ಸ್ಯಾಂಡಲ್ವುಡ್ನಲ್ಲಿ ಮಮ್ಮಿ, ದೇವಕಿ ಚಿತ್ರಗಳ ಮೂಲಕ ಭರವಸೆ ಮೂಡಿಸಿರೋ ನಿರ್ದೇಶಕ ಲೋಹಿತ್ ಹೆಚ್. ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಜತೆ ಹೊಸ ಚಿತ್ರವನ್ನು ಮಾಡೋದಾಗಿ ಘೋಷಿಸಿದ್ದಾರೆ. ಪ್ರಜ್ವಲ್ ದೇವರಾಜ್ ಅವರ ಮಾಫಿಯಾ ಸಿನಿಮಾಗೆ ಲೋಹಿತ್ ಅವರೇ ಆ್ಯಕ್ಷನ್ ಕಟ್ ಹೇಳಿದ್ದು, ಈ ಸಿನಿಮಾ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ. ಇದರ ನಡುವೆಯೇ ಮತ್ತೊಂದು ಹೊಸ ಸಿನಿಮಾವನ್ನು ಈ ಜೋಡಿ ಘೋಷಿಸಿದೆ.
ಡೈರೆಕ್ಟರ್ ಲೋಹಿತ್ ಹೇಳಿದ ಕಥೆಯ ಎಳೆ ತುಂಬಾ ಇಷ್ಟ ಆಯ್ತು. ಅವರ ಕೆಲಸದ ಶೈಲಿ ಹಾಗೂ ಸಾಮರ್ಥ್ಯವನ್ನು ಹತ್ತಿರದಿಂದ ಅರಿತಿರುವುದರಿಂದ ಮತ್ತೊಂದು ಸಿನಿಮಾವನ್ನು ಅವರೊಂದಿಗೆ ಮಾಡಲು ಕೈ ಜೋಡಿಸಿದ್ದೇನೆ ಎಂದು ನಟ ಪ್ರಜ್ವಲ್ ದೇವರಾಜ್ ತಿಳಿಸಿದ್ದಾರೆ.
ಸದ್ಯ ಸಿನಿಮಾದ ಸ್ಕ್ರಿಪ್ಟ್ ಪೂಜೆ ನಡೆದಿದ್ದು, ಡಿಸೆಂಬರ್ನಲ್ಲಿ ಚಿತ್ರದ ಕೆಲಸಗಳು ಆರಂಭವಾಗಲಿವೆ. ಇದೊಂದು ಹಾರರ್ ಥ್ರಿಲ್ಲರ್ ಒಳಗೊಂಡ ಟೈಂ ಲೂಪ್ ಸಿನಿಮಾವಾಗಿದೆ. ಸದ್ಯದಲ್ಲೇ ಸಿನಿಮಾ ಟೈಟಲ್, ತಾರಾಬಳಗ ಸೇರಿ ಎಲ್ಲದರ ಬಗ್ಗೆ ಹೆಚ್ಚಿನ ಮಾಹಿತಿ ಹಂಚಿಕೊಳ್ಳೋದಾಗಿ ನಿರ್ದೇಶಕರು ಹೇಳಿದ್ದಾರೆ.