ಕರ್ನಾಟಕ

karnataka

ETV Bharat / entertainment

ಬೆಂಗಳೂರು ವಿಶ್ವವಿದ್ಯಾಲಯ ಪಠ್ಯದಲ್ಲಿ ಪುನೀತ್ ರಾಜ್​​ಕುಮಾರ್ ವಿಷಯ

ಬೆಂಗಳೂರು ವಿಶ್ವವಿದ್ಯಾಲಯದ ಪಠ್ಯದಲ್ಲಿ ಪುನೀತ್ ರಾಜ್​​ಕುಮಾರ್ ವಿಷಯ ಸೇರ್ಪಡೆ ಮಾಡಲಾಗಿದೆ.

Puneeth Rajkumar
ಪಠ್ಯದಲ್ಲಿ ಪುನೀತ್ ರಾಜಕುಮಾರ್ ವಿಷಯ

By

Published : Dec 22, 2022, 4:25 PM IST

ಬೆಂಗಳೂರು: ದಿವಂಗತ ಪುನೀತ್ ರಾಜ್​​ಕುಮಾರ್ ಅವರ ಜೀವನ ಕುರಿತ ವಿಷಯವನ್ನು ಬೆಂಗಳೂರು ವಿಶ್ವವಿದ್ಯಾಲಯದ ಪಠ್ಯದಲ್ಲಿ ಸೇರ್ಪಡೆ ಮಾಡಲಾಗಿದೆ. ಬೆಂಗಳೂರು ವಿಶ್ವವಿದ್ಯಾನಿಲಯವು ಈ ವಿಚಾರವಾಗಿ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿ ಖಚಿತಪಡಿಸಿದೆ.

ಪವರ್ ಸ್ಟಾರ್ ಪುನೀತ್ ರಾಜ್​​ಕುಮಾರ್ ಜೀವನವನ್ನು ಪಠ್ಯಪುಸ್ತಕಗಳಲ್ಲಿ ಅಳವಡಿಸಿಕೊಳ್ಳಬೇಕು ಎನ್ನುವುದು ಅವರ ಅಭಿಮಾನಿಗಳ ಆಸೆಯಾಗಿತ್ತು. ಅಪ್ಪು ಅಭಿಮಾನಿ ಸಂಘಗಳು ಸರ್ಕಾರಕ್ಕೂ ಪತ್ರ ಬರೆದಿದ್ದವು. ಶಿಕ್ಷಣ ಮಂತ್ರಿಗಳನ್ನು ಭೇಟಿ ಮಾಡಿ ಮನವಿಯನ್ನೂ ಸಲ್ಲಿಸಿದ್ದವು. ಇದೀಗ ಬೆಂಗಳೂರು ವಿಶ್ವವಿದ್ಯಾಲಯವು ತನ್ನ ಬಿಕಾಂ ಪದವಿಯ ಮೂರನೇ ಸೆಮಿಸ್ಟರ್ ಕನ್ನಡ ಭಾಷಾ ಪಠ್ಯ 'ವಾಣಿಜ್ಯ ಕನ್ನಡ 3'ರಲ್ಲಿ ಪುನೀತ್ ಅವರ ಜೀವನದ ಆಯ್ದ ಭಾಗವನ್ನು ಅಳವಡಿಸಿಕೊಳ್ಳಲಾಗಿದೆ.

ಪತ್ರಕರ್ತ ಡಾ. ಶರಣು ಹುಲ್ಲೂರು ಬರೆದ, ಸಾವನ್ನಾ ಪ್ರಕಾಶನ ಹೊರ ತಂದಿರುವ ನೀನೇ ರಾಜಕುಮಾರ ಕೃತಿಯ ಒಂದು ಅಧ್ಯಾಯವಾದ 'ಲೋಹಿತ್ ಎಂಬ ಮರಿಮುದ್ದ' ಭಾಗವನ್ನು ಪಠ್ಯದಲ್ಲಿ ಬಳಸಿಕೊಂಡಿದೆ. ಡಾ. ಮುನಿಯಪ್ಪ ಈ ಪಠ್ಯಪುಸ್ತಕದ ಪ್ರಧಾನ ಸಂಪಾದಕರಾಗಿದ್ದು, ಡಾ. ಅಮರೇಂದ್ರ ಶೆಟ್ಟಿ ಆರ್, ಡಾ.ಕ.ನಿಂ. ಹೊಯ್ಸಳಾದಿತ್ಯ, ಡಾ.ಶಿವರಾಜ ಬಿ.ಇ ಹಾಗೂ ಡಾ. ರಘುನಂದನ್ ಬಿ.ಆರ್ ಅವರು ಪಠ್ಯದ ಸಂಪಾದಕರಾಗಿದ್ದಾರೆ.

ಇದನ್ನೂ ಓದಿ:ಪುನೀತ್‌ ಬಯೋಗ್ರಫಿ 'ನೀನೇ ರಾಜಕುಮಾರ' 4ನೇ ಆವೃತ್ತಿ ಬಿಡುಗಡೆ

ಇತ್ತೀಚೆಗಷ್ಟೇ 'ನೀನೇ ರಾಜಕುಮಾರ' ಪುಸ್ತಕದ ನಾಲ್ಕನೇ ಆವೃತ್ತಿಯನ್ನು ಪುನೀತ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್​ಕುಮಾರ್ ಬಿಡುಗಡೆ ಮಾಡಿದ್ದರು. ಈ ವರ್ಷ ಕನ್ನಡದಲ್ಲಿ ಅತಿ ಹೆಚ್ಚು ಮಾರಾಟ ಕಂಡ ಬಯೋಗ್ರಫಿ ಎನ್ನುವ ದಾಖಲೆಗೂ ಈ ಪುಸ್ತಕ ಪಾತ್ರವಾಗಿದೆ. ಸತತವಾಗಿ ಹಲವು ಪುಸ್ತಕ ಮಳಿಗೆಗಳಲ್ಲಿ ಮತ್ತು ಆನ್ ಲೈಲ್​​ನಲ್ಲಿ ಮಾರಾಟ ವಿಷಯದಲ್ಲಿ ಟಾಪ್ ಪಟ್ಟಿಯಲ್ಲಿತ್ತು. ಇದೀಗ ಪಠ್ಯಕ್ಕೆ ಕೃತಿಯ ಭಾಗವನ್ನು ಅಳವಡಿಸಿಕೊಳ್ಳಲಾಗಿದೆ.

ಇದನ್ನೂ ಓದಿ:ನಿಮ್ಮ ಪ್ರೀತಿಯ ಅಪ್ಪುಗೆಗೆ ಈ ದಾಸ ಸದಾ ಚಿರಋಣಿ: ನಟ ದರ್ಶನ್​

ABOUT THE AUTHOR

...view details