ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅಭಿನಯದ ಗಂಧದ ಗುಡಿ ಚಿತ್ರವನ್ನ ಅದ್ಧೂರಿಯಾಗಿ ಬಿಡುಗಡೆ ಮಾಡಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಅಕ್ಟೋಬರ್ 28 ರಂದು ವಿಶ್ವಾದ್ಯಂತ ಸಿನಿಮಾ ಬಿಡುಗಡೆ ಆಗಲಿದೆ. ಈ ಹಿನ್ನೆಲೆ ಪುನೀತ್ ಪರ್ವ ಹೆಸರಲ್ಲಿ ಅಕ್ಟೋಬರ್ 21 ರಂದು ಪ್ರೀ ರಿಲೀಸ್ ಕಾರ್ಯಕ್ರಮ ಬಹಳ ಅದ್ಧೂರಿಯಾಗಿ ಮಾಡಲು, ಪವರ್ ಸ್ಟಾರ್ ಪತ್ನಿ ಅಶ್ವಿನಿ ಪುನೀತ್ ರಾಜ್‍ಕುಮಾರ್ ಹಾಗೂ ರಾಜವಂಶದ ಅಭಿಮಾನಿಗಳು ನಿರ್ಧರಿಸಿದ್ದಾರೆ.
ಪುನೀತ್ ಪರ್ವ ಕಾರ್ಯಕ್ರಮಕ್ಕೆ ಆಗಮಿಸುತ್ತಿರುವ ಅತಿಥಿಗಳು ಪುನೀತ್ ಪರ್ವ ಕಾರ್ಯಕ್ರಮಕ್ಕೆ ಆಗಮಿಸುತ್ತಿರುವ ಅತಿಥಿಗಳು ಗಂಧದ ಗುಡಿಯ ಪ್ರೀ ರಿಲೀಸ್ ಕಾರ್ಯಕ್ರಮಕ್ಕೆ ಭಾರತೀಯ ಚಿತ್ರರಂಗದ ದೊಡ್ಡ ದೊಡ್ಡ ಸ್ಟಾರ್ಗಳು ಬರ್ತಾ ಇದ್ದಾರೆ. ಸದ್ಯಕ್ಕೆ ಗಂಧದ ಗುಡಿ ಪ್ರೀ ರಿಲೀಸ್ ಕಾರ್ಯಕ್ರಮಕ್ಕೆ ಬಾಲಿವುಡ್ ನಟ ಅಮಿತಾಬ್ ಬಚ್ಚನ್, ರಜನಿಕಾಂತ್ ವಿಡಿಯೋ ಮೂಲಕ ಚಿತ್ರಕ್ಕೆ ಸಾಥ್ ನೀಡಲಿದ್ದಾರೆ. ಇದರ ಜೊತೆಗೆ ತಮಿಳು ನಟ ಕಮಲ್ ಹಾಸನ್, ನಟ ವಿಜಯ್, ಪ್ರಭುದೇವ, ಬಾಲಯ್ಯ, ರಾಣಾ ದಗ್ಗುಬಾಟಿ ಬರುವುದು ಕನ್ಫರ್ಮ್ ಆಗಿದೆ.
ಪುನೀತ್ ಪರ್ವ ಕಾರ್ಯಕ್ರಮಕ್ಕೆ ಆಗಮಿಸುತ್ತಿರುವ ಅತಿಥಿಗಳು ಪುನೀತ್ ಪರ್ವ ಕಾರ್ಯಕ್ರಮಕ್ಕೆ ಆಗಮಿಸುತ್ತಿರುವ ಅತಿಥಿಗಳು ಇದನ್ನೂ ಓದಿ:ಪುನೀತ್ ಪರ್ವ ಕಾರ್ಯಕ್ರಮಕ್ಕೆ ರಾಜ್ ಕುಟುಂಬದಿಂದ ಸಿಎಂಗೆ ಆಹ್ವಾನ
ಇನ್ನು ಕನ್ನಡ ಚಿತ್ರರಂಗದಿಂದ ರವಿಚಂದ್ರನ್, ಸುದೀಪ್ , ಯಶ್, ದರ್ಶನ್, ಉಪೇಂದ್ರ, ಧ್ರುವ ಸರ್ಜಾ, ಸಾಧು ಕೋಕಿಲ, ಡಾರ್ಲಿಂಗ್ ಕೃಷ್ಣ, ಧನಂಜಯ್, ನಟಿಯಾರದ ಸುಮಲತಾ ಅಂಬರೀಶ್, ರಮ್ಯಾ, ರಚಿತಾ ರಾಮ್, ಆಶಿಕಾ ರಂಗನಾಥ್ , ನಿಶ್ವಿಕಾ ನಾಯ್ಡು, ಮಾನ್ವಿತಾ ಕಾಮತ್ ನಿರ್ಮಾಪಕರಾದ ಜಯಣ್ಣ, ವಿಜಯ್ ಕಿರಂಗದೂರ್, ಕೆ.ಪಿ ಶ್ರೀಕಾಂತ್ ಸೇರಿದಂತೆ ಇಡೀ ಕನ್ನಡ ಚಿತ್ರರಂಗದ ನಿರ್ದೇಶಕರು, ನಿರ್ಮಾಪಕರು, ತಂತ್ರಜ್ಞಾನರು ಹಾಗು ಇಡೀ ರಾಜ್ ಕುಮಾರ್ ಕುಟುಂಬ ಈ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದ್ದಾರೆ. ಅಕಸ್ಮಾತ್ ಅಮಿತಾಬ್ ಬಚ್ಚನ್ ಕಾರ್ಯಕ್ರಮಕ್ಕೆ ಬರೋದಕ್ಕೆ ಸಾಧ್ಯವಾಗದಿದ್ದಲ್ಲಿ ವಿಡಿಯೋ ಮೂಲಕ ಅಪ್ಪು ಬಗೆಗಿನ ಒಡನಾಟದ ಬಗ್ಗೆ ಮಾತನಾಡಲಿದ್ದಾರೆ ಅಂತಾ ಹೇಳಲಾಗುತ್ತಿದೆ.
ಪುನೀತ್ ಪರ್ವ ಕಾರ್ಯಕ್ರಮಕ್ಕೆ ಆಗಮಿಸುತ್ತಿರುವ ಅತಿಥಿಗಳು ಇನ್ನು ಪುನೀತ್ ರಾಜ್‍ಕುಮಾರ್ ಒಬ್ಬ ಸ್ಟಾರ್ ನಟನಾಗಿರದೇ ಸಾಮಾಜಿಕ ಕಳಕಳಿ, ಪರಿಸರದ ಬಗ್ಗೆ ಕಾಳಜಿ, ಕನ್ನಡ ಸಿನಿಮಾ ಇಂಡಸ್ಟ್ರಿ ದೊಡ್ಡ ಮಟ್ಟದಲ್ಲಿ ಬೆಳೆಸಬೇಕು ಎಂಬ ಕನಸು ಕಂಡಿದ್ದರು. ಅದರಲ್ಲಿ ಈ ಗಂಧದ ಗುಡಿಯು ಒಂದು. ಕರ್ನಾಟಕದ ಅರಣ್ಯ ಸಂಪತ್ತು, ವನ್ಯಜೀವಿಗಳ ಬದುಕು ಸೇರಿದಂತೆ ಅನೇಕ ಸಂಗತಿಗಳನ್ನು ಗಂಧದ ಗುಡಿ ಚಿತ್ರದಲ್ಲಿ ಚಿತ್ರೀಕರಣ ಮಾಡಲಾಗಿದೆ. ವೈಲ್ಡ್ ಫೋಟೋಗ್ರಾಫರ್ ಅಮೋಘ ವರ್ಷ ಸಹಯೋಗದಲ್ಲಿ ಈ ಚಿತ್ರವನ್ನ ಚಿತ್ರೀಕರಣ ಮಾಡಲಾಗಿದೆ. ಈ ಪ್ರಾಜೆಕ್ಟ್ ಮೇಲೆ ಪುನೀತ್ ರಾಜ್‍ಕುಮಾರ್ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದರು. ತುಂಬ ಕಾಳಜಿ ವಹಿಸಿ ಒಂದು ವರ್ಷಕ್ಕೂ ಹೆಚ್ಚು ಕಾಲ ಶೂಟಿಂಗ್ ಮಾಡಿದರು. ಆದರೆ, ಕೆಲಸಗಳು ಪೂರ್ಣಗೊಳ್ಳುವುದಕ್ಕೂ ಮುನ್ನವೇ ಪುನೀತ್ ಇಹಲೋಕ ತ್ಯಜಿಸಿದ್ದು, ಮಾತ್ರ ಚಿತ್ರರಂಗ ಮಾತ್ರವಲ್ಲದೇ ಅವರ ಕುಟುಂಬಕ್ಕೆ ತುಂಬಲಾರದ ನಷ್ಟವಾಗಿದೆ.
ಪುನೀತ್ ಪರ್ವ ಕಾರ್ಯಕ್ರಮಕ್ಕೆ ಆಗಮಿಸುತ್ತಿರುವ ಅತಿಥಿಗಳು ಪುನೀತ್ ಪರ್ವ ಕಾರ್ಯಕ್ರಮಕ್ಕೆ ಆಗಮಿಸುತ್ತಿರುವ ಅತಿಥಿಗಳು ಇದನ್ನೂ ಓದಿ:ಮನೋರಂಜನೆ ಜೊತೆಗೆ ಸಾಮಾಜಿಕ ಸಂದೇಶ ಸಾರಿದ್ದ ಅಪ್ಪು ಅಭಿನಯದ ಸ್ಮರಣೆ
ರಾಜವಂಶದ ಅಭಿಮಾನಿಗಳು ಹೇಳುವ ಹಾಗೆ ಈ ಕಾರ್ಯಕ್ರಮಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ರಾಜ್ ಕುಮಾರ್, ಶಿವರಾಜ್ ಕುಮಾರ್, ಪುನೀತ್ ರಾಜ್‍ಕುಮಾರ್ ಅಭಿಮಾನಿಗಳು ಸೇರಿ ಬರೋಬ್ಬರಿ 5 ಲಕ್ಷ ಜನ ಸಾಕ್ಷಿಯಾಗಲಿದ್ದಾರೆ. ಜೊತೆಗೆ ಗಂಧದ ಗುಡಿ ಚಿತ್ರಕ್ಕೆ ಕರ್ನಾಟಕದಲ್ಲಿ ತೆರಿಗೆ ವಿನಾಯಿತಿ ನೀಡಬೇಕು ಎಂದು ರಾಜವಂಶದ ಅಭಿಮಾನಿಗಳು ಒತ್ತಾಯಿಸುತ್ತಿದ್ದಾರೆ.
ಇದನ್ನೂ ಓದಿ:ಗಂಧದ ಗುಡಿ ಟ್ರೈಲರ್ ವೀಕ್ಷಿಸಿದ ಕನ್ನಡ ಸಿನಿತಾರೆಯರಿಂದ ಬಹುಪರಾಕ್..
ಒಟ್ಟಿನಲ್ಲಿ ಪುನೀತ್ ರಾಜ್‍ಕುಮಾರ್ ಇಂದು ಭೌತಿಕವಾಗಿ ಇಲ್ಲದೇ ಇರಬಹುದು. ಆದರೆ, ಅವರ ಸಾಮಾಜಿಕ ಕೆಲಸ ಮತ್ತು ಸಿನಿಮಾಗಳು, ಯಾರಿಗೂ ಗೊತ್ತಿಲ್ಲದೇ ಮಾಡಿರುವ ಸಹಾಯ ಎಂದಿಗೂ ಅಭಿಮಾನಿಗಳ ಹೃದಯದಲ್ಲಿ ಅಪ್ಪು ಜೀವಂತವಾಗಿರುವಂತೆ ಮನೆ ಮಾಡಿದೆ.
ಪುನೀತ್ ಪರ್ವ ಕಾರ್ಯಕ್ರಮಕ್ಕೆ ಆಗಮಿಸುತ್ತಿರುವ ಅತಿಥಿಗಳು