ಕರ್ನಾಟಕ

karnataka

ETV Bharat / entertainment

ಸುದೀಪ್​ ಪಕ್ಷ ಸೇರ್ಪಡೆ ಬಗ್ಗೆ ಬಿಜೆಪಿ ಹರಡುತ್ತಿರುವುದು ಸುಳ್ಳು ಸುದ್ದಿ.. ಪ್ರಕಾಶ್​ ರಾಜ್ ಟ್ವೀಟ್​​

ಅಭಿನಯ ಚಕ್ರವರ್ತಿ ಸುದೀಪ್ ಬಿಜೆಪಿ ಸೇರ್ಪಡೆ ಸುಳ್ಳು ಎಂದು ನಟ ಪ್ರಕಾಶ್​ ರಾಜ್​ ಟ್ವೀಟ್ ಮಾಡಿದ್ದಾರೆ.

Sudeep political entry news
ಸುದೀಪ್ ಬಿಜೆಪಿ ಸೇರ್ಪಡೆ ಸಾಧ್ಯತೆ ಬಗ್ಗೆ ಪ್ರಕಾಶ್​ ರಾಜ್​ ಟ್ವೀಟ್

By

Published : Apr 5, 2023, 12:06 PM IST

Updated : Apr 5, 2023, 2:10 PM IST

ಕರ್ನಾಟಕ ವಿಧಾನಸಭೆ ಚುನಾವಣೆಗೆ ಭರದ ಸಿದ್ಧತೆ ನಡೆಯುತ್ತಿದೆ. ಪ್ರತಿಪಕ್ಷಗಳು ಸಹ ಈ ಬಾರಿ ಗೆಲ್ಲಲೇಬೇಕೆಂದು ಪಣ ತೊಟ್ಟಿವೆ. ಇದಕ್ಕೆ ತಮ್ಮದೇ ಆದ ರೀತಿಯಲ್ಲಿ ಮತದಾರರನ್ನು ಸೆಳೆಯುವ ಪ್ರಯತ್ನವನ್ನು ರಾಜಕೀಯ ಪಕ್ಷಗಳು ಮಾಡುತ್ತಿವೆ.

ಗೆಲ್ಲುವ ಉದ್ದೇಶದೊಂದಿಗೆ ಪ್ರಸಿದ್ಧ ನಟರನ್ನೂ ಸಹ ಬಿಜೆಪಿ ಸೆಳೆಯತೊಡಗಿದೆ. ಕನ್ನಡ ಚಿತ್ರರಂಗದ ಅಭಿನಯ ಚಕ್ರವರ್ತಿ ಎಂದೇ ಖ್ಯಾತರಾದ ಕಿಚ್ಚ ಸುದೀಪ್ ಅವರನ್ನು ಮನವೊಲಿಸುವ ಕಾರ್ಯಗಳು ಬಹಳ ಜೋರಾಗಿಯೇ ನಡೆಯುತ್ತಿವೆ. ರಾಜ್ಯದಲ್ಲಿ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಸಂಪಾದಿಸಿರುವ ನಟ ಸುದೀಪ್ ಅವರನ್ನು ಪಕ್ಷಕ್ಕೆ ಸೇರಿಸಿಕೊಂಡು ಚುನಾವಣೆ ಪ್ರಚಾರದಲ್ಲಿ ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ಬಿಜೆಪಿ ಉದ್ದೇಶಿಸಿದೆ. ಸುದೀಪ್ ಭಾರತೀಯ ಜನತಾ ಪಕ್ಷ ಸೇರ್ಪಡೆ ಕುರಿತ ಚರ್ಚೆ ನಡೆಯುತ್ತಿರುವುದು ನಿಜ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡ ಇಂದು ಬೆಳಗ್ಗೆ ಸ್ಪಷ್ಟಪಡಿಸಿದ್ದಾರೆ.

ಪ್ರಕಾಶ್​ ರಾಜ್​​ ಟ್ವೀಟ್:ಈ ಬಗ್ಗೆ ನಟ ಪ್ರಕಾಶ್​ ರಾಜ್​​ ಟ್ವೀಟ್ ಮೂಲಕ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ''ಕರ್ನಾಟಕದಲ್ಲಿ ಸೋಲುವ ಭಯದಲ್ಲಿ, ಭ್ರಷ್ಟ ಬಿಜೆಪಿ ಹರಡುತ್ತಿರುವ ಸುಳ್ಳು ಸುದ್ದಿ ಎಂದು ನಾನು ನಂಬುತ್ತೇನೆ, ನಮ್ಮ ಕಿಚ್ಚ ಮಾರಿಕೊಳ್ಳುವವರಲ್ಲ'' ಎಂದು ಟ್ವಿಟ್ ಮಾಡಿದ್ದಾರೆ. ಈ ಟ್ವೀಟ್​ಗೆ ಜನಸಾಮಾನ್ಯರು ಮಿಶ್ರ ಪ್ರತಿಕ್ರಿಯೆ ವ್ಯಕ್ತಪಡಿಸುತ್ತಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳು ಈ ಬಗ್ಗೆ ಕಾಮೆಂಟ್​ ಮೂಲಕ ತಮ್ಮ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. 'ಮಾರಿಕೊಳ್ಳುವವರಲ್ಲ, ಈ ರೀತಿ ಹೇಳಬೇಡಿ, ಒಂದು ವೇಳೆ ಅವರು ಪಕ್ಷಕ್ಕೆ ಸೇರಿಕೊಂಡರೂ, ಕೆಲವರಿಗೆ ಇಷ್ಟ ಆಗಿಲ್ಲವಾದ್ರೂ ಅದು ಅವರ ವೈಯಕ್ತಿಕ ನಿರ್ಧಾರ. ಅವರನ್ನು ಅವರು ಮಾರಿಕೊಂಡ ಹಾಗೆ ಅಲ್ಲ' ಎಂದು ಓರ್ವರು ಕಾಮೆಂಟ್​ ಮಾಡಿದ್ದಾರೆ. ರಾಜ ಯಾವತ್ತೂ ರಾಜಕೀಯ ಮಾಡಲ್ಲ ಎಂದು ಮತ್ತೋರ್ವರು ರೀಟ್ವೀಟ್ ಮಾಡಿದ್ದಾರೆ. ನಿಮ್ಮ ಮಾತು ನಿಜ ಸರ್, ಸುದೀಪ್ ಅಣ್ಣ ರಾಜಕೀಯಕ್ಕೆ ಹೋಗಲ್ಲ, ಇದು ಸುಳ್ಳು ಸುದ್ದಿ ಎಂದು ಹೇಳಿದ್ದಾರೆ.

ಇದನ್ನೂ ಓದಿ:ನಟ ಸುದೀಪ್ ಬಿಜೆಪಿ ಸೇರ್ಪಡೆ ಕುರಿತು ಪಕ್ಷದಲ್ಲಿ ಚರ್ಚೆಯಾಗುತ್ತಿದೆ: ಸಿಎಂ ಬೊಮ್ಮಾಯಿ

ಸಿಎಂ ಬೊಮ್ಮಾಯಿ ಹೇಳಿದ್ದಿಷ್ಟು: ಸುದೀಪ್ ಅವರನ್ನು ನಮ್ಮ ಪಕ್ಷಕ್ಕೆ ಸೇರಿಸಿಕೊಳ್ಳುವ ಬಗ್ಗೆ ಚರ್ಚೆ ನಡೆಯುತ್ತಿರುವುದು ಸತ್ಯ ಎಂದು ಇಂದು ಬೆಳಗ್ಗೆ ಸಿಎಂ ಬೊಮ್ಮಾಯಿ ಆರ್.ಟಿ ನಗರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ ಸ್ಪಷ್ಟಪಡಿಸಿದ್ದಾರೆ. ಕೇವಲ ಚರ್ಚೆ ಅಷ್ಟೇ ಎಂದು ಕೂಡ ತಿಳಿಸಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಹೆಚ್ಚಿನ ವಿಷಯಗಳನ್ನು ಮಾಧ್ಯಮಗೋಷ್ಟಿಯಲ್ಲಿ ತಿಳಿಸುತ್ತೇನೆ ಎಂದರು.

ಇದನ್ನೂ ಓದಿ:ಕಿಚ್ಚ ಇಂದು ರಾಜಕೀಯ ಎಂಟ್ರಿ ವಿಚಾರ: ಸುದೀಪ್ ಬಿಜೆಪಿ ಸೇರ್ಪಡೆ ಬಗ್ಗೆ ಘೋಷಣೆ ಸಾಧ್ಯತೆ?

ನಟ ಸುದೀಪ್​ಗೆ ಬೆದರಿಕೆ:ಇನ್ನೂ ಸುದೀಪ್​ ಅವರಿಗೆ ಬೆದರಿಕೆ ಬಂದಿರುವ ಪ್ರಕರಣ ಸಹ ಸಾಕಷ್ಟು ಸದ್ದು ಮಾಡುತ್ತಿದೆ. ವಿಷಯ ತಿಳಿದ ಅಭಿಮಾನಿಗಳು ಆಘಾತಕ್ಕೊಳಗಾಗಿದ್ದಾರೆ. ಈ ಸಂಬಂಧ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿದೆ. ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ.

Last Updated : Apr 5, 2023, 2:10 PM IST

ABOUT THE AUTHOR

...view details