ಬೆಂಗಳೂರು:ನಗರದ ದಿ ಪಾರ್ಕ್ ಹೋಟೆಲ್ ಮೇಲೆ ಹಲಸೂರು ಪೊಲೀಸರು ನಡೆಸಿದ ದಾಳಿ ಪ್ರಕರಣದಲ್ಲಿ ಬಾಲಿವುಡ್ ನಟ ಹಾಗೂ ಡಿ.ಜೆ ಸಿದ್ಧಾಂತ್ ಕಪೂರ್ಗೆ ಇನ್ನೂ ಸಂಕಷ್ಟ ತಪ್ಪಿಲ್ಲ. ಪ್ರಕರಣದಲ್ಲಿ ಬಂಧಿತನಾಗಿ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ನಟನಿಗೆ ಮತ್ತೆ ನೋಟಿಸ್ ನೀಡಲು ಪೊಲೀಸರು ಸಿದ್ಧತೆ ಮಾಡಿಕೊಂಡಿದ್ದಾರೆ.
ಜೂನ್ 13ರ ರಾತ್ರಿ ಡ್ರಗ್ಸ್ ಪಾರ್ಟಿ ನಡೆಯುತ್ತಿದೆ ಎಂಬ ಮಾಹಿತಿ ಮೇರೆಗೆ ಹಲಸೂರಿನ ಹೋಟೆಲ್ ಮೇಲೆ ಪೊಲೀಸರು ದಾಳಿ ನಡೆಸಿದ್ದರು. ಈ ಸಂದರ್ಭದಲ್ಲಿ ಪಾರ್ಟಿಯಲ್ಲಿದ್ದ ಬಾಲಿವುಡ್‌ನ ಹಿರಿಯ ನಟ ಶಕ್ತಿ ಕಪೂರ್ ಪುತ್ರ ಸಿದ್ಧಾಂತ್ ಕಪೂರ್‌ನನ್ನು ಬಂಧಿಸಲಾಗಿತ್ತು. ವೈದ್ಯಕೀಯ ಪರೀಕ್ಷೆಯಲ್ಲಿ ಸಿದ್ಧಾಂತ್ ಮಾದಕ ಸೇವಿಸಿರುವುದು ದೃಢಪಟ್ಟಿದ್ದು ನಂತರ ಬಂಧಿಸಲಾಗಿದೆ. ಬಳಿಕ ವಿಚಾರಣೆಯ ವೇಳೆ, "ಅಂದು ತಾನು ನೇರವಾಗಿ ಮಾದಕ ಸೇವಿಸಿಲ್ಲ, ನೀರಿನಲ್ಲಿ ಯಾರೋ ಮಾದಕವಸ್ತು ಬೆರೆಸಿ ಕೊಟ್ಟಿರಬಹುದು" ಎಂದು ಸಿದ್ಧಾಂತ್ ತಿಳಿಸಿದ್ದರು.
ಇದನ್ನೂ ಓದಿ: ಡ್ರಗ್ಸ್ ಪಾರ್ಟಿ: ಜಾಮೀನಿನ ಮೇಲೆ ಹೊರ ಬಂದ ಶಕ್ತಿ ಕಪೂರ್ ಮಗ ಸಿದ್ದಾಂತ್ ಕಪೂರ್