ಪ್ರಭಾಸ್, ನಟಿ ಕೃತಿ ಸನೋನ್ ಅಭಿನಯದ, ಓಂ ರಾವತ್ ನಿರ್ದೇಶನದ ಬಹು ನಿರೀಕ್ಷಿತ ಆದಿಪುರುಷ್ ಸಿನಿಮಾದ ಟೀಸರ್ ಶೀಘ್ರದಲ್ಲೇ ಬಿಡುಗಡೆಯಾಗಲಿದೆ. ನವರಾತ್ರಿ ಹಬ್ಬದ ಸಮಯದಲ್ಲಿ ಅಯೋಧ್ಯೆಯಲ್ಲಿ ನಡೆಯಲಿರುವ ಅದ್ಧೂರಿ ಸಮಾರಂಭದಲ್ಲಿ ಆದಿ ಪುರುಷ್ ಟೀಸರ್ ಬಿಡುಗಡೆ ಮಾಡಲು ಚಿತ್ರ ತಯಾರಕರು ಸಜ್ಜಾಗಿದ್ದಾರೆ. ವರದಿಗಳ ಪ್ರಕಾರ, ಪ್ರಭಾಸ್, ಕೃತಿ ಸನೋನ್, ಸನ್ನಿ ಸಿಂಗ್ ಮತ್ತು ಓಂ ರಾವುತ್ ಗ್ರ್ಯಾಂಡ್ ಈವೆಂಟ್‌ನಲ್ಲಿ ಆದಿಪುರುಷ್ ಟೀಸರ್ ಅನ್ನು ಬಿಡುಗಡೆ ಮಾಡಲಿದ್ದಾರೆ.
ಅಯೋಧ್ಯೆಯಲ್ಲಿ ನಡೆಯುವ ರಾವಣ ದಹನ ಕಾರ್ಯಕ್ರಮದಲ್ಲಿ ಪ್ರಭಾಸ್ ಭಾಗಿಯಾಗಿ, ಟೀಸರ್ ರಿಲೀಸ್ ಮಾಡಲಿದ್ದಾರೆ. ಶ್ರೀರಾಮ ಜನ್ಮಭೂಮಿ ಆಗಿರುವ ಅಯೋಧ್ಯೆಯ ಮೈದಾನವೊಂದರಲ್ಲಿ ನಡೆಯುವ ಅದ್ದೂರಿ ಕಾರ್ಯಕ್ರಮದಲ್ಲೇ ಆದಿಪುರುಷ್ ಟೀಸರ್ ಲಾಂಚ್ ಕಾರ್ಯಕ್ರಮ ನಡೆಯಲಿದೆ ಎಂಬ ಮಾಹಿತಿ ಸಿಕ್ಕಿದೆ.
ಇದು ಭಾರತೀಯ ಮಹಾಕಾವ್ಯದ ರೂಪಾಂತರವಾಗಿದೆ. ಇದು ಕೆಟ್ಟದ್ದರ ಮೇಲೆ ಒಳ್ಳೆಯದರ ವಿಜಯದ ಸುತ್ತ ಸುತ್ತುತ್ತದೆ. ರೆಟ್ರೋಫೈಲ್ಸ್‌ನ ಭೂಷಣ್ ಕುಮಾರ್, ಕ್ರಿಶನ್ ಕುಮಾರ್, ಓಂ ರಾವುತ್, ಪ್ರಸಾದ್ ಸುತಾರ್ ಹಾಗೂ ರಾಜೇಶ್ ನಾಯರ್ ಈ ಸಿನಿಮಾವನ್ನು 400 ಕೋಟಿ ಬಜೆಟ್ನಲ್ಲಿ ನಿರ್ಮಿಸುತ್ತಿದ್ದಾರೆ.