ಕರ್ನಾಟಕ

karnataka

ETV Bharat / entertainment

ಬಹುನಿರೀಕ್ಷಿತ 'ಚಂದ್ರಮುಖಿ 2' ಸಿನಿಮಾದ ಫಸ್ಟ್​ ಲುಕ್​ ಬಿಡುಗಡೆಗೊಳಿಸಿದ ನಟ ರಜನಿಕಾಂತ್​ - ಈಟಿವಿ ಭಾರತ ಕನ್ನಡ

ಚಂದ್ರಮುಖಿ 2 ಸಿನಿಮಾದ ಫಸ್ಟ್​ ಲುಕ್ ಅನ್ನು ಸೂಪರ್​ ಸ್ಟಾರ್​ ರಜನಿಕಾಂತ್ ರಿವೀಲ್​ ಮಾಡಿ ಚಿತ್ರತಂಡಕ್ಕೆ ಶುಭಹಾರೈಸಿದ್ದಾರೆ.

chandramukhi 2
ಚಂದ್ರಮುಖಿ 2

By

Published : Jul 31, 2023, 8:05 PM IST

ಖ್ಯಾತ ನಿರ್ದೇಶಕ, ನಟ ಹಾಗೂ ಸ್ಟಾರ್ ಕೊರಿಯೋಗ್ರಾಫರ್ ರಾಘವ್ ಲಾರೆನ್ಸ್ ಹಾಗೂ ಬಾಲಿವುಡ್ ಲೇಡಿ ಡಾನ್​ ಕಂಗನಾ ರಣಾವತ್ ಅಭಿನಯದ ಚಂದ್ರಮುಖಿ 2 ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಗಣೇಶ ಚತುರ್ಥಿಯ ಸಲುವಾಗಿ ಬೆಳ್ಳಿತೆರೆಗೆ ಎಂಟ್ರಿ ಕೊಡಲಿರುವ ಈ ಚಿತ್ರದ ಫಸ್ಟ್​ ಲುಕ್​ ರಿಲೀಸ್​ ಆಗಿದೆ. ಕಾಲಿವುಡ್​ ಸೂಪರ್​ ಸ್ಟಾರ್​ ರಜನಿಕಾಂತ್​ ಫಸ್ಟ್​ ಲುಕ್​ ರಿವೀಲ್​ ಮಾಡಿ ಚಿತ್ರತಂಡಕ್ಕೆ ಶುಭಹಾರೈಸಿದ್ದಾರೆ.

ಈ ಬಗ್ಗೆ ಸೋಷಿಯಲ್​ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿರುವ ರಾಘವ್ ಲಾರೆನ್ಸ್, "ವೆಟ್ಟೈಯನ್ ರಾಜನ ಫಸ್ಟ್ ಲುಕ್ ಬಿಡುಗಡೆ ಮಾಡಿದ ತಲೈವರ್ ಸೂಪರ್ ಸ್ಟಾರ್ ರಜನಿಕಾಂತ್ ನಿಮಗೆ ಧನ್ಯವಾದಗಳು. ನಿಮ್ಮ ಆಶೀರ್ವಾದ ನಮ್ಮ ಮೇಲೆ ಇರಲಿ. ಗಣೇಶ್ ಹಬ್ಬಕ್ಕೆ ತಮಿಳು, ತೆಲುಗು, ಕನ್ನಡ, ಹಿಂದಿ ಹಾಗೂ ಮಲಯಾಳಂ ಭಾಷೆಯಲ್ಲಿ ಚಿತ್ರ ತೆರೆಗೆ ಬರಲಿದೆ" ಎಂದು ಬರೆದುಕೊಂಡಿದ್ದಾರೆ.

ಹಿರಿಯ ನಿರ್ದೇಶಕ ಪಿ ವಾಸು ನಿರ್ದೇಶನದಲ್ಲಿ ಮೂಡಿ ಬಂದಿರುವ ಚಂದ್ರಮುಖಿ 2 ಸಿನಿಮಾದಲ್ಲಿ ರಾಘವ್ ಲಾರೆನ್ಸ್ ವೆಟ್ಟೈಯನ್ ರಾಜನಾಗಿ ಕಾಣಿಸಿಕೊಂಡಿದ್ದಾರೆ. ಚಂದ್ರಮುಖಿಯಾಗಿ ಕಂಗನಾ ರಣಾವತ್​ ನಟಿಸಿದ್ದಾರೆ. 2005 ರಲ್ಲಿ ಬಿಡುಗಡೆಯಾಗಿದ್ದ ಕ್ಲಾಸಿಕ್ ಸಿನಿಮಾ ಚಂದ್ರಮುಖಿ ಬಾಕ್ಸಾಫೀಸ್​ನಲ್ಲಿ ಹೊಸ ದಾಖಲೆ ಸೃಷ್ಟಿಸಿತ್ತು. ಸೂಪರ್ ಸ್ಟಾರ್ ರಜನಿಕಾಂತ್ ನಾಯಕನಾಗಿ ನಟಿಸಿದ್ದ ಈ ಚಿತ್ರ ಹಿಟ್ ಲೀಸ್ಟ್ ಸೇರಿತ್ತು. 18 ವರ್ಷದ ಬಳಿಕ ಚಂದ್ರಮುಖಿ ಸೀಕ್ವೆಲ್ ಬರ್ತಿದ್ದು, ನಿರೀಕ್ಷೆಯನ್ನು ಹೆಚ್ಚಿಸಿದೆ.

ಇದನ್ನೂ ಓದಿ:Vamana: 'ವಾ..ವಾ..ವಾಮನ' ಅಂತ ಮಾಸ್​ ಎಂಟ್ರಿ ಕೊಟ್ಟ ಶೋಕ್ದಾರ್ ಧನ್ವೀರ್

ರಾಘವ್​ ಲಾರೆನ್ಸ್​, ಕಂಗನಾ ರಣಾವತ್​ ಅಲ್ಲದೇ ಖ್ಯಾತ ಹಾಸ್ಯ ವಡಿವೇಲು, ಲಕ್ಷ್ಮೀ ಮೆನನ್, ಮಹಿಮಾ ನಂಬಿಯಾರ್, ರಾಧಿಕಾ ಶರತ್ ಕುಮಾರ್, ಸುರೇಶ್ ಮೆನನ್ ಸೇರಿದಂತೆ ದೊಡ್ಡ ತಾರಾಬಳಗವಿದೆ. ಲೈಕಾ ಸಂಸ್ಥೆಯ ಒಡೆಯ ಸುಭಾಷ್ ಕರಣ್ ಬಹಳ ಅದ್ಧೂರಿಯಾಗಿ ಚಿತ್ರ ನಿರ್ಮಿಸಿದ್ದಾರೆ. ಪ್ರತಿಷ್ಠಿತ ಆಸ್ಕರ್​ ಪ್ರಶಸ್ತಿ ವಿಜೇತ ಎಂ.ಎಂ ಕೀರವಾಣಿ ಸಂಗೀತ ನಿರ್ದೇಶನ, ಆರ್ ಡಿ ರಾಜಶೇಖರ್ ಛಾಯಾಗ್ರಹಣ, ಅಂಥೋನಿ ಸಂಕಲನ ಚಿತ್ರಕ್ಕಿದೆ.

ಗಣೇಶ್​ ಚತುರ್ಥಿಯಂದು ರಿಲೀಸ್​: 18 ವರ್ಷದ ಬಳಿಕ ಚಂದ್ರಮುಖಿ ಪಾರ್ಟ್​ 2 ಬರುತ್ತಿದ್ದು, ಅಭಿಮಾನಿಗಳಲ್ಲಿ ನಿರೀಕ್ಷೆಯನ್ನು ಹೆಚ್ಚಿಸಿದೆ. ಚಿತ್ರವು ತೆಲುಗು, ತಮಿಳು, ಹಿಂದಿ, ಕನ್ನಡ ಹಾಗೂ ಮಲಯಾಳಂ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಸೆಪ್ಟಂಬರ್ 19 ರಂದು, ಗಣೇಶ್ ಚತುರ್ಥಿ ಸಲುವಾಗಿ ಸಿನಿಮಾ ತೆರೆ ಕಾಣಲಿದೆ. ಹಲವು ಸೂಪರ್​ ಹಿಟ್​ ಸಿನಿಮಾಗಳನ್ನು ನೀಡಿರುವ ನಿರ್ದೇಶಕ ಪಿ. ವಾಸು ಅವರ 65ನೇ ಚಿತ್ರವಿದು.

ಇದನ್ನೂ ಓದಿ:ಅಪ್ಪು ಹಾಗೂ ಪಾರ್ವತಮ್ಮ ಅವರನ್ನು ಫಾಲೋ ಮಾಡ್ತಿದ್ದೀನಿ: ಅಶ್ವಿನಿ ಪುನೀತ್ ರಾಜ್​ಕುಮಾರ್

ABOUT THE AUTHOR

...view details