗೆಟಪ್ ಶ್ರೀನು, ಸತ್ಯ ಒಳಗೊಂಡ ಸ್ಟಾರ್ ಕಲಾವಿದರ ತಾರಾಬಳಗ ಚಿತ್ರದಲ್ಲಿದೆ. ಯುವ ಹಾಗೂ ಪ್ರತಿಭಾವಂತ ಸಂಗೀತ ನಿರ್ದೇಶಕರಾದ ಗೌರಹರಿ, ಅನುದೀಪ್ ದೇವ್ ಮತ್ತು ಕೃಷ್ಣ ಸೌರಭ್ ಸಂಗೀತ ನಿರ್ದೇಶನ, ದಶರಧಿ ಶಿವೇಂದ್ರ ಕ್ಯಾಮರಾ ವರ್ಕ್, ಎಸ್. ಬಿ ರಾಜು ತಲರಿ ಸಂಕಲನ ಚಿತ್ರಕ್ಕಿದೆ.

ಕೆ.ನಿರಂಜನ್ ರೆಡ್ಡಿ ಪ್ರೈಮ್ ಶೋ ಎಂಟಟೈನ್ಮೆಂಟ್ ಬ್ಯಾನರ್​ನಡಿ ಅದ್ಧೂರಿಯಾಗಿ, ಬಿಗ್ ಬಜೆಟ್​ನಲ್ಲಿ ‘ಹನು-ಮಾನ್’ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಚಿತ್ರೀಕರಣ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿರುವ ಸಿನಿಮಾ ತಂಡ ಸದ್ಯದಲ್ಲೇ ರಿಲೀಸ್ ಡೇಟ್ ಅನೌನ್ಸ್ ಮಾಡಲಿದೆ.

ಇದನ್ನೂ ಓದಿ:ಹೊಸ ಪ್ರತಿಭೆಗಳು ಹೊತ್ತು ತಂದ ಸಿರಿ ಲಂಬೋದರ ವಿವಾಹ ಟೀಸರ್​ಗೆ ರಮೇಶ್ ಅರವಿಂದ್ ಫಿದಾ

ABOUT THE AUTHOR

...view details