ದಿವಗಂತ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅಭಿಮಾನಿಗಳ, ಕನ್ನಡ ಚಿತ್ರರಂಗದ ಬಹು ನಿರೀಕ್ಷಿತ ಗಂಧದ ಗುಡಿ ಟ್ರೈಲರ್ ಇಂದು ಬಿಡುಗಡೆ ಆಗಿದ್ದು, ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಎಲ್ಲೆಡೆ ಅಪ್ಪು ಸ್ಮರಣೆ ಮಾಡಲಾಗುತ್ತಿದೆ. ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ಸಹ ಮೆಚ್ಚುಗೆ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ.
''ಅಪ್ಪು ಜಗತ್ತಿನಾದ್ಯಂತ ಲಕ್ಷಾಂತರ ಹೃದಯಗಳಲ್ಲಿ ನೆಲೆಸಿದ್ದಾರೆ. ಅವರು ತೇಜಸ್ಸಿನ ಪ್ರತೀಕ, ಚೈತನ್ಯದ ಚಿಲುಮೆ ಮತ್ತು ಸರಿಸಾಟಿಯಿಲ್ಲದ ಪ್ರತಿಭಾವಂತರಾಗಿದ್ದರು. ಗಂಧದ ಗುಡಿ ಪ್ರಕೃತಿ ಮಾತೆಗೆ, ಕರ್ನಾಟಕದ ನೈಸರ್ಗಿಕ ಸೌಂದರ್ಯ ಹಾಗು ಪರಿಸರ ಸಂರಕ್ಷಣೆಗೆ ಸಲ್ಲಿಸಲಾದ ಗೌರವ. ಈ ಪ್ರಯತ್ನಕ್ಕೆ ನನ್ನ ಶುಭ ಹಾರೈಕೆಗಳು'' ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ.