ಕರ್ನಾಟಕ

karnataka

ETV Bharat / entertainment

ಪ್ರವೀಣ್​ ತೇಜ್ 'ಜಿಗರ್' ಸಿನಿಮಾದ​ ರೊಮ್ಯಾಂಟಿಕ್​ ಸಾಂಗ್​ ರಿಲೀಸ್​​; ನೀವೂ ಕೇಳಿ.. - ಈಟಿವಿ ಭಾರತ ಕನ್ನಡ

Jigar movie romantic song released: ಪ್ರವೀಣ್ ತೇಜ್ ನಟನೆಯ 'ಜಿಗರ್' ಸಿನಿಮಾದ ರೊಮ್ಯಾಂಟಿಕ್​ ಸಾಂಗ್​ ಬಿಡುಗಡೆಯಾಗಿದೆ.

Praveen Tej starrer Jigar movie romantic song released
ಜಿಗರ್

By ETV Bharat Karnataka Team

Published : Sep 9, 2023, 3:47 PM IST

ಸ್ಯಾಂಡಲ್‌ವುಡ್ ನಟ ಪ್ರವೀಣ್ ತೇಜ್ ಮತ್ತೊಂದು ವಿಭಿನ್ನ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬರಲು ಸಜ್ಜಾಗಿದ್ದಾರೆ. ಈಗಾಗಲೇ ತರಹೇವಾರಿ ಪಾತ್ರಗಳ ಮೂಲಕ ಅಭಿಮಾನಿಗಳನ್ನು ರಂಜಿಸಿರುವ ಪ್ರವೀಣ್ ಈ ಬಾರಿ ಮಾಸ್ ಲುಕ್‌ನಲ್ಲಿ ಎಂಟ್ರಿ ಕೊಡುತ್ತಿದ್ದಾರೆ. ಅಂದ ಹಾಗೆ ಮೊದಲ ಬಾರಿಗೆ ಪ್ರವೀಣ್ 'ಜಿಗರ್' ಎನ್ನುವ ಆ್ಯಕ್ಷನ್ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬರುತ್ತಿದ್ದಾರೆ. ಈಗಾಗಲೇ ಶೂಟಿಂಗ್ ಮುಗಿಸಿ ರಿಲೀಸ್‌ಗೆ ರೆಡಿಯಾಗಿರುವ 'ಜಿಗರ್' ಸದ್ಯ ಹಾಡಿನ ಮೂಲಕ ಆಮಂತ್ರಣ ನೀಡಿದೆ.

ಹಾಡು ಬಿಡುಗಡೆ: 'ಜಿಗರ್' ಸಿನಿಮಾದ ಮೊದಲ ಹಾಡು ರಿಲೀಸ್ ಆಗಿದೆ. ಮಾಸ್ ಸಿನಿಮಾ ಆಗಿದ್ದರೂ ಸದ್ಯ ರೊಮ್ಯಾಂಟಿಕ್​ ಹಾಡಿನ ಮೂಲಕ ಮೋಡಿ ಮಾಡುತ್ತಿದ್ದಾರೆ ಪ್ರವೀಣ್. ಅಂದಹಾಗೆ ಸದ್ಯ ಬಿಡುಗಡೆಯಾಗಿರುವ ಈ ಹಾಡು ಗಾನಪ್ರಿಯರ ಹಾಟ್ ಫೇವರಿಟ್ ಸಿಂಗರ್ ಸಂಚಿತ್ ಹೆಗ್ಡೆ ಕಂಠದಲ್ಲಿ ಮೂಡಿ ಬಂದಿದೆ. ಸಂಚಿತ್ ಹಾಡಿರುವ ಬಹುತೇಕ ಹಾಡುಗಳು ಸೂಪರ್ ಹಿಟ್​. ಜಿಗರ್ ಸಿನಿಮಾದ ಈ ರೊಮ್ಯಾಂಟಿಕ್ ಹಾಡು ಕೂಡ ಸಂಚಿತ್ ಧ್ವನಿಯಲ್ಲಿ ಅಷ್ಟೇ ಅದ್ಭುತವಾಗಿ ಮೂಡಿ ಬಂದಿದೆ.

ಪ್ರವೀಣ್​ ತೇಜ್

'ಸುಮ್ಮನೆ...' ಎನ್ನುವ ಸಾಲುಗಳಿಂದ ಪ್ರಾರಂಭವಾಗುವ ಈ ಹಾಡಿಗೆ ರಿತ್ವಿಕ್ ಮುರಳೀಧರ ಸಂಗೀತ ಸಂಯೋಜನೆ ಮಾಡಿದ್ದಾರೆ. ಈ ಸುಂದರ ಹಾಡಿಗೆ ಅರ್ಜುನ್ ಲೂಯಿಸ್ ಸಾಹಿತ್ಯವಿದೆ. ಈಗಾಗಲೇ ಚಮಕ್, ವೆನಿಲ್ಲ, ಸಖತ್ ಸೇರಿದಂತೆ ಅನೇಕ ಸಿನಿಮಾಗಳಿಗೆ ಹಾಡು ಬರೆದಿರುವ ಅರ್ಜುನ್ ಇದೀಗ ಜಿಗರ್ ಸಿನಿಮಾಗೂ ಹಾಡು ಬರೆದಿದ್ದಾರೆ. ಈ ಸುಂದರ ಹಾಡನ್ನು ಕರಾವಳಿ ಸುತ್ತಮುತ್ತ ಚಿತ್ರೀಕರಿಸಲಾಗಿದೆ. ಮಲ್ಫೆ, ಮರುವಂತೆ, ಮಂಗಳೂರು ಸುತ್ತಮುತ್ತ ಸೆರೆಹಿಡಿಯಲಾಗಿದೆ. ಸಿನಿಮಾ ಕೂಡ ಇದೇ ಬ್ಯಾಕ್‌ಡ್ರಾಪ್‌ನಲ್ಲಿ ಇರಲಿದೆ.

ಇದನ್ನೂ ಓದಿ:ರೂಪೇಶ್​ ಶೆಟ್ಟಿ ನಟನೆಯ 'ಸರ್ಕಸ್'​ ನೋಡಿಲ್ವಾ? ಹಾಗಿದ್ರೆ ನಾಳೆ ಮನೆಯಲ್ಲೇ ಕುಳಿತು ಸಿನಿಮಾ ವೀಕ್ಷಿಸಿ..

ಅಂದಹಾಗೆ ಪ್ರವೀಣ್ ತೇಜ್ ಅವರನ್ನು ಈ ಬಾರಿ ಆ್ಯಕ್ಷನ್ ಅವತಾರದಲ್ಲಿ ಅಭಿಮಾನಿಗಳ ಮುಂದೆ ಕರೆತರುತ್ತಿದ್ದಾರೆ ನಿರ್ದೇಶಕ ಸೂರಿ ಕುಂದರ್. ಈಗಾಗಲೇ ಸ್ಯಾಂಡಲ್‌ವುಡ್‌ನಲ್ಲಿ ಅನೇಕ ಸಿನಿಮಾಗಳಿಗೆ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದ ಸೂರಿ 'ಜಿಗರ್' ಮೂಲಕ ಪೂರ್ಣ ಪ್ರಮಾಣದ ನಿರ್ದೇಶಕರಾಗಿ ಗುರುತಿಸಿಕೊಳ್ಳಲಿದ್ದಾರೆ. ತನ್ನ ಮೊದಲ ಸಿನಿಮಾದ ಮೇಲೆ ಸೂರಿ ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಯುಕೆ ಪ್ರೊಡಕ್ಷನ್ ಅಡಿ ಸಿನಿಮಾ ನಿರ್ಮಾಣವಾಗಿದ್ದು, ಪೂಜಾ ವಸಂತ್ ಚಿತ್ರಕ್ಕೆ ಬಂಡವಾಳ ಹಾಕಿದ್ದಾರೆ. ಶಿವಸೇನಾ ಕ್ಯಾಮೆರಾ ವರ್ಕ್ ಚಿತ್ರಕ್ಕಿದೆ. ಇನ್ನು ಈ ಸಿನಿಮಾದಲ್ಲಿ ಪ್ರವೀಣ್‌ಗೆ ನಾಯಕಿಯಾಗಿ ವಿಜಯಶ್ರೀ ಕಾಣಿಸಿಕೊಂಡಿದ್ದಾರೆ. ವಿಜಯಶ್ರೀ ಅವರಿಗೂ ಇದು ಮೊದಲ ಸಿನಿಮಾ.

ಪ್ರವೀಣ್​ ತೇಜ್ ಮತ್ತು ವಿಜಯಶ್ರೀ

ನಟ ಪ್ರವೀಣ್ ಮೊದಲ ಬಾರಿಗೆ ಮಾಸ್ ಅವತಾರದಲ್ಲಿ ಕಾಣಿಸಿಕೊಂಡಿದ್ದು ಅಭಿಮಾನಿಗಳು ಹೇಗೆ ಸ್ವೀಕರಿಸುತ್ತಾರೆ ಎಂದು ಎದುರು ನೋಡುತ್ತಿದ್ದಾರೆ. ಕೊನೆಯದಾಗಿ ಪ್ರವೀಣ್ 'ಹೊಂದಿಸಿ ಬರೆಯಿರಿ' ಸಿನಿಮಾ ಮೂಲಕ ಸಿನಿಮಾ ಪ್ರೇಕ್ಷಕರ ಮುಂದೆ ಬಂದಿದ್ದರು. ಇದೀಗ 'ಜಿಗರ್' ಮೂಲಕ ಎಂಟ್ರಿಕೊಡುತ್ತಿದ್ದಾರೆ. ಸದ್ಯ ಹಾಡಿನ ಮೂಲಕ ಅಭಿಮಾನಿಗಳನ್ನು ಸೆಳೆಯುತ್ತಿರುವ 'ಜಿಗರ್' ಸಿನಿಮಾ ಹೇಗಿರಲಿದೆ ಎಂಬ ಕುತೂಹಲ ಹೆಚ್ಚಿದೆ.

ಇದನ್ನೂ ಓದಿ:Jawan: ಬಾಕ್ಸ್​ ಆಫೀಸ್​ನಲ್ಲಿ 'ಜವಾನ್​' ಅಬ್ಬರ: ಅಬ್ಬಬ್ಬಾ.. ಎರಡು ದಿನದಲ್ಲಿ ಇಷ್ಟೊಂದು ಕಲೆಕ್ಷನ್​

ABOUT THE AUTHOR

...view details